ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೋವಿಡ್ ಪರೀಕ್ಷೆ ನೆಗೆಟಿವ್: ಶೀಘ್ರದಲ್ಲೇ ಸಿಎಸ್‌ಕೆ ಶಿಬಿರಕ್ಕೆ ಎಂಎಸ್ ಧೋನಿ

Ms Dhoni Tested Negative For Covid-19 And Joining Training Camp In Chennai Soon

ಐಪಿಎಲ್ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಂಡದ ಶಿಬಿರದಲ್ಲಿ ಪಾಲ್ಗೊಳ್ಳುವ ಮುನ್ನ ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಿದ್ದರು. ಈ ಪರಿಕ್ಷೆಯ ವರದಿ ನೆಗೆಟಿವ್ ಬಂದಿದ್ದು ಶೀಘ್ರದಲ್ಲೇ ಚೆನ್ನೈ ಕ್ಯಾಂಪ್‌ನಲ್ಲಿ ಎಂಎಸ್ ಧೋನಿ ಪಾಲ್ಗೊಳ್ಳಲಿದ್ದಾರೆ.

ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಐಪಿಎಲ್ ಆವೃತ್ತಿ ನಡೆಸಲು ಎಲ್ಲಾ ಸಿದ್ಧತೆಗಳಾಗಿದ್ದು ಅದಕ್ಕೂ ಮುನ್ನ ಫ್ರಾಂಚೈಸಿಗಳು ತಂಡಗಳ ಶಿಬಿರಗಳನ್ನು ಆಯೋಜಿಸುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಶಿಬಿರವನ್ನು ಚೆನ್ನೈನಲ್ಲೇ ಆಯೋಜಿಸಲಾಗುತ್ತಿದ್ದು ಈ ಶುಬಿರದಲ್ಲಿ ಪಾಲ್ಗೊಳ್ಳುವ ಮುನ್ನ ಕೊರೊನಾ ಮುಕ್ತರಾಗಿರುವುದನ್ನು ದೃಢಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೋವಿಡ್-19 ಪರೀಕ್ಷೆಗೆ ಒಳಗಾದ ಸಿಎಸ್‌ಕೆ ನಾಯಕ ಎಂಎಸ್ ಧೋನಿಕೋವಿಡ್-19 ಪರೀಕ್ಷೆಗೆ ಒಳಗಾದ ಸಿಎಸ್‌ಕೆ ನಾಯಕ ಎಂಎಸ್ ಧೋನಿ

ಚೆನ್ನೈ ತಂಡ ಈ ಹಿಂದೆ ಏಪ್ರಿಲ್‌ನಲ್ಲಿ ಐಪಿಎಲ್ ಆಯೋಜನೆಯಾಗಿದ್ದಾಗ ಪೂರ್ವಭಾವಿ ಶಿಬಿರವನ್ನು ಮೊದಲೇ ನಡೆಸಿತ್ತು. ಎಂಎಸ್ ಧೋನಿ, ಸುರೇಶ್ ರೈನಾ ಸೇರಿದಂತೆ ಎಲ್ಲಾ ಚೆನ್ನೈ ತಂಡದ ಸದಸ್ಯರು ಕೂಡ ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಆದರೆ ಬಳಿಕ ಭಾರತದಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳಲು ಆರಂಭಿಸಿದ ಕಾರಣದಿಂದಾಗಿ ಐಪಿಎಲ್ ಮುಂದೂಡುವ ನಿರ್ಧಾರ ತೆಗೆದುಕೊಂಡಾಗ ಧೋನಿ ಸಹಿತ ಎಲ್ಲಾ ಆಟಗಾರರು ಮರಳಿ ತವರು ಸೇರಿಕೊಂಡಿದ್ದರು.

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ ರಾಂಚಿಯ ತಮ್ಮ ಫಾರ್ಮ್ ಹೌಸ್‌ನಲ್ಲಿ ಕುಟುಂಬದೊಂದಿಗೆ ಕಾಲಕಳೆದಿದ್ದರು. ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್‌ಗೆ ಒಳಗಾಗಿದ್ದರು. ಈ ಪರಿಕ್ಷೆಯ ವರದಿ ನೆಗೆಟಿವ್ ಬಂದಿರುವ ಕಾರಣ ಚೆನ್ನೈಗೆ ಪ್ರಯಾಣಿಸಲಿದ್ದಾರೆ.

ಬಿಸಿಸಿಐ ಸ್ಟ್ಯಾಂಡರ್ಡ್ ಆಪರೇಟಿಂಗ್ ಸಿಸ್ಟಮ್ ಪ್ರಕಾರ ಈ ಬಾರಿಯ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕೂಡ ಯುಎಇಗೆ ತೆರಳುವ ಮುನ್ನ ಎರಡು ಕೊರೊನಾ ಪರೀಕ್ಷಾ ವರದಿಗಳು ಕಡ್ಡಾಯವಾಗಿದೆ. ಈ ಪರೀಕ್ಷೆಯಲ್ಲಿ ಯಾವುದೇ ಆಟಗಾರ ಅಥವಾ ಸಿಬ್ಬಂದಿಯ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ 14 ದಿನಗಳ ಕ್ವಾರಂಟೈನ್ ಪೂರೈಸಿ ನೆಗೆಟಿವ್ ವರದಿಯೊಂದಿಗೆ ತಂಡವನ್ನು ಸೇರಿಕೊಳ್ಳಬಹುದಾಗಿದೆ.

Story first published: Friday, August 14, 2020, 9:50 [IST]
Other articles published on Aug 14, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X