IND vs AUS: ಟಾಸ್ ಗೆದ್ದ ಆಸೀಸ್ ಫೀಲ್ಡಿಂಗ್ ಆಯ್ಕೆ: ಭಾರತ ತಂಡದಲ್ಲಿ ಬದಲಾವಣೆ ಇಲ್ಲ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಆಡಿಲೇಡ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ, ಸರಣಿಯಲ್ಲಿ ಸಮಬಲ ಸಾಧಿಸುವ ಕನಸು ಭಾರತ ತಂಡದ್ದಾಗಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೈದಾನದಲ್ಲಿ ಈಗಾಗಲೇ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ನೆಚ್ಚಿನ ತಂಡವಾಗಿದೆ.
ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನು ಆಡಲಿದೆ. ಹೀಗಾಗಿ ಆಡಿಲೇಡ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಶುಭಮಮ್ ಗಿಲ್ ಪಡೆ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಆಟಗಾರರು ಹೇಗೆ ಆಡಲಿದ್ದಾರೆ ಎಂಬುದರ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

ಕುಲ್‌ದೀಪ್‌ಗೆ ಇಲ್ಲ ಅವಕಾಶ
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಎರಡನೇ ಏಕದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಬದಲಾವಣೆ ಇಲ್ಲದೆ ಅಖಾಡಕ್ಕೆ ಇಳಿದಿದೆ. ಈ ವೇಳೆ ಎರಡನೇ ಏಕದಿನ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದ ಕುಲ್‌ದೀಪ್ ಯಾದವ್ ಅವರಿಗೆ ಆಡಿಲೇಡ್‌ನಲ್ಲೂ ಅವಕಾಶ ಮಿಸ್ ಆಗಿದೆ. ಏಷ್ಯಾ ಕಪ್ ಟಿ20 ಟೂರ್ನಿ ಹಾಗೂ ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕುಲ್‌ದೀಪ್ ಯಾದವ್ ಅವಕಾಶ ವಂಚಿತರಾಗಿದ್ದಾರೆ.
ಟೀಮ್ ಇಂಡಿಯಾದ ಪರ ಮೊದಲ ಏಕದಿನ ಪಂದ್ಯದಲ್ಲಿ ಅಂಗಳಕ್ಕೆ ಇಳಿದಿದ್ದ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಸ್ಪಿನ್ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳಿದ್ದಾರೆ.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲಿ, ಮಿಚೆಲ್ ಓವೆನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್,
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications