MS Dhoni New look: ವಿಂಟೇಜ್ ಲುಕ್‌ನಲ್ಲಿ ಎಂಎಸ್ ಧೋನಿ: ವೈರಲ್ ಆಯ್ತು ಮಾಹಿಯ ಸ್ಟೈಲಿಶ್ ಫೋಟೋಸ್
MS Dhoni New look: ಎಂಎಸ್ ಧೋನಿ ಭಾರತ ಕಂಡ ಸಾರ್ವಕಾಲಿಕ ಅತ್ಯಂತ ಯಶಸ್ವಿ ನಾಯಕ. ಐಸಿಸಿಯ ಎಲ್ಲಾ ಟ್ರೋಫಿಗಳನ್ನು ಗೆದ್ದುಕೊಟ್ಟಿರುವ ಏಕೈಕ ನಾಯಕನೂ ಹೌದು. ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಎಂಎಸ್ ಧೋನಿ ಎಂದರೆ ಅಭಿಮಾನಿಗಳಿಗೆ ಇನ್ನಿಲ್ಲದ ಪ್ರೀತಿ.
ತಾಳ್ಮೆ ಹಾಗೂ ಶಾಂತಚತ್ತ ಮನಸ್ಥಿತಿಯಿಂದಾಗಿಯೇ ಹೆಸರುವಾಸಯಾಗಿರುವ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಾಗಿನಿಂದಲೂ ಯುವಕರ ಪಾಲಿಗೆ ಸ್ಟೈಲಿಶ್ ಐಕಾನ್ ಆಗಿಯೂ ಹೃದಯದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ವೃತ್ತಿ ಜೀವನದ ಆರಂಭಿಕ ದಿನಗಳಲ್ಲಿ ತಮ್ಮ ಉದ್ದದ ಕೂದಲಿನ ಮೂಲಕ ಗಮನ ಸೆಳೆದಿದ್ದ ಧೋನಿ ಬಳಿಕ ತಮ್ಮ ಲುಕ್‌ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡೇ ಬಂದಿದ್ದಾರೆ.

ಇದೀಗ ಎಂಎಸ್ ಧೋನಿ ಮತ್ತೆ ತಮ್ಮ ಹೊಸ ಲುಕ್‌ನ ಕಾರಣಕ್ಕಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಟಿಂಗ್‌ನಲ್ಲಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಇದೀಗ ತಮ್ಮ ವೃತ್ತಿ ಜೀವನದ ಆರಂಭಿಕ ದಿನಗಳ ರೀತಿಯಲ್ಲಿ ಉದ್ದನೆಯ ಕೂದಲಿನೊಂದಿಗೆ ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ಪ್ರಸಿದ್ಧ ಕೇಶ ವಿನ್ಯಾಸಕ ಆಲಿಮ್ ಹಕೀಮ್ ಅವರು ವಿಂಟೇಜ್ ಲುಕ್‌ನೊಂದಿಗೆ ಎಂಎಸ್ ಧೋನಿಯ ಇತ್ತೀಚಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆಲಿಮ್ ಹಕೀಮ್ ತಮ್ಮ ಸಾಮಾಜಿಕ ಜಾಲತಾಣದ ಪ್ರೊಫೈಲ್‌ನಲ್ಲಿ ಕೆಲ ಫೋಟೋಗಳನ್ನು ಶೇರ್ ಮಾಡಿದ್ದು ಇದು ಸಾಕಷ್ಟು ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿಯೂ ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಾಗಿ ನಾಲ್ಕು ವರ್ಷಗಳೇ ಕಳೆದಿದ್ದರೂ ಧೋನಿ ಐಪಿಎಲ್‌ನಲ್ಲಿ ಸಕ್ರಿಯವಾಗಿದ್ದಾರೆ. ಕಳೆದ ಐಪಿಎಲ್ ಆವೃತ್ತಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಧೋನಿ ಐದನೇ ಬಾರಿಗೆ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರುವಂತೆ ಮಾಡದ್ದಾರೆ. ಮುಂದಿನ ಆವೃತ್ತಿಯಲ್ಲಿಯೂ ಧೋನಿ ಆಡುವ ಬಗ್ಗೆ ಸುಳಿವನ್ನು ನೀಡಿದ್ದಾರೆ. ಹೀಗಾಗಿ ವಿಂಟೇಜ್ ಲುಕ್‌ನಲ್ಲಿಯೇ ಮುಂದಿನ ಐಪಿಎಲ್ ಆವೃತ್ತಿಯಲ್ಲಿಯೂ ಮಾಹಿ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications