13 ವರ್ಷಗಳ ಬಳಿಕ ಮೊದಲ ಪಂದ್ಯ ಗೆದ್ದ ಮುಂಬೈ ಇಂಡಿಯನ್ಸ್: ಕೆಕೆಆರ್‌ಗೆ ಆಘಾತ
ಮುಂಬೈ: ಅನುಭವಿ ರೋಹಿತ್ ಶರ್ಮಾ ಹಾಗೂ ರಯಾನ್ ರಿಕಲ್ಟನ್ ಅವರು ಬಾರಿಸಿದ ಅರ್ಧಶತಕದ ಬಲದಿಂದ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಮಣಿಸಿ ಪ್ರಸಕ್ತ ಲೀಗ್‌ನಲ್ಲಿ ಶುಭಾರಂಭ ಮಾಡಿದೆ. ಈ ಮೂಲಕ ಎಂಐ ಕಳೆದ 13 ವರ್ಷಗಳ ಬಳಿಕ ಮುಂಬೈ ಮೊದಲ ಪಂದ್ಯವನ್ನು ಗೆದ್ದು ಬೀಗಿದೆ.
ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಸೊಗಸಾಗಿತ್ತು. ಆರಂಭಿಕರಾದ ರಯಾನ್ ರಿಕಲ್ಟನ್ ಹಾಗೂ ರೋಹಿತ್ ಶರ್ಮಾ ಜೋಡಿ ಅಬ್ಬರಿಸಿತು. ಈ ಜೋಡಿ ಪವರ್ ಪ್ಲೇನಲ್ಲಿ 80 ರನ್ ಸೇರಿಸಿತು. ಮೊದಲ ವಿಕೆಟ್‌ಗೆ ಈ ಜೋಡಿ 11.5 ಓವರ್‌ಗಳಲ್ಲಿ 148 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಅನುಭವಿ ರೋಹಿತ್ ಶರ್ಮಾ 38 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ಸಹಾಯದಿಂದ 78 ರನ್ ಸಿಡಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 205 ಆಗಿತ್ತು.

ರಿಕಲ್ಟನ್ ಅರ್ಧಶತಕ
ಸೂರ್ಯಕುಮಾರ್ ಯಾದವ್ 3 ಬೌಂಡರಿ ಸಹಾಯದಿಂದ 16 ರನ್ ಸಿಡಿಸಿ ಔಟ್ ಆದರು. ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕಲ್ಟನ್ 4 ಬೌಂಡರಿ, 8 ಸಿಕ್ಸರ್ ನೆರವಿನಿಂದ 81 ರನ್ ಬಾರಿಸಿ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು.
ಮಧ್ಯಮ ಕ್ರಮಾಂಕದ ತಿಲಕ್ ವರ್ಮಾ 4 ಬೌಂಡರಿ ನೆರವಿನಿಂದ 20 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಅಜೇಯ 18 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಅಂತಿಮವಾಗಿ ಮುಂಬೈ 19.1 ಓವರ್‌ಗಳಲ್ಲಿ 4 ವಿಕೆಟ್‌ಗೆ 224 ರನ್ ಸಿಡಿಸಿ ಮೊದಲ ಗೆಲುವಿನ ನಗೆ ಬೀರಿತು.
ಭರ್ಜರಿ ಆರಂಭ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಫಿನ್ ಅಲೆನ್ (37) ಹಾಗೂ ನಾಯಕ ಅಜಿಂಕ್ಯ ರಹಾನೆ ಮೊದಲ ವಿಕೆಟ್‌ಗೆ 5.2 ಓವರ್‌ಗಳಲ್ಲಿ 69 ರನ್ ಸೇರಿಸಿದರು. ದುಬಾರಿ ಆಟಗಾರ ಕ್ಯಾಮರೂನ್ ಗ್ರೀನ್ 18 ರನ್ ಬಾರಿಸಿ ಔಟ್ ಆದರು. ಅಜಿಂಕ್ಯ ರಹಾನೆ 40 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಾಯದಿಂದ 67 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದ ಅಂಗ್‌ಕ್ರಿಶ್ ರಘುವಂಶಿ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 6 ಬೌಂಡರಿ, 2 ಸಿಕ್ಸರ್ ನೆರವಿನಿಂದ 51 ರನ್ ಸಿಡಿಸಿದರು. ಭರವಸೆಯ ಆಟಗಾರ ರಿಂಕು ಸಿಂಗ್ 4 ಬೌಂಡರಿ ಸಹಾಯದಿಂದ ಅಜೇಯ 33 ರನ್ ಬಾರಿಸಿದರು. ಅಂತಿಮವಾಗಿ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಸೇರಿಸಿತು.
ಮುಂಬೈ ಇಂಡಿಯನ್ಸ್ ತಂಡದ ಪರ ಅನುಭವಿ ಶಾರ್ದೂಲ್ ಠಾಕೂರ್ 39 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications