
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಎರಡು ಪಂದ್ಯಗಳನ್ನು ಆಡಿದ್ದು ಎರಡು ಪಂದ್ಯದಲ್ಲಿಯೂ ಸೋಲು ಅನುಭವಿಸಿದೆ. ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್‌ಗಳ ಅಂತರದಿಂದ ಸೋತಿದ್ದರೆ ಎರಡನೇ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ ವಿರುದ್ಧ 23 ರನ್‌ಗಳ ಅಂತರದಿಂದ ಸೋತಿದೆ. ಇದೀಗ ಮುಂಬೈ ಇಂಡಿಯನ್ಸ್ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದ್ದು ಬಿಧವಾರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಖಾಮುಖಿಯಾಗಲಿದೆ.
ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಲಿದೆ ಎಂದು ತಂಡದ ಆಲ್‌ರೌಂಡರ್ ಟಿಮ್ ಡೇವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಮ್ಯಾನೇಜ್‌ಮೆಂಟ್ ಅದ್ಭುತವಾದ ರೀತಿಯಲ್ಲಿ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸಿಂಗಾಪೂರ್ ಮೂಲದ ಟಿಮ್ ಡೇವಿಡ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ 8.25 ಕೋಟಿ ನೀಡಿ ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಭಾಗವಾಗಿದ್ದ ಟಿಮ್ ಡೇವಿಡ್ಈ ಮೂಲಕ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಿರುವ ಮೊದಲ ಸಿಂಗಪೂರ್ ಆಟಗಾರ ಎನಿಸಿದ್ದರು.
ರೋಹಿತ್ ಫನ್ ನಾಯಕ: ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಟಿಮ್ ಡೇವಿಡ್ ಫನ್ ನಾಯಕ ಎಂದಿದ್ದಾರೆ. "ಆತನೋರ್ವ ಓನ್ ನಾಯಕ. ಆತನೊ
ಮುಂಬೈ ಇಂಡಿಯನ್ಸ್ ತಂಡ ಬುಧವಾರ ಎರಡು ಬಾರಿಯ ಚಾಂಪಿಯನ್ ತಂಡ ಕೊಲ್ಕತ್ತಾ ವಿರುದ್ಧ ಮೂರನೇ ಪಂದ್ಯವನ್ನು ಆಡಲಿದೆ. ಮೊದಲ ಎರಡು ಪಂದ್ಯಗಳನ್ನು ಸೋತಿರುವ ಕಾರಣ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಕೆಕೆಆರ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.