ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಧೋನಿ vs ಕೊಹ್ಲಿ vs ರೋಹಿತ್: ನಾಯಕತ್ವದ ಸಕ್ಸಸ್ ರೇಟ್‌ನಲ್ಲಿ ಈ ನಾಯಕನೇ ನಂಬರ್ ಒನ್!

MS Dhoni vs Virat Kohli vs Rohit Sharma: Who have achieved highest success rate as a captain in T20Is?

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಲಾಗದೆ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದ ಟೀಮ್ ಇಂಡಿಯಾ ಸದ್ಯ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ಭಾರತ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೂ ಮುನ್ನ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು.

ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ಶ್ರೇಯಸ್; ಮುಂದಿನ ಟೆಸ್ಟ್ ಪಂದ್ಯದಲ್ಲಿ ನಾಯಕನಿಗೇ ಸ್ಥಾನ ಅನುಮಾನ!ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ಶ್ರೇಯಸ್; ಮುಂದಿನ ಟೆಸ್ಟ್ ಪಂದ್ಯದಲ್ಲಿ ನಾಯಕನಿಗೇ ಸ್ಥಾನ ಅನುಮಾನ!

ಇನ್ನು ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಿದ್ದರು. ಈ ಬಾರಿಯ ಟ್ವೆಂಟಿ ವಿಶ್ವಕಪ್ ಆರಂಭವಾಗುವ ಮುನ್ನವೇ ಘೋಷಣೆಯೊಂದನ್ನು ಮಾಡಿದ್ದ ವಿರಾಟ್ ಕೊಹ್ಲಿ ಟೂರ್ನಿ ಮುಗಿದ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವುದಾಗಿ ನಿರ್ಧಾರವನ್ನು ಕೈಗೊಂಡಿದ್ದರು. ಅದರಂತೆಯೇ ಇದೀಗ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದು ರೋಹಿತ್ ಶರ್ಮಾ ಅಧಿಕೃತವಾಗಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಂಡು ಕಣಕ್ಕಿಳಿದ ಚೊಚ್ಚಲ ಸರಣಿಯಲ್ಲಿಯೇ ವೈಟ್ ವಾಷ್ ಸಾಧನೆ ಮಾಡಿದೆ.

ಐಪಿಎಲ್ 2022 ರಿಟೆನ್ಷನ್: ನಿಯಮ, ನೇರಪ್ರಸಾರ ಮತ್ತು ಎಲ್ಲಾ ತಂಡ ಉಳಿಸಿಕೊಳ್ಳುವ ಆಟಗಾರರ ಪಟ್ಟಿಐಪಿಎಲ್ 2022 ರಿಟೆನ್ಷನ್: ನಿಯಮ, ನೇರಪ್ರಸಾರ ಮತ್ತು ಎಲ್ಲಾ ತಂಡ ಉಳಿಸಿಕೊಳ್ಳುವ ಆಟಗಾರರ ಪಟ್ಟಿ

ಈ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡಿದ್ದರ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದ್ದು ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ನಾಯಕ ರೋಹಿತ್ ಶರ್ಮಾ ಕುರಿತು ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ಇದರ ಜೊತೆಗೆ ರೋಹಿತ್ ಶರ್ಮಾ ನಾಯಕತ್ವದ ಅಂಕಿಅಂಶಗಳನ್ನು ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ನಾಯಕತ್ವದ ಅಂಕಿಅಂಶಗಳೊಡನೆ ಹೋಲಿಕೆ ಮಾಡುವುದರ ಮೂಲಕ ಯಾರು ಅತ್ಯುತ್ತಮ ಟಿ ಟ್ವೆಂಟಿ ನಾಯಕ ಎಂಬ ಚರ್ಚೆಗಳನ್ನು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿದ್ದಾರೆ. ಇನ್ನು ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ, ಎಷ್ಟು ಪಂದ್ಯಗಳಲ್ಲಿ ಸೋತಿದೆ ಮತ್ತು ಯಾವ ಆಟಗಾರ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿದೆ..

ಗೆಲುವಿನ ಶೇಕಡಾಂಶದ ಹೋಲಿಕೆಯಲ್ಲಿ ರೋಹಿತ್ ಶರ್ಮಾ ಮುಂದು!

ಗೆಲುವಿನ ಶೇಕಡಾಂಶದ ಹೋಲಿಕೆಯಲ್ಲಿ ರೋಹಿತ್ ಶರ್ಮಾ ಮುಂದು!

ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿದ ನಂತರ ರೋಹಿತ್ ಶರ್ಮಾ ಅಧಿಕೃತವಾಗಿ ನಾಯಕನಾಗಿ ಅಧಿಕಾರವನ್ನು ಸ್ವೀಕರಿಸಿದರೂ ಸಹ ಈ ಹಿಂದೆ ಹಲವಾರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿ ಯಶಸ್ವಿಯಾಗಿದ್ದರು. ಹೀಗೆ ರೋಹಿತ್ ಶರ್ಮಾ ಗೆಲುವಿನ ಶೇಕಡಾಂಶದಲ್ಲಿ ಎಂ ಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಗಿಂತ ಮುಂಚೂಣಿಯಲ್ಲಿದ್ದಾರೆ ಮತ್ತು ಅದರ ವಿವರ ಈ ಕೆಳಕಂಡಂತಿದೆ.


ಎಂಎಸ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 72 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿದ್ದು, 42 ಪಂದ್ಯಗಳಲ್ಲಿ ಗೆದ್ದು 28 ಪಂದ್ಯಗಳಲ್ಲಿ ಸೋಲುವ ಮೂಲಕ 59.28% ಸಕ್ಸಸ್ ರೇಟ್ ಹೊಂದಿದ್ದಾರೆ.


ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 50 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿದ್ದು, 32 ಪಂದ್ಯಗಳಲ್ಲಿ ಗೆದ್ದು 16 ಪಂದ್ಯಗಳಲ್ಲಿ ಸೋಲುವ ಮೂಲಕ 64.58% ಸಕ್ಸಸ್ ರೇಟ್ ಹೊಂದಿದ್ದಾರೆ.


ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ 22 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿದ್ದು, 18 ಪಂದ್ಯಗಳಲ್ಲಿ ಗೆದ್ದು ಕೇವಲ 4 ಪಂದ್ಯಗಳಲ್ಲಿ ಸೋಲುವ ಮೂಲಕ ಬರೋಬ್ಬರಿ 81.81% ಸಕ್ಸಸ್ ರೇಟ್ ಹೊಂದಿದ್ದಾರೆ. ಹೀಗೆ ರೋಹಿತ್ ಶರ್ಮಾ ನಾಯಕನಾಗಿ ಅತಿ ಹೆಚ್ಚು ಸಕ್ಸಸ್ ರೇಟ್ ಹೊಂದಿದ್ದು ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಅಂಕಿ ಅಂಶಗಳನ್ನು ಉಳಿಸಿಕೊಂಡು ಹೋಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಆಟಗಾರನಾಗಿ ಉತ್ತಮ ಪ್ರದರ್ಶನ

ಆಟಗಾರನಾಗಿ ಉತ್ತಮ ಪ್ರದರ್ಶನ

ಟೀಮ್ ಇಂಡಿಯಾ ನಾಯಕರಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ತಮ್ಮದೇ ಆದ ರೀತಿ ಉತ್ತಮವಾಗಿ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ತಾವು ನಾಯಕನಾಗಿ ಮುನ್ನಡೆಸಿದ್ದ ಪಂದ್ಯಗಳಲ್ಲಿ ಓರ್ವ ಆಟಗಾರನಾಗಿ ಈ ಮೂವರ ಪೈಕಿ ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದರ ಅಂಕಿ ಅಂಶಗಳು ಈ ಕೆಳಕಂಡಂತಿವೆ.


ವಿರಾಟ್ ಕೊಹ್ಲಿ ತಾವು ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ 50 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ವೈಯಕ್ತಿಕವಾಗಿ 1570 ರನ್ ಬಾರಿಸಿದ್ದಾರೆ.


ಎಂ ಎಸ್ ಧೋನಿ ತಾವು ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ 72 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ವೈಯಕ್ತಿಕವಾಗಿ 1112 ರನ್ ಬಾರಿಸಿದ್ದಾರೆ.


ರೋಹಿತ್ ಶರ್ಮಾ ತಾವು ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ 22 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ವೈಯಕ್ತಿಕವಾಗಿ 871 ರನ್ ಬಾರಿಸಿದ್ದಾರೆ.

Shreyas Iyer ತಂದ ಈ ದಿನಕ್ಕಾಗಿ ಕಾದು ಕುಳಿತಿದ್ದರು | Oneindia Kannada
ಧೋನಿ ಅಂಕಿಅಂಶಗಳಲ್ಲಿ ಹಿಂದಿದ್ದರೂ ಟ್ರೋಫಿಯಲ್ಲಿ ಮುಂದು

ಧೋನಿ ಅಂಕಿಅಂಶಗಳಲ್ಲಿ ಹಿಂದಿದ್ದರೂ ಟ್ರೋಫಿಯಲ್ಲಿ ಮುಂದು

ನಾಯಕನಾಗಿ ಅತಿಹೆಚ್ಚು ಸಕ್ಸಸ್ ರೇಟ್ ಹೊಂದುವುದರಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗಿಂತ ಎಂಎಸ್ ಧೋನಿ ಹಿಂದುಳಿದಿದ್ದಾರೆ. ಅಷ್ಟೇ ಅಲ್ಲದೆ ತಾವು ನಾಯಕನಾಗಿ ಮುನ್ನಡೆಸಿದ್ದ ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗಿಂತ ಹೆಚ್ಚು ರನ್ ಗಳಿಸುವಲ್ಲಿಯೂ ಎಂ ಎಸ್ ಧೋನಿ ಯಶಸ್ವಿಯಾಗಿಲ್ಲ. ಆದರೆ ಟ್ರೋಫಿ ಎತ್ತಿಹಿಡಿಯುವಲ್ಲಿ ಎಂಎಸ್ ಧೋನಿ ಮುನ್ನಡೆ ಸಾಧಿಸಿದ್ದಾರೆ. ಹೌದು, ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಉದ್ಘಾಟನಾ ಆವೃತ್ತಿಯಲ್ಲಿ ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನಕ್ಕೆ ಫೈನಲ್ ಪಂದ್ಯದಲ್ಲಿ ಸೋಲುಣಿಸುವುದರ ಮೂಲಕ ಎಂಎಸ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

Story first published: Friday, November 26, 2021, 21:08 [IST]
Other articles published on Nov 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X