For Quick Alerts
ALLOW NOTIFICATIONS  
For Daily Alerts
 

ಸೂಪರ್‌ ಕಿಂಗ್ಸ್‌ ಸೋಲಿಸಿ ಐಪಿಎಲ್ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್!

Mumbai vs Chennai, 15th Match - Live Cricket Score

ಮುಂಬೈ, ಏಪ್ರಿಲ್ 3: ಮುಂಬೈಯ ವಾಂಖೇಡೆ ಸ್ಟೇಡಿಯಂನಲ್ಲಿ ಬುಧವಾರ (ಏಪ್ರಿಲ್ 3) ನಡೆದ ಐಪಿಎಲ್ 15ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 37 ರನ್ ಜಯ ಸಾಧಿಸಿದೆ. ಇದರೊಂದಿಗೆ ಮುಂಬೈ ಇಂಡಿಯನ್ಸ್‌ ಐಪಿಎಲ್‌ನಲ್ಲಿ 100ನೇ ಗೆಲುವಿನ ಇತಿಹಾಸ ನಿರ್ಮಿಸಿದೆ. ಅಲ್ಲದೆ ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಪಾಲಿನ ಎರಡನೇ ವಿಜಯವಿದು.

ಸ್ಕೋರ್‌ಕಾರ್ಡ್‌ಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

1
45771

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್, ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕಾಕ್ (4), ರೋಹಿತ್ ಶರ್ಮಾ (13), ಯುವರಾಜ್ ಸಿಂಗ್ (4) ವಿಕೆಟ್ ಗಳನ್ನು ಬೇಗನೆ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ ಕೃನಾಲ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಕೊಂಚ ಬಲ ತುಂಬಿದರು.

ಮೈಖೇಲ್ ಕನ್ನಡ - ಐಪಿಎಲ್ 2019 'ವಿಶೇಷ ಮುಖಪುಟ' (ಫಲಿತಾಂಶಗಳು, ಪಾಯಿಂಟ್ ಟೇಬಲ್, ಕುತೂಹಲಕಾರಿ ಅಂಶಗಳು ಇಲ್ಲಿವೆ!)

ಕೃನಾಲ್ 42, ಸೂರ್ಯಕುಮಾರ್ 59, ಹಾರ್ದಿಕ್ ಪಾಂಡ್ಯ ಅಜೇಯ 25, ಕೀರನ್ ಪೊಲಾರ್ಡ್ ಅಜೇಯ 17 ರನ್‌ ಸೇರಿಸಿದ್ದರಿಂದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದು 170 ರನ್ ಕಲೆ ಹಾಕಿತು. 171 ರನ್ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗೆ 8 ವಿಕೆಟ್ ಕಳೆದು 133 ರನ್ ಪೇರಿಸಲಷ್ಟೇ ಶಕ್ತವಾಯ್ತು.

ಚೆನ್ನೈ ಸೂಪರ್ ಕಿಂಗ್ಸ್‌ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದ್ದರಿಂದ ಗೆಲುವಿನ ಹಾದಿ ಕಠಿಣವಾಗುತ್ತಾ ಸಾಗಿತು. ಆರಂಭಿಕ ಆಟಗಾರ ಶೇನ್ ವ್ಯಾಟ್ಸನ್ 5, ಅಂಬಾಟಿ ರಾಯುಡು 0, ಸುರೇಶ್ ರೈನಾ 16, ಕೇದಾರ್ ಜಾಧವ್ 58, ಎಂಎಸ್ ಧೋನಿ 12, ರವೀಂದ್ರ ಜಡೇಜಾ 1, ಡ್ವೇನ್ ಬ್ರಾವೋ 8, ದೀಪಕ್ ಚಾಹರ್ 12 ರನ್ ಕೊಡುಗೆ ತಂಡಕ್ಕೆ ಲಭಿಸಿತು.

ಪಂದ್ಯದಲ್ಲಿ ಸಿಎಸ್‌ಕೆ ನಾಯಕ ಎಂಎಸ್ ಧೋನಿ 4000 ರನ್ ಪೂರೈಸಿದರು. ಮುಂಬೈ ಆಟಗಾರ ಕೀರಲ್ ಪೊಲಾರ್ಡ್ ಅದ್ಭುತ ಕ್ಯಾಚ್‌ಗಾಗಿ ಗಮನ ಸೆಳೆದರು. ಒಟ್ಟಿನಲ್ಲಿ ಐಪಿಎಲ್‌ನಲ್ಲಿ 100ನೇ ಗೆಲುವು ದಾಖಲಿಸಿದ ಮೊದಲ ತಂಡವಾಗಿ ಮುಂಬೈ ಇಂಡಿಯನ್ಸ್ ಇತಿಹಾಸ ನಿರ್ಮಿಸಿದೆ.

ಅಂದರೆ 99 ಪಂದ್ಯಗಳು +1 ಸೂಪರ್ ಓವರ್ ಪಂದ್ಯ ಸೇರಿ 100 ಪಂದ್ಯಗಳ ಗೆಲುವು ಮುಂಬೈ ಹೆಸರಿನಲ್ಲಿ ದಾಖಲಾಗಿದೆ. 8 ಎಸೆತಕ್ಕೆ 25 ರನ್ ಮತ್ತು 20 ರನ್‌ಗೆ ಚೆನ್ನೈ 3 ವಿಕೆಟ್ ಕಬಳಿಸಿದ ಹಾರ್ದಿಕ್ ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡರು.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಯುವರಾಜ್ ಸಿಂಗ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ರಾಹುಲ್ ಚಾಹರ್, ಜಸ್‌ಪ್ರೀತ್ ಬೂಮ್ರಾ, ಲಸಿತ್ ಮಾಲಿಂಗ, ಜೇಸನ್ ಬೆಹ್ರೆನ್ಡಾರ್ಫ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಅಂಬಾಟಿ ರಾಯುಡು, ಶೇನ್ ವ್ಯಾಟ್ಸನ್, ಸುರೇಶ್ ರೈನಾ, ಎಂಎಸ್ ಧೋನಿ (ಸಿ & ವಿಕೆ), ಕೇದಾರ್ ಜಾಧವ್, ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಾಹರ್, ಮೊಹಿತ್ ಶರ್ಮಾ, ಶಾರ್ದೂಲ್ ಠಾಕೂರ್, ಇಮ್ರಾನ್ ತಾಹಿರ್.

Story first published: Thursday, April 4, 2019, 0:25 [IST]
Other articles published on Apr 4, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+