Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈ ಇಂಡಿಯನ್ಸ್ ಆಟಗಾರರು, ಸಿಬ್ಬಂದಿಗಳ ಕೊರೊನಾ ವರದಿ ನೆಗೆಟಿವ್

Mumbai Indians players, support staff COVID-19 results negative

ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪಿಂಗ್ ಸಲಹೆಗಾರ ಕಿರಣ್ ಮೋರೆ ಕೊರೊನಾ ವೈರಸ್‌ಗೆ ತುತ್ತಾದ ಬಳಿಕ ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಸಹಜವಾಗಿಯೇ ಆತಂಕ ಉಂಟು ಮಾಡಿತ್ತು. ಈಗ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಹಾಗೂ ಸಿಬ್ಬಂದಿಗಳು ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಡುವಂತ ಸುದ್ದಿ ಬಂದಿದೆ.

ಕಿರಣ್ ಮೋರೆ ಪಾಸಿಟಿವ್ ವರದಿ ಬಂದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಎಲ್ಲಾ ಆಟಗಾರರ ಹಾಗೂ ಸಿಬ್ಬಂದಿಗಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ. ಇದರಲ್ಲಿ ಎಲ್ಲಾ ಆಟಗಾರರು ಹಾಗೂ ಸಿಬ್ಬಂದಿಗಳ ವರದಿ ಕೂಡ ನೆಗೆಟಿವ್ ಬಂದಿದೆ. ಹೀಗಾಗಿ ಮುಂಬೈ ತಂಡದಲ್ಲಿ ಇದ್ದ ಆತಂಕ ದೂರವಾಗಿದೆ.

ಐದು ಬಾರಿಯ ಐಪಿಎಲ್ ಚಾಂಪಿಯನ್ ತಂಡ ಸದ್ಯ ಚೆನ್ನೈನಲ್ಲಿದ್ದು 14ನೇ ಆವೃತ್ತಿಯ ಟೂರ್ನಿಗೆ ಸಜ್ಜಾಗುತ್ತಿದೆ. ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದೆ.

ಎನ್‌ಐಎ ವರದಿಯ ಪ್ರಕಾರ ಕಿರಣ್ ಮೋರೆ ಕೊರೊನಾ ವೈರಸ್‌ಗೆ ತುತ್ತಾದ ಸಂಗತಿ ತಿಳಿದ ನಂತರ ಮಂಗಳವಾರ ಅಭ್ಯಾಸ ಶಿಬಿರವನ್ನು ಮೊಟಕುಗೊಳಿಸಿ ಎಲ್ಲಾ ಆಟಗಾರರು ಹಾಗೂ ಸಿಬ್ಬಂದಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಎಲ್ಲರ ವರದಿಯೂ ಈಗ ನೆಗೆಟಿವ್ ಬಂದಿದೆ.

ಇನ್ನು ಕಿರಣ್ ಮೋರೆ ಕೊರೊನಾ ವೈರಸ್‌ಗೆ ತುತ್ತಾಗಿರುವ ವಿಚಾರ ಮಾಧ್ಯಮಗಳ ಮೂಲಕ ಬಹಿರಂಗವಾದ ಬಳಿಕ ಟ್ವಿಟ್ಟರ್‌ನಲ್ಲಿ ಅಭಿಮಾನಿಗಳು ಹಂಚಿಕೊಂಡ ಕೆಲ ಪೋಸ್ಟ್‌ಗಳು ಆತಂಕಕ್ಕೆ ಕಾರಣವಾಗಿತ್ತು. ಮುಂಬೈ ಇಂಡಿಯನ್ಸ್ ತಂಡ ಈ ಮೊದಲು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ಮತ್ತು ಫೋಟೋದಲ್ಲಿ ಮೋರೆ ಇತರ ಆಟಗಾರರು ಹಾಗೂ ಸಿಬ್ಬಂದಿಗಳ ಜೊತೆಗೆ ಬೆರೆತಿರುವುದು ಸ್ಪಷ್ಟವಾಗಿತ್ತು. ಇದನ್ನು ಅಭಿಮಾನಿಗಳು ಗುರುತು ಮಾಡಿ ಹಂಚಿಕೊಂಡಿದ್ದಾರೆ. ಆದರೆ ಅದೃಷ್ಟವಶಾತ್ ತಂಡದ ಇತರ ಸದಸ್ಯರ ವರದಿ ಈಗ ನೆಗೆಟಿವ್ ಬಂದಿದೆ.

Story first published: Tuesday, April 6, 2021, 22:52 [IST]
Other articles published on Apr 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+