Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020 ಬೆಟ್ಟಿಂಗ್: ಮಾಜಿ ರಣಜಿ ಆಟಗಾರ ಹಾಗೂ ಇಬ್ಬರ ಬಂಧನ

Mumbai police held Former Ranji player for IPL betting

ಮುಂಬೈ, ನ.9: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವೊಂದನ್ನು ವರ್ಸೊವಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಾಜಿ ರಣಜಿ ಆಟಗಾರ ರಾಬಿನ್ ಮೊರಿಸ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಾಜಿ ಕ್ರಿಕೆಟರ್ ರಾಬಿನ್ ಮೊರಿಸ್, ರೋಹಿತ್ ಭೀಮಣ್ಣ ಹಾಗೂ ಧೀರೇಂದ್ರ ಕುಲಕರ್ಣಿ ಎಂದು ಗುರುತಿಸಲಾಗಿದೆ. ಬೆಟ್ಟಿಂಗ್ ಜಾಲದ ಬಗ್ಗೆ ಸುಳಿವು ಪಡೆದ ಪೊಲೀಸರು, ಮೊರಿಸ್ ಅವರಿರುವ ಯಾರಿ ರಸ್ತೆಯ ಫ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಐಪಿಎಲ್ ಪಂದ್ಯದ ವೇಳೆ ಬೆಟ್ಟಿಂಗ್ ಮಾಡುವಾಗಲೇ ಮೂವರನ್ನು ಬಂಧಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ಎಲಿಮಿನೇಟರ್ ಪಂದ್ಯದ ಮೇಲೆ ಭಾರಿ ಬೆಟ್ಟಿಂಗ್ ಕಟ್ಟಿದ್ದರು. ಬಂಧಿತರಿಂದ ಹಲವು ಮೊಬೈಲ್ ಫೋನ್, ಲ್ಯಾಪ್ ಟಾಪ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 420, 465, 468 ಹಾಗೂ 471 ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Story first published: Monday, November 9, 2020, 11:00 [IST]
Other articles published on Nov 9, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+