VHT 2024: ದೇಶೀಯ ಟೂರ್ನಿಯಲ್ಲಿ ಮುಂಬೈಗೆ ಚಾಂಪಿಯನ್ ಪಟ್ಟ ಬರಿಸಿದ ಅನುಭವಿಗೆ ಕೊಕ್!
ಇತ್ತೀಚೆಗೆ ಮುಂಬೈ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಇದೀಗ ವಿಜಯ್ ಹಜಾರೆ ಟ್ರೋಫಿಗೂ ಮುಂಬೈ ತಂಡವನ್ನು ಮೊದಲ ಮೂರು ಪಂದ್ಯಗಳಿಗೆ ಪ್ರಕಟಿಸಲಾಗಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿದ್ದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಮುಂಬೈ ಕೈ ಬಿಟ್ಟಿದೆ. ಮತ್ತೊಂದೆಡೆ ಯುವ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ.
ಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿಯೂ ಮುಂಬೈ ತಂಡವನ್ನು ಶ್ರೇಯಸ್ ಅಯ್ಯರ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಆದರೆ, ದೇಶೀಯ ಟಿ20 ಟೂರ್ನಿಯಲ್ಲಿ ಅಬ್ಬರಿಸಿದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ಮುಂಬೈ ಆಯ್ಕೆ ಮಾಡದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಪೃಥ್ವಿ ಶಾ ಅವರಿಗೆ ಮತ್ತೊಮ್ಮೆ ಅದೃಷ್ಟ ಕೈ ಕೊಟ್ಟಿದೆ.

ಕಳಪೆ ಫಿಟ್‌ನೆಸ್‌ನಿಂದಾಗಿ ರಣಜಿ ಟ್ರೋಫಿಯಿಂದ ಹೊರಗುಳಿದಿದ್ದ ಪೃಥ್ವಿ ಶಾ ಅವರನ್ನು ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಬಿಡ್ ಮಾಡಲಿಲ್ಲ. ಇದಾದ ಬಳಿಕ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿಯೂ ಹೇಳಿಕೊಳ್ಳವಂತಹ ಪ್ರದರ್ಶನ ನೀಡಲಿಲ್ಲ. ಅವರು ಎರಡು ಬಾರಿ ಅರ್ಧಶತಕ ವಂಚಿತರಾದರು. ಈಗ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದಿಂದ ಹೊರಗುಳಿದಿದ್ದಾರೆ.
ರಹಾನೆ ಕೈಬಿಟ್ಟಿದ್ದು ಯಾಕೆ?
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ 2024ರಲ್ಲಿ ಅಜಿಂಕ್ಯ ರಹಾನೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.ಅವರ ಇನ್ನಿಂಗ್ಸ್ ಆಧಾರದ ಮೇಲೆ ಮುಂಬೈ ಪ್ರಶಸ್ತಿ ಗೆದ್ದುಕೊಂಡಿತು. ಒಂದರ ಹಿಂದೆ ಒಂದರಂತೆ ಅಮೋಘ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ರಹಾನೆ ಇಡೀ ಟೂರ್ನಿಯ ಹೀರೋ ಎಂಬುದನ್ನು ಸಾಬೀತುಪಡಿಸಿದರು. ಈ ಸಂದರ್ಭದಲ್ಲಿ ರಹಾನೆ ಮೂರು ಬಾರಿ ಶತಕ ಪೂರೈಸುವ ಅವಕಾಶವನ್ನು ಕಳೆದುಕೊಂಡಿದ್ದರು. ಹೀಗಿದ್ದರೂ ವಿಜಯ್ ಹಜಾರೆ ಟ್ರೋಫಿ ಟೂರ್ನಿಗೆ ಪ್ರಕಟವಾಗಿರುವ ಮುಂಬೈ ತಂಡದಲ್ಲಿ ಅವರ ಹೆಸರಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಅವರನ್ನು ಕೈ ಬಿಟ್ಟಿದ್ದೇಕೆ ಎಂಬ ಪ್ರಶ್ನೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ವರದಿಗಳ ಪ್ರಕಾರ, ಅಜಿಂಕ್ಯ ರಹಾನೆಯನ್ನು ಕೈಬಿಟ್ಟಿರುವ ಬಗ್ಗೆ ಕಾರಣವನ್ನು ಮುಂಬೈ ಬಹಿರಂಗಪಡಿಸಲಾಗಿಲ್ಲ. ಆದರೆ, ಅವರು ವೈಯಕ್ತಿಕ ಕಾರಣಗಳಿಂದ ವಿರಾಮವನ್ನು ಕೇಳಿದ್ದು, ಮುಂದಿನ ಉಳಿದ ಪಂದ್ಯಗಳಿಗೆ ತಂಡ ಸೇರಿಕೊಳ್ಳುವ ಸಾಧ್ಯತೆಯಿದೆ.
ಮುಂಬೈ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಆಯುಷ್ ಮ್ಹಾತ್ರೆ, ಅಂಗ್‌ಕ್ರಿಶ್ ರಘುವಂಶಿ, ಜೈ ಬಿಸ್ತಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ಸಿದ್ಧೇಶ್ ಲಾಡ್, ಹಾರ್ದಿಕ್ ತಮೋರ್, ಪ್ರಸಾದ್ ಪವಾರ್, ಅಥರ್ವ ಅಂಕೋಲೇಕರ್, ತನುಷ್ ಕೋಟ್ಯಾನ್, ಶಾರ್ದೂಲ್ ಠಾಕೂರ್, ಜುನಾಯ್‌ಟನ್ ಖಾನ ಡೈಸ್, ವಿನಾಯಕ್ ಭೋರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications