ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಭಾರತೀಯ ತಂಡದಲ್ಲಿ ಎಂಎಸ್ ಧೋನಿ!

MS Dhoni to join as Team India’s Mentor in the T20 World Cup

ನವದೆಹಲಿ: ಮುಂಬರಲಿರುವ ಟಿ20 ವಿಶ್ವಕಪ್‌ಗಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) 15 ಜನರ ತಂಡ ಪ್ರಕಟಿಸಿದೆ. ವಿಶೇಷವೆಂದರೆ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ, ಬದಲಿಗೆ ಮೆಂಟರ್ ಆಗಿ ಧೋನಿ ಟಿ20 ವಿಶ್ವಕಪ್‌ ವೇಳೆ ತಂಡದ ಜೊತೆಗಿರಲಿದ್ದಾರೆ. 40ರ ಹರೆಯದ ಧೋನಿ 2020 ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿ ಘೋಷಿಸಿದ್ದರು.

ಚೆನ್ನೈ ಕೋಚ್ ವಿರುದ್ಧ 8 ಮಹಿಳಾ ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ದೂರು!ಚೆನ್ನೈ ಕೋಚ್ ವಿರುದ್ಧ 8 ಮಹಿಳಾ ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ದೂರು!

ವಿಶ್ವಕಪ್‌ 15 ಜನರ ತಂಡದಲ್ಲಿ ಎಂದಿನ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಮಾಜಿ ನಾಯಕ ಎಂಎಸ್ ಧೋನಿ ತಂಡಕ್ಕೆ ಮಾರ್ಗದರ್ಶಕರಾಗಿ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ. 2007ರ ವಿಶ್ವಕಪ್‌ ವಿಜೇತ ತಂಡಕ್ಕೆ ನಾಯಕರಾಗಿದ್ದ ಧೋನಿ ಮಹತ್ವವನ್ನರಿತು ಅವರನ್ನು ತಂಡಕ್ಕೆ ಮೆಂಟರ್ ಆಗಿ ಆರಿಸಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಖುಷಿ ನೀಡಿದೆ.

ಐಸಿಸಿ ಟ್ರೋಫಿಗಳು ಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದ ನಾಯಕ

ಐಸಿಸಿ ಟ್ರೋಫಿಗಳು ಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದ ನಾಯಕ

ಎಂಎಸ್ ಧೋನಿ ಟೀಮ್ ಇಂಡಿಯಾಕ್ಕೆ ನಾಯಕರಾಗಿದ್ದಾಗ ಭಾರತ ಬಹುತೇಕ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟ್ರೋಫಿಗಳನ್ನು ಗೆದ್ದಿದೆ. 2007ರಲ್ಲಿ ಟಿ20 ವಿಶ್ವಕಪ್, 2011ರಲ್ಲಿ ಏಕದಿನ ವಿಶ್ವಕಪ್‌, 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಹೀಗೆ ಎಲ್ಲಾ ಐಸಿಸಿ ಟ್ರೋಫಿಗಳನ್ನು ಭಾರತ ಗೆದ್ದಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ನಾಯಕ ಎಂಬ ಹಿರಿಮೆ ಮಾಹಿಗಿದೆ. ಅಷ್ಟೇ ಅಲ್ಲ, ಧೋನಿ ನಾಯಕತ್ವದಡಿಯಲ್ಲಿ ಅನೇಕ ಕ್ರಿಕೆಟಿಗರು ಬೆಳೆದು ನಿಂತಿದ್ದಿದೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಧೋನಿ ನಾಯಕರಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ಈ ಎಲ್ಲಾ ಕಾರಣಕ್ಕಾಗಿ ಈ ವಿಶ್ವಕಪ್‌ ವೇಳೆ ಬಿಸಿಸಿಐ ಧೋನಿ ಸಹಾಯವನ್ನು ತಂಡದಲ್ಲಿ ಪರಿಗಣಿಸಿದೆ. ಧೋನಿ ತಂಡ ಸೇರಿಕೊಂಡಿರುವುದರಿಂದ ಧೋನಿಯ ಕ್ರಿಕೆಟ್ ಜ್ಞಾನದ ಬೆಂಬಲ ತಂಡಕ್ಕೆ ಲಭಿಸುವುದರಲ್ಲಿ ಅನುಮಾನವಿಲ್ಲ.

ಟಿ20 ವಿಶ್ವಕಪ್‌ಗೆ ಭಾರತೀಯ 15 ಜನರ ತಂಡ

ಟಿ20 ವಿಶ್ವಕಪ್‌ಗೆ ಭಾರತೀಯ 15 ಜನರ ತಂಡ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಒಂದಿಷ್ಟು ಪ್ರಮುಖ ಆಟಗಾರರು ತಂಡದಲ್ಲಿ ಕಾಣಿಸಿಕೊಂಡಿಲ್ಲ. ಮುಖ್ಯವಾಗಿ ಬ್ಯಾಟ್ಸ್‌ಮನ್ ಶಿಖರ್ ಧವನ್, ಸ್ಪಿನ್ನರ್ ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಕೃನಾಲ್ ಪಾಂಡ್ಯ, ಸಂಜು ಸ್ಯಾಮ್ಸನ್ ಮೊದಲಾದ ಆಟಗಾರರು ಕಾಣಿಸಿಕೊಂಡಿಲ್ಲ.
ಭಾರತೀಯ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.

ಟಿ20 ವಿಶ್ವಕಪ್‌ ವಿವಿಧ ಗ್ರೂಪ್‌ಗಳ ಪ್ರಮುಖ ಮಾಹಿತಿ

ಟಿ20 ವಿಶ್ವಕಪ್‌ ವಿವಿಧ ಗ್ರೂಪ್‌ಗಳ ಪ್ರಮುಖ ಮಾಹಿತಿ

ಅಕ್ಟೋಬರ್‌ 17ರಂದು ಗ್ರೂಪ್‌ 'ಬಿ'ಯ ರೌಂಡ್‌ 1ರಲ್ಲಿ ಆತಿಥೇಯ ಓಮನ್ ಮತ್ತು ಪಪುವಾ ನ್ಯೂಗಿನಿಯಾ ದೇಶಗಳ ನಡುವಿನ ಪಂದ್ಯದೊಂದಿಗೆ ಟೂರ್ನಿ ಆರಂಭಗೊಳ್ಳಲಿದೆ. ನವೆಂಬರ್‌ 14ರಂದು ಕೊನೆಗೊಳ್ಳಲಿದೆ. ಗ್ರೂಪ್‌ ಬಿಯಲ್ಲಿ ಪಪುವಾ ನ್ಯೂಗಿನಿಯಾ, ಓಮನ್ ತಂಡಗಳಿವೆ. ಗ್ರೂಪ್‌ 'ಬಿ'ಯಲ್ಲಿ ಇನ್ನುಳಿದ ತಂಡಗಳಾದ ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ ಸಂಜೆ ಕಾದಾಡಲಿವೆ. ಗ್ರೂಪ್‌ 'ಎ'ಯಲ್ಲಿರುವ ಐರ್ಲೆಂಡ್, ನೆದರ್ಲ್ಯಾಂಡ್ಸ್, ಶ್ರೀಲಂಕಾ ಮತ್ತು ನಮೀಬಿಯಾ ತಂಡಗಳು ಮುಂದಿನ ದಿನ ಅಬುಧಾಬಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಸೆಣಸಾಡಲಿವೆ. ಅಕ್ಟೋಬರ್‌ 24ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಗ್ರೂಪ್‌ ಹಂತದಲ್ಲಿ ಮುಖಾಮುಖಿಯಾಗಲಿದ್ದು, ಪಂದ್ಯ ಕುತೂಹಲ ಮೂಡಿಸಿದೆ. ಗ್ರೂಪ್‌-1ರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಎರಡು ಕ್ವಾಲಿಫೈಯರ್ (A1, B2) ತಂಡಗಳಿದ್ದರೆ, ಗ್ರೂಪ್ 2ರಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ಎರಡು ಕ್ವಾಲಿಫೈಯರ್ ತಂಡಗಳು (A2, B1) ತಂಡಗಳು ಇವೆ. ಫೈನಲ್‌ ಪಂದ್ಯ ನವೆಂಬರ್‌ 14ರಂದು ದುಬೈನಲ್ಲಿ ನಡೆಯಲಿದೆ.

Story first published: Thursday, September 9, 2021, 10:07 [IST]
Other articles published on Sep 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X