Shakib Al Hasan: ಬಾಂಗ್ಲಾ ಆಲ್‌ರೌಂಡರ್ ವಿರುದ್ಧ ಕೊಲೆ ಪ್ರಕರಣ ದಾಖಲು
ಬಾಂಗ್ಲಾದೇಶದ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಕ್ರಿಕೆಟ್ ಮೈದಾನದ ಒಳಗೆ ಮತ್ತು ಹೊರಗೆ ಹಲವು ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದ ಅಭಿಮಾನಿಯೊಂದಿಗೆ ಅವರು ಅನುಚಿತವಾಗಿ ವರ್ತಿಸಿದ್ದರು. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಮೀಸಲಾತಿ ಹಿಂಸಚಾರ ಹೆಚ್ಚಾಗುತ್ತಿದೆ. ಈ ಹಿಂಸಾಚಾರದ ಕಲೆ ಬಾಂಗ್ಲಾ ಕ್ರಿಕೆಟ್‌ಗೆ ಅಂಟಿಕೊಂಡಿದೆ. ಮಂಗಳವಾರ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ನಜ್ಮುಲ್ ಹಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಮಾಜಿ ನಾಯಕ ಫಾರೂಕ್ ಅಹ್ಮದ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ನೇಮಿಕ ಮಾಡಲಾಗಿತ್ತು.

ಇದೀಗ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ವಿರುದ್ಧ ಕೊಲೆ ಆರೋಪ ಕೇಳಿ ಬರುತ್ತಿದೆ. ಢಾಕಾ ಟ್ರಿಬ್ಯೂನ್ ವರದಿ ಪ್ರಕಾರ, ಪಾಕಿಸ್ತಾನ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಅನುಭವಿ ಆಟಗಾರ ಮತ್ತು ಅವಾಮಿ ಲೀಗ್ ಸಂಸದ ಶಕೀಬ್ ಅಲ್ ಹಸನ್ ಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಗಾರ್ಮೆಂಟ್ಸ್ ಕೆಲಸಗಾರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಆಗಸ್ಟ್ 22ರ ರಾತ್ರಿ ಢಾಕಾದ ಅಡ್ಬೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾರ್ಮೆಂಟ್ಸ್ ಕೆಲಸಗಾರ ಮೃತ ರುಬೆಲ್ ತಂದೆ ರಫೀಕುಲ್ ಇಸ್ಲಾಂ ಅವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಶಕೀಬ್ 28ನೇ ಆರೋಪಿ ಆಗಿದ್ದಾರೆ. ಇತರ ಆರೋಪಿಗಳಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ, ಒಬೈದುಲ್ ಕ್ವಾಡರ್ ಸೇರಿದಂತೆ 154 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರರಕಣ ಏನು?
ಆಗಸ್ಟ್ 5 ರಂದು, ರುಬೆಲ್ ಅಡಾಬೋರ್‌ನ ರಿಂಗ್ ರೋಡ್‌ನಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪೂರ್ವ ಯೋಜಿತ ಗುಂಪೊಂದು ರ‍್ಯಾಲಿಯಲ್ಲಿ ಭಾಗವಹಿಸಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದ್ದರು.
ಇದರ ಪರಿಣಾಮವಾಗಿ ಗುಂಪಿನಲ್ಲಿದ್ದ ರುಬೆಲ್‌ಗೆ ಗುಂಡುಗಳು ತಗುಲಿದ್ದವು. ಎದೆ ಮತ್ತು ಹೊಟ್ಟೆ ಭಾಗಕ್ಕೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಗಸ್ಟ್ 7 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಟ್ಟಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications