IPL 2020: ಪ್ಲೇ ಆಫ್‌ಗೆ ಎಂಟ್ರಿಕೊಟ್ಟ ಮೊದಲ ತಂಡ ಮುಂಬೈ ಇಂಡಿಯನ್ಸ್

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಚಾಂಪಿಯನ್‌ಶಿಪ್ ಗೆದ್ದುಕೊಂಡಿರುವ ಮುಂಬೈ ಇಂಡಿಯನ್ಸ್ 2020ರ ಐಪಿಎಲ್ ಸೀಸನ್‌ನಲ್ಲಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಹೊರಹೊಮ್ಮಿದೆ.
ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ 12 ಪಂದ್ಯಗಳನ್ನ ಆಡಿದ್ದು ಇದರಲ್ಲಿ 8 ಗೆಲುವು, 4 ಸೋಲಿನೊಂದಿಗೆ 16 ಪಾಯಿಂಟ್ಸ್ ಕಲೆಹಾಕಿದ್ದು, ಪ್ಲೇ ಆಫ್ ಹಂತವನ್ನು ಪ್ರವೇಶಿಸಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ತಳಭಾಗದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ 49ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪಂದ್ಯ ಗೆದ್ದ ಬಳಿಕ 10 ಪಾಯಿಂಟ್ಸ್ ಕಲೆಹಾಕಿತು. ಮತ್ತೊಂದೆಡೆ ಕೆಕೆಆರ್ ಪ್ಲೇ ಆಫ್ ಕನಸನ್ನು ಬಹುತೇಕ ಕಳೆದುಕೊಂಡ ಪರಿಣಾಮ, 16 ಪಾಯಿಂಟ್ಸ್‌ನೊಂದಿಗೆ ಉತ್ತಮ ನೆಟ್ ರನ್‌ರೇಟ್ (+1.186) ಹೊಂದಿರುವ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ಲೇ ಆಫ್‌ಗೆ ತಲುಪಿರುವ ಮೊದಲ ತಂಡವಾಗಿದೆ.
ಭಾನುವಾರ (ಅ.25) ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲನ್ನಪ್ಪಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಹಂತವನ್ನು ಕಳೆದುಕೊಂಡಿತು. ಇದೀಗ ಕೆಕೆಆರ್ ವಿರುದ್ಧ ಸಿಎಸ್‌ಕೆ ಗೆದ್ದ ಬಳಿಕ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ಲೇ ಆಫ್‌ಗೆ ಪ್ರವೇಶಿಸಿದ ತಂಡವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications