ಆಸೀಸ್ ವಿರುದ್ಧ ಏಕದಿನ, ನ್ಯೂಜಿಲ್ಯಾಂಡ್ ವಿರುದ್ಧ ಟಿ20ಗೆ ಭಾರತ ತಂಡ ಪ್ರಕಟ

ನವದೆಹಲಿ, ಡಿಸೆಂಬರ್ 24: ನಾಲ್ಕು ಪಂದ್ಯಗಳ ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಬಳಿಕದ ಏಕದಿನ ಸರಣಿಗೆ ಮತ್ತು ಮುಂಬರಲಿರುವ ನ್ಯೂಜಿಲ್ಯಾಂಡ್ ಪ್ರವಾಸದ ವೇಳೆಯ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಸೋಮವಾರ (ಡಿಸೆಂಬರ್ 24) ಪ್ರಕಟಿಸಿದೆ.
ಆಸ್ಟ್ರೇಲಿಯಾ ಟಿ20 ಸರಣಿಯಿಂದ ಕೈಬಿಡಲಾಗಿದ್ದ ಮಾಜಿ ನಾಯಕ ಎಂಎಸ್ ಧೋನಿ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ಮುಂಬರಲಿರುವ ಆಸೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಗಿಡಲಾಗಿದೆ.
ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂಎಸ್ ಧೋನಿ (ವಿಕೆ), ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ, ಖಲೀಲ್ ಅಹ್ಮದ್ ಮತ್ತು ಮೊಹಮ್ಮದ್ ಶಮಿ.
ನ್ಯೂಜಿಲ್ಯಾಂಡ್ ಟಿ20ಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪ ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂಎಸ್ ಧೋನಿ (ವಿಕೆ), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ ಮತ್ತು ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications