ಬಾಂಗ್ಲಾದೇಶ ವಿರುದ್ಧದ ಟಿ20ಐನಲ್ಲೂ ಎಂಎಸ್ ಧೋನಿ ಆಡೋದಿಲ್ವಾ?!

ನವದೆಹಲಿ, ಸೆಪ್ಟೆಂಬರ್ 22: ವಿಶ್ವಕಪ್ ಬಳಿಕ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನೂ ಆಡದ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧದ ಟಿ20ಐ ಸರಣಿಯಿಂದಲೂ ದೂರ ಉಳಿಯಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಭಾರತ vs ಬಾಂಗ್ಲಾದೇಶ ಸರಣಿ ನವೆಂಬರ್ 3ರಿಂದ ಆರಂಭಗೊಳ್ಳಲಿದೆ.
ಇಂಗ್ಲೆಂಡ್‌ನಲ್ಲಿ ನಡೆದಿದ್ದ ಐಸಿಸಿ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಬಳಗ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರ ಬಿದ್ದಿತ್ತು. ಧೋನಿ ಆಡಿದ್ದ ಕೊನೇ ಪಂದ್ಯವದು. ಅನಂತರ ಭಾರತದ ವೆಸ್ಟ್ ಇಂಡೀಸ್ ಪ್ರವಾಸ ಮತ್ತು ಭಾರತಕ್ಕೆ ದಕ್ಷಿಣ ಆಫ್ರಿಕಾ ಪ್ರವಾಸ ಸರಣಿಗಳಲ್ಲಿ ಧೋನಿ ಆಡಿಲ್ಲ.
ವೆಸ್ಟ್ ಇಂಡೀಸ್ ಪ್ರವಾಸ ಸರಣಿಯ ವೇಳೆ ತಾನು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದಾಗಿ ಹೇಳಿದ್ದ ಧೋನಿ, ಆ ಬಳಿಕ ದಕ್ಷಿಣ ಆಫ್ರಿಕಾದ ಭಾರತ ಪ್ರವಾಸ ಸರಣಿಯಲ್ಲೂ ತಾನೇ ಅಲಭ್ಯರಾಗುತ್ತಿರುವುದಾಗಿ ತಿಳಿಸಿದ್ದರು. ಇದೀಗ ಬಾಂಗ್ಲಾ ವಿರುದ್ಧದ ಸರಣಿಯಲ್ಲೂ ಧೋನಿ ಅಲಭ್ಯರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ.
ಮುಂಬೈ ಮಿರರ್‌ನಲ್ಲಿ ಪ್ರಕಟವಾಗಿರುವ ವರದಿಯೊಂದು ಧೋನಿ ಬಾಂಗ್ಲಾ ವಿರುದ್ಧದ ಸರಣಿಯಲ್ಲೂ ಪಾಲ್ಗೊಳ್ಳುವ ಸಾಧ್ಯತೆ ತೀರಾ ಕಡಿಮೆಯಿದೆ ಎಂದು ಹೇಳಿದೆ. ಧೋನಿ ಹೀಗೆ ಅಂತಾರಾಷ್ಟ್ರೀಯ ಪಂದ್ಯಗಳಿಂದ ದೂರ ಉಳಿಯುತ್ತಿರುವುದು ಅವರ ನಿವೃತ್ತಿಯ ಅನುಮಾನಗಳಿಗೂ ಎಡೆಮಾಡಿದೆ.
ಭಾರತಕ್ಕೆ ಪ್ರವಾಸ ಕೈಗೊಳ್ಳುತ್ತಿರುವ ಬಾಂಗ್ಲಾದೇಶ ತಂಡ, ನವೆಂಬರ್ 3ರಿಂದ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಅನಂತರ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಟಿ20 ಮೊದಲ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದರೆ, ಟೆಸ್ಟ್ ಮೊದಲ ಪಂದ್ಯ ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications