For Quick Alerts
ALLOW NOTIFICATIONS  
For Daily Alerts
 

WPL 2023: ಪಾಕಿಸ್ತಾನ ಸೂಪರ್ ಲೀಗ್ ಚಾಂಪಿಯನ್ ತಂಡಕ್ಕಿಂತ ಎರಡು ಪಟ್ಟು ಬಹುಮಾನ ಪಡೆದ ಮುಂಬೈ ಇಂಡಿಯನ್ಸ್

Mumbai Indians Receive 6 Crore Prize Money After Winning WPL 2023 Final: Double Than PSL Winners

ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಗೆ ತೆರೆಬಿದ್ದಿದೆ. ಮಾರ್ಚ್ 26 ರಂದು ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಚೊಚ್ಚಲ ಟೂರ್ನಿಯಲ್ಲಿ ಟ್ರೋಫಿ ಗೆದ್ದುಕೊಂಡಿದೆ.

ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ಮಹಿಳಾ ಕ್ರಿಕೆಟ್ ಜನಪ್ರಿಯಗೊಳಿಸುವ ಉದ್ದೇಶ ಸಫಲವಾಗಿದೆ. ಮಹಿಳಾ ಪ್ರೀಮಿಯರ್ ಲೀಗ್‌ ಮೊದಲ ಆವೃತ್ತಿಯಲ್ಲೇ ಯಶಸ್ಸು ಕಂಡಿದೆ. ಚೊಚ್ಚಲ ಆವೃತ್ತಿಯಲ್ಲಿ ಕಪ್ ಗೆದ್ದ ತಂಡಕ್ಕೆ ಹಣದ ಹೊಳೆಯೇ ಹರಿದಿದೆ. ಕಪ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ 6 ಕೋಟಿ ರುಪಾಯಿ ಬಹುಮಾನ ಪಡೆದುಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ವಿಜೇತ ತಂಡಕ್ಕೆ ಚೆಕ್‌ ನೀಡಿದರು.

ರನ್ನರ್ ಅಪ್ ಸ್ಥಾನ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಕೋಟಿ ರುಪಾಯಿ ಬಹುಮಾನ ಪಡೆದುಕೊಂಡಿದೆ. ಆಸಕ್ತಿಕರವಾಗಿ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಚಾಂಪಿಯನ್ ಆದ ತಂಡಕ್ಕಿಂತ ದುಪ್ಪಟ್ಟು ಹಣವನ್ನು ಮಹಿಳಾ ಪ್ರೀಮಿಯರ್ ಲೀಗ್ ಚಾಂಪಿಯನ್ ತಂಡ ಪಡೆದುಕೊಂಡಿದೆ. ಇತ್ತೀಚೆಗೆ ಮುಕ್ತಾಯವಾದ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಚಾಂಪಿಯನ್ ಆದ ಲಾಹೋರ್ ಖಲಂದರ್ಸ್ ತಂಡಕ್ಕೆ 3.4 ಕೋಟಿ ರುಪಾಯಿ ನಗದು ಬಹುಮಾನ ಸಿಕ್ಕಿತ್ತು. ಹರ್ಮನ್‌ಪ್ರೀತ್ ಕೌರ್ ಪಡೆ ಅದಕ್ಕಿಂತ ಎರಡರಷ್ಟು ಬಹುಮಾನದ ಹಣ ಪಡೆದುಕೊಂಡಿದೆ.

Mumbai Indians Receive 6 Crore Prize Money After Winning WPL 2023 Final: Double Than PSL Winners

ನಾಲ್ಕನೇ ಸ್ಥಾನ ಪಡೆದ ಮಹಿಳಾ ಪ್ರೀಮಿಯರ್ ಲೀಗ್

ವಿಶ್ವದ ಪ್ರಮುಖ ಮಹಿಳಾ ಕ್ರಿಕೆಟ್ ಲೀಗ್‌ಗಳಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಹೆಚ್ಚಿನ ಪ್ರಶಸ್ತಿ ನೀಡುವ ಟೂರ್ನಿಯಾಗಿದೆ. ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಕಪ್ ಗೆಲ್ಲುವ ತಂಡಕ್ಕೆ 2.7 ಕೋಟಿ ರುಪಾಯಿ ಬಹುಮಾನ ಸಿಕ್ಕರೆ, ಇಂಗ್ಲೆಂಡ್‌ನಲ್ಲಿ ನಡೆಯುವ ಮಹಿಳಾ ಹಂಡ್ರೆಡ್ ಟೂರ್ನಿಯ ವಿಜೇತ ತಂಡಕ್ಕೆ 1.5 ಕೋಟಿ ರುಪಾಯಿ ಬಹುಮಾನ ಸಿಗಲಿದೆ.

ವಿಶ್ವದ ಪುರುಷ ಮತ್ತು ಮಹಿಳಾ ಕ್ರಿಕೆಟ್‌ ಲೀಗ್‌ಗಳಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಅತಿ ಹೆಚ್ಚು ಬಹುಮಾನ ನೀಡುವ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಐಪಿಎಲ್ ಟ್ರೋಫಿ ಗೆಲ್ಲುವ ತಂಡಕ್ಕೆ 2೦ ಕೋಟಿ ರುಪಾಯಿ ಬಹುಮಾನ ಸಿಗುತ್ತದೆ, ಐಪಿಎಲ್ ಫ್ರಾಂಚೈಸಿಗಳ ಒಡೆತನದ ತಂಡಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾದ ಎಸ್‌ಎ2೦ ಲೀಗ್‌ ವಿಜೇತ ತಂಡಕ್ಕೆ 15 ಕೋಟಿ ರುಪಾಯಿ ಸಿಗಲಿದ್ದು ಎರಡನೇ ಸ್ಥಾನದಲ್ಲಿದೆ.

ವೆಸ್ಟ್ ಇಂಡೀಸ್‌ನಲ್ಲಿ ನಡೆಯುವ ಕೆರಿಬಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ತಂಡಕ್ಕೆ 8 ಕೋಟಿ ರುಪಾಯಿ ಸಿಗಲಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಬರುತ್ತದೆ.

Mumbai Indians Receive 6 Crore Prize Money After Winning WPL 2023 Final: Double Than PSL Winners

ಹೇಲಿ ಮ್ಯಾಥ್ಯೂಸ್ ಟೂರ್ನಿಯ ಶ್ರೇಷ್ಠ ಆಟಗಾರ್ತಿ

ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಹೇಲಿ ಮ್ಯಾಥ್ಯೂಸ್ ಟೂರ್ನಿಯ ಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ಪಡೆದರು. ಫೈನಲ್‌ನಲ್ಲಿ ಅಜೇಯ ಶತಕ ಬಾರಿಸಿ ಗೆಲುವಿಗೆ ಕಾರಣರಾದ ನ್ಯಾಟ್ ಸಿವರ್ ಬ್ರಂಟ್ ಪಂದ್ಯದ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ನ್ಯಾಟ್ ಸಿವರ್ ಬ್ರಂಟ್ 345 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರು. ಹೇಲಿ ಮ್ಯಾಥ್ಯೂಸ್ 16 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆದರು.

ಅತಿಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಆರ್ ಸಿಬಿಯ ಸೋಫಿ ಡಿವೈನ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ನ ಶಫಾಲಿ ವರ್ಮಾ ಹೆಸರಿನಲ್ಲಿದೆ. ಇಬ್ಬರೂ ಕೂಡ ಟೂರ್ನಿಯಲ್ಲಿ 13 ಸಿಕ್ಸರ್ ಸಿಡಿಸಿದ್ದಾರೆ. ಸೋಫಿ ಡಿವೈನ್ 99 ರನ್ ಗಳಿಸಿರುವುದು ಟೂರ್ನಿಯಲ್ಲಿ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ.

Story first published: Monday, March 27, 2023, 12:18 [IST]
Other articles published on Mar 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+