Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs KKR IPL 2024: ಮುಂಬೈ-ಕೋಲ್ಕತ್ತಾ ಮುಖಾಮುಖಿ; ತವರಿನಲ್ಲಿ ಹಾರ್ದಿಕ್‌ ಪಡೆಗೆ ಜಯ ಸಿಗುವುದೇ?

ಶುಕ್ರವಾರ ಮೇ 3ರಂದು, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 51ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್‌) ಮತ್ತು ಮುಂಬೈ ಇಂಡಿಯನ್ಸ್‌ (ಎಂಐ) ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.

ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬ್ಯಾಟಿಂಗ್‌ ಮಾಡಲಿದೆ.

Mumbai Indians vs Kolkata Knight Riders IPL 2024 Match Toss Report

ಈವರಗೆ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್‌ 10 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಈ ಪಂದ್ಯ ಗೆಲ್ಲುವುದು ಮಹತ್ವದಾಗಿದೆ. ಮತ್ತೊಂದೆಡೆ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಪ್‌ ಹಾದಿ ಸುಗಮವಾಗಲಿದೆ.

ಎಂಐ vs ಕೆಕೆಆರ್‌ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :

ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಎಂಐ vs ಕೆಕೆಆರ್‌ ಆಡುವ 11ರ ಬಳಗ :

ಮುಂಬೈ ಇಂಡಿಯನ್ಸ್ ತಂಡ: ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ :ಫಿಲಿಪ್ ಸಾಲ್ಟ್ (ವಿಕೀ), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ

Story first published: Friday, May 3, 2024, 19:17 [IST]
Other articles published on May 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+