
ವಿಶ್ವ ಕ್ರಿಕೆಟ್‌ನಲ್ಲಿ ಶ್ರೇಷ್ಠ ನಾಯಕನೆನಿಸಿದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ತನ್ನದೇ ಆದ ಛಾಪನ್ನೊತ್ತಿದ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಕ್ರಿಕೆಟ್ ಅಭಿಮಾನಿಗಳ ಪಾಲಿನ ಕಹಿ ಸುದ್ದಿ. ಈ ಹಿಂದೆ ಹಲವು ಬಾರಿ ಈ ಬಗ್ಗೆ ಸುದ್ದಿ ಹರಿದಾಡಿದ್ದರೂ ಇಂದು ಸ್ವತಃ ಧೋನಿಯೇ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
2004ರ ಡಿಸೆಂಬರ್ 23 ರಂದು ಮಹೇಂದ್ರ ಸಿಂಗ್ ಧೋನಿ ಮೊದಲ ಅಂತರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಸೌರವ್ ಗಂಗೂಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದರು. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ಧೋನಿ ಭಾರತಕ್ಕೆ ಟಿ20, ಏಕದಿನ, ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟಿರುವ ಸಾಧನೆ ಮಾಡಿದ್ದಾರೆ. ಈ ಮೂಲಕ ಶ್ರೇಷ್ಠ ನಾಯಕನೆನಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾವನ್ನು ದಶಕಗಳ ಕಾಲ ಮುನ್ನಡೆಸಿ, ತಂಡಕ್ಕಾಗಿ ಹದಿನಾರು ವರ್ಷ ಸೇವೆ ಸಲ್ಲಿಸಿರುವ ಧೋನಿಯ ಕೆಲ ಕುತೂಹಲಕಾರಿ ಮಾಹಿತಿಗಳು ನಿಮಗಾಗಿ