ಐಪಿಎಲ್: ಅಬುಧಾಬಿಗೆ ಬಂದಿಳಿದ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸೆಪ್ಟೆಂಬರ್‌ 11ರ ಶನಿವಾರ ಅಬುಧಾಬಿಗೆ ತಲುಪಿದ್ದಾರೆ. ವೇಗಿ ಜಸ್‌ಪ್ರೀತ್‌ ಬೂಮ್ರಾ ಮತ್ತು ಬ್ಯಾಟ್ಸ್‌ಮನ್‌ ಸೂರ್ಯಕುಮಾರ್ ಯಾದವ್ ಕೂಡ ರೋಹಿತ್ ಜೊತೆಗಿದ್ದರು. ಅಬುಧಾಬಿಗೆ ಬಂದಿಳಿದ ಮುಂಬೈ ಪ್ರಮುಖ ಆಟಗಾರರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ವಾಗತಿಸಿದೆ (ಚಿತ್ರಕೃಪೆ: ಮುಂಬೈ ಇಂಡಿಯನ್ಸ್ ಟ್ವಿಟರ್).

18 ವರ್ಷಗಳ ಬಳಿಕ ಪ್ರವಾಸ ಸರಣಿಗಾಗಿ ಪಾಕ್‌ಗೆ ಬಂದಿಳಿದ ನ್ಯೂಜಿಲೆಂಡ್!18 ವರ್ಷಗಳ ಬಳಿಕ ಪ್ರವಾಸ ಸರಣಿಗಾಗಿ ಪಾಕ್‌ಗೆ ಬಂದಿಳಿದ ನ್ಯೂಜಿಲೆಂಡ್!

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಲುಪಿರುವ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಆರು ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ. ಆ ಬಳಿಕ ಮೂವರೂ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಳ್ಳಲಿದ್ದಾರೆ. ಮ್ಯಾನ್ಚೆಸ್ಟರ್ ನಿಂದ ಅಬುಧಾಬಿಗೆ ಹೊರಡುವುದಕ್ಕೂ ಮುನ್ನ ಮೂವರೂ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು, ಮೂವರ ಫಲಿತಾಂಶವೂ ನೆಗೆಟಿವ್ ಬಂದಿತ್ತು.

ಇಂಗ್ಲೆಂಡ್‌ ನಿಂದ ಯುಎಇಗೆ ಹಾರಿದ ಎಂಐ ಆಟಗಾರರು

ಇಂಗ್ಲೆಂಡ್ ಮತ್ತು ಭಾರತ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿತ್ತು. ಆದರೆ ಕೊನೇ ಟೆಸ್ಟ್‌ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದಾಗಿದ್ದರಿಂದ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ಗೆ ತೆರಳಿದ್ದ ಭಾರತೀಯ ಆಟಗಾರರು ಐಪಿಎಲ್ ದ್ವಿತೀಯ ಹಂತದ ಟೂರ್ನಿಗಾಗಿ ಯುಎಇಗೆ ಬಂದಿದ್ದಾರೆ. ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯಲಿದ್ದ ಐದನೇ ಟೆಸ್ಟ್‌ ಪಂದ್ಯ ಶುಕ್ರವಾರ (ಸೆಪ್ಟೆಂಬರ್‌ 10) ರದ್ದೆಂದು ಘೋಷಿಸಲ್ಪಟ್ಟಿತ್ತು. ಹೀಗಾಗಿ ಟೆಸ್ಟ್‌ ಸರಣಿಯಲ್ಲಿದ್ದ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಮೂವರೂ ಯುಎಇಗೆ ಬಂದಿದ್ದಾರೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಸೇರಿ ಇಬ್ಬರು ಫಿಸಿಯೋಗಳು ಕೋವಿಡ್-19 ಸೋಂಕಿಗೆ ತುತ್ತಾಗಿದ್ದರು ಹೀಗಾಗಿ ಉದ್ದೇಶಿತ ಟೆಸ್ಟ್‌ ಪಂದ್ಯವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ನಿರ್ಧಾರಕ್ಕೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಮತ್ತು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ಬಂದಿತ್ತು.

ಟ್ವೀಟ್‌ ಮಾಡಿರುವ ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್ ಆಟಗಾರರಾದ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಯುಎಇ ತಲುಪಿರುವ ವಿಚಾರವನ್ನು ಮುಂಬೈ ಫ್ರಾಂಚೈಸಿ ಟ್ವೀಟ್ ಮೂಲಕ ತಿಳಿಸಿದೆ. ಟ್ವೀಟ್‌ನಲ್ಲಿ ರೋಹಿತ್, ಪತ್ನಿ ರಿತಿಕಾ ಸಜ್ದೇಹ್ ಮತ್ತು ಪುತ್ರಿ ಸಮೈರಾ ಚಿತ್ರ ಹಾಕಿರುವ ಎಂಐ, 'ಕ್ಯಾಪ್ಟನ್ ಆಲಾ ರೇ! ವೆಲ್ಕಮ್ ಹೋಮ್ ರೋ, ರಿತಿಕಾ, ಸ್ಯಾಮಿ' ಎಂದು ಬರೆದುಕೊಳ್ಳಲಾಗಿದೆ. ಮತ್ತೊಂದು ಟ್ವೀಟ್‌ನಲ್ಲಿ ಜಸ್‌ಪ್ರೀತ್‌ ಬೂಮ್ರಾ ಮತ್ತವರ ಪತ್ನಿ ಸಂಜನಾ ಗಣೇಶನ್ ಚಿತ್ರ ಹಾಕಿಕೊಂಡಿರುವ ಎಂಐ, 'ಇಟ್ಸ್ ಬೂಮ್ ಓ ಕ್ಲಾಕ್ ಇನ್ ದುಬೈ, ವೆಲ್ಕಮ್ ಬ್ಯಾಕ್ ಜೆ ಆ್ಯಂಡ್ ಬಿ ಆ್ಯಂಡ್ ಸಂಜನಾ' ಎಂದು ಬರೆದುಕೊಳ್ಳಲಾಗಿದೆ.

ಐಪಿಎಲ್ ಪ್ರಮುಖ ಮಾಹಿತಿಗಳು

ಐಪಿಎಲ್ ಪ್ರಮುಖ ಮಾಹಿತಿಗಳು

ಭಾರತದಲ್ಲಿ ಆರಂಭಗೊಂಡಿದ್ದ ಐಪಿಎಲ್ 14ನೇ ಆವೃತ್ತಿ ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಈ ಟೂರ್ನಿ ಈಗ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್‌ 19ರಿಂದ ಅಕ್ಟೋಬರ್‌ 15ರ ವರೆಗೆ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳು ನಡೆಯಲಿವೆ. ಆರಂಭಿಕ ಹಂತದಲ್ಲಿ 29 ಪಂದ್ಯಗಳು ನಡೆದಿದ್ದವು. ಇನ್ನುಳಿದ 31 ಪಂದ್ಯಗಳು ಯುಎಇಯ ತಾಣಗಳಲ್ಲಿ ನಡೆಯಲಿವೆ. ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಎರಡೂ ತಂಡಗಳು ಐಪಿಎಲ್ ಇತಿಹಾಸದಲ್ಲೇ ಅತೀ ಯಶಸ್ವಿ ತಂಡಗಳೆಂದು ಗುರುತಿಸಿಕೊಂಡಿವೆ. ಎಂಐ ಐದು ಬಾರಿ ಟ್ರೋಫಿ ಗೆದ್ದಿದ್ದರೆ, ಚೆನ್ನೈ ಮೂರು ಬಾರಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ.

For Quick Alerts
ALLOW NOTIFICATIONS
For Daily Alerts
Story first published: Saturday, September 11, 2021, 19:16 [IST]
Other articles published on Sep 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X