Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mumbai Indians: ಎರಡನೇ ಪಂದ್ಯಕ್ಕಾಗಿ ಮುಂಬೈ ತಂಡದಲ್ಲಿ ಬದಲಾವಣೆ?

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಆಡಿದ 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ ಎರಡನೇ ಪಂದ್ಯಕ್ಕೆ ತಯಾರಿ ನಡೆಸಿದೆ. ಮುಂಬೈ ತಂಡ 2013ರಿಂದ ಐಪಿಎಲ್‌ನ ಮೊದಲ ಪಂದ್ಯವನ್ನು ಗೆಲ್ಲದ ಇತಿಹಾಸವನ್ನು ಮುಂದುವರೆಸಿದೆ. ಎರಡನೇ ಪಂದ್ಯಕ್ಕಾಗಿ ಮುಂಬೈ ತಂಡವನ್ನು ಹಾರ್ದಿಕ್ ಪಾಂಡ್ಯ ತಂಡವನ್ನು ಸೇರಿಕೊಂಡಿದ್ದಾರೆ. ಮುಂದಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಬದಲಾವಣೆ ಅವಶ್ಯಕತೆ ಇದೆ.

ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದ್ದರಿಂದ ಹಾರ್ದಿಕ್ ಪಾಂಡ್ಯ ಅವರಿಗೆ ಒಂದು ಪಂದ್ಯವನ್ನು ನಿಷೇಧ ಹೇರಲಾಗಿತ್ತು. ಈಗ ಇವರು ತಂಡವನ್ನು ಸೇರಲು ತಯಾರಾಗಿದ್ದು, ತಂಡದಲ್ಲಿ ಬದಲಾವಣೆ ಮಾಡುವ ಅನಿವಾರ್ಯತೆ ಇದೆ. ಕಳೆದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ರಾಬಿನ್ ಮಿಂಜ್ (3 ರನ್‌), 7ನೇ ಕ್ರಮಾಂಕದಲ್ಲಿ ನಮನ್ ಧೀರ್ (17 ರನ್) ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಇವರಿಬ್ಬರ ಸ್ಥಾನದಲ್ಲಿ ಒಬ್ಬರ ಸ್ಥಾನಕ್ಕೆ ಕುತ್ತು ಬರಲಿದೆ. ಇದಕ್ಕೆ ಕಾರಣ ನಾಯಕ ಹಾರ್ದಿಕ್ ಪಾಂಡ್ಯ ಅವರು 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಪ್ಲೇಯರ್‌. ಹೀಗಾಗಿ ಈ ಇಬ್ಬರಲ್ಲಿ ಒಬ್ಬರ ಸ್ಥಾನಕ್ಕೆ ಕುತ್ತು ಫಿಕ್ಸ್‌ ಎಂದು ಹೇಳಲಾಗುತ್ತದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

Mumbai Indians Aim for Redemption as Hardik Pandya Returns Against Gujarat Titans

ಹೇಗಿತ್ತು ಹಿಂದಿನ ಪ್ರದರ್ಶನ?

ಯಾರ್ಕರ್ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾಗಾಗಿ ಮುಂಬೈ ಇಂಡಿಯನ್ಸ್‌ ತಂಡ ಇನ್ನು ಕಾಯಬೇಕಾಗುತ್ತದೆ. ಚೆನ್ನೈ ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟರ್‌ಗಳು ಅಬ್ಬರವನ್ನು ನಡೆಸುವಲ್ಲಿ ವಿಫಲರಾದರು. ಮೊದಲ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಸಿಎಸ್‌ಕೆ 19.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್‌ ಸೇರಿಸಿ ಜಯ ಸಾಧಿಸಿತು. ಹಾರ್ದಿಕ್ ಪಾಂಡ್ಯ ತಂಡ ಸೇರಿದ್ರೂ ಮುಂಬೈ ತಂಡ ಜಸ್ಪ್ರಿತ್ ಬುಮ್ರಾ ಅವರಿಗಾಗಿ ಇನ್ನು ಕಾಯಬೇಕಿದೆ.

ಮುಂಬೈ ಇಂಡಿಯನ್ಸ್‌ ತನ್ನ ಎರಡನೇ ಪಂದ್ಯವನ್ನು ಮಾರ್ಚ್ 29 ರಂದು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದೆ. ಈ ವೇಳೆ ಮುಂಬೈ ಶುಭಮನ್‌ ಗಿಲ್‌ ತಂಡದ ವಿರುದ್ಧ ಕಣಕ್ಕೆ ಇಳಿಯಲಿದೆ. ಇನ್ನು ಹಾರ್ದಿಕ್ ಪಾಂಡ್ಯ ತಾನು ಮುನ್ನಡೆಸಿದ್ದ ತಂಡದ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯ ಈ ತಂಡವನ್ನು ಮುನ್ನಡೆಸಿ, ಚೊಚ್ಚಲ ಪ್ರಯತ್ನದಲ್ಲೇ ತಂಡಕ್ಕೆ ಚಾಂಪಿಯನ್‌ ಪಟ್ಟವನ್ನು ತೊಡಿಸಿದ್ದ ನಾಯಕ. ಆದರೆ ಈಗ ಇವರು ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ.

Take a Poll

Story first published: Tuesday, March 25, 2025, 21:20 [IST]
Other articles published on Mar 25, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+