Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs KKR IPL 2024: ಮುಂಬೈ-ಕೋಲ್ಕತ್ತಾ ಮುಖಾಮುಖಿ; ಟಾಸ್‌, ಆಡುವ 11ರ ಬಳಗದ ವರದಿ

ಶನಿವಾರ ಮೇ 11, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 60ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಮುಂಬೈ-ಕೋಲ್ಕತ್ತಾ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯ ತಡವಾಗಿ ಪಂದ್ಯ ಆರಂಭವಾಗಿದ್ದು, 16 ಓವರ್‌ಗಳಿಗೆ ನಡೆಯಲಿದೆ. 5 ಓವರ್‌ಗೆ ಪವರ್‌ ಪ್ಲೇ ಇರಲಿದೆ.

ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬ್ಯಾಟಿಂಗ್‌ ಮಾಡಲಿದೆ.

Mumbai Indians MI vs Kolkata Knight Riders KKR IPL 2024 Match Toss Report

ಈವರಗೆ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಗೆದ್ದು, 3ರಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಸದ್ಯ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್‌ 12 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 8ರಲ್ಲಿ ಸೋತು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.

ಎಂಐ vs ಕೆಕೆಆರ್‌ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಎಂಐ vs ಕೆಕೆಆರ್‌ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್ ತಂಡ: ಇಶಾನ್ ಕಿಶನ್(ವಿ.ಕೀ), ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ : ಫಿಲಿಪ್ ಸಾಲ್ಟ್(ವಿ.ಕೀ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ರಿಂಕು ಸಿಂಗ್, ನಿತೀಶ್ ರಾಣಾ, ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Story first published: Saturday, May 11, 2024, 21:08 [IST]
Other articles published on May 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+