ಶಾಹೀನ್ ಅಫ್ರಿದಿ ಅನುಪಸ್ಥಿತಿಯಲ್ಲಿ ಈತ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾನೆ ಎಂದ ಡ್ಯಾನಿಶ್ ಕನೇರಿಯಾ

17 ವರ್ಷಗಳ ನಂತರ ಇಂಗ್ಲೆಂಡ್ ಐತಿಹಾಸಿಕ ಟೆಸ್ಟ್ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಮಾಡಿದೆ. ಡಿಸೆಂಬರ್ 1ರಂದು ಮೊದಲನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪಾಕಿಸ್ತಾನದ ಪ್ರಮುಖ ಬೌಲರ್ ಶಾಹೀನ್ ಅಫ್ರಿದಿ ಅನುಪಸ್ಥಿತಿಯಲ್ಲಿ ಪಾಕಿಸ್ತಾನದ ಬೌಲಿಂಗ್ ದಾಳಿಯನ್ನು ಯುವ ವೇಗಿ ನಸೀಮ್ ಶಾ ಮುನ್ನಡೆಸಲಿದ್ದಾರೆ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಹೇಳಿದ್ದಾರೆ.

ತಮ್ಮ ಯೂಟ್ಯೂಟ್ ಚಾನೆಲ್‌ನಲ್ಲಿ ಮಾತನಾಡಿದ ಡ್ಯಾನಿಶ್ ಕನೇರಿಯಾ, "ರಾವಲ್ಪಿಂಡಿ ವಿಕೆಟ್‌ನಲ್ಲಿ ಸಾಕಷ್ಟು ಹುಲ್ಲು ಇಲ್ಲ, ಪಿಚ್‌ ಸ್ವಲ್ಪ ನಿಧಾನಗತಿಯಲ್ಲಿ ವರ್ತಿಸಲಿದೆ. ಪ್ರಮುಖ ಬೌಲರ್ ಶಾಹೀನ್ ಶಾ ಅಫ್ರಿದಿ ಅನುಪಸ್ಥಿತಿಯಲ್ಲಿ ಪಾಕಿಸ್ತಾನದ ವೇಗದ ಬೌಲಿಂಗ್ ದಾಳಿಯನ್ನು ನಸೀಮ್ ಶಾ ಸರಣಿಯಲ್ಲಿ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ, ಅವರು ತಂಡದ ಪ್ರಮುಖ ಬೌಲರ್ ಆಗಲಿದ್ದಾರೆ" ಎಂದು ಹೇಳಿದ್ದಾರೆ.

ಶೇ.49ರಷ್ಟು ಕ್ರಿಕೆಟಿಗರು ಟಿ20 ಲೀಗ್‌ಗಳಿಗಾಗಿ ರಾಷ್ಟ್ರೀಯ ಒಪ್ಪಂದ ತಿರಸ್ಕರಿಸಲು ಸಿದ್ಧರಾಗಿದ್ದಾರೆ; ಸಮೀಕ್ಷೆಶೇ.49ರಷ್ಟು ಕ್ರಿಕೆಟಿಗರು ಟಿ20 ಲೀಗ್‌ಗಳಿಗಾಗಿ ರಾಷ್ಟ್ರೀಯ ಒಪ್ಪಂದ ತಿರಸ್ಕರಿಸಲು ಸಿದ್ಧರಾಗಿದ್ದಾರೆ; ಸಮೀಕ್ಷೆ

ಇದುವರೆಗೂ 13 ಟೆಸ್ಟ್ ಪಂದ್ಯಗಳನ್ನು ಆಡಿರುವ ನಸೀಮ್ ಶಾ 33 ವಿಕೆಟ್‌ಗಳನ್ನು ಪಡೆದಿದ್ದಾರೆ. ಒಂದು ಬಾರಿ 5 ವಿಕೆಟ್‌ಗಳನ್ನು ಪಡೆದ ಸಾಧನೆ ಕೂಡ ಮಾಡಿದ್ದಾರೆ. 2019ರಲ್ಲಿ ಮೊದಲ ಬಾರಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಸೀಮ್ ಶಾ, ತವರಿನಲ್ಲಿ ಆಡಿರುವ 5 ಟೆಸ್ಟ್ ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದಾರೆ. ಅದೇ ಪ್ರದರ್ಶನವನ್ನು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮುಂದುವರೆಸುವ ಭರವಸೆಯಲ್ಲಿದ್ದಾರೆ.

ಆತ ಪ್ರತಿಭಾವಂತ ಬೌಲರ್

ಆತ ಪ್ರತಿಭಾವಂತ ಬೌಲರ್

ನಸೀಮ್ ಶಾ ಸ್ವಲ್ಪ ಕಚ್ಚಾ ಬೌಲರ್ ಎಂದು ಡ್ಯಾನಿಶ್ ಕನೇರಿಯಾ ಹೇಳಿದ್ದಾರೆ. ಆದರೂ ಕೂಡ ಅವರು ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡುವಷ್ಟು ಪ್ರತಿಭಾವಂತ ಎಂದು ಹೇಳಿದ್ದಾರೆ. ನಸೀಮ್ ಶಾ ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಪ್ರಮುಖ ಬೌಲರ್ ಆಗಿದ್ದರು. ಶಾಹೀನ್ ಶಾ ಅಫ್ರಿದಿ ಅನುಪಸ್ಥಿತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಐದು ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಪಡೆದು ಪಾಕಿಸ್ತಾನವನ್ನು ಫೈನಲ್ ತಲುಪಲು ಸಹಾಯ ಮಾಡಿದರು.

"ನಸೀಮ್ ಶಾ ಪ್ರತಿಭಾವಂತ ಯುವ ಬೌಲರ್, ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಆತ ಉತ್ತಮವಾದ ಲಯದಲ್ಲಿದ್ದಾನೆ. ಶಾಹೀನ್ ಅನುಪಸ್ಥಿತಿಯಲ್ಲಿ ಆತ ಏಷ್ಯಾಕಪ್‌ನಲ್ಲಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದ್ದಾನೆ" ಎಂದು ಅವರು ಹೇಳಿದರು.

Women IPL : ಫ್ರಾಂಚೈಸಿಗಳಿಗೆ 400 ಕೋಟಿ ರುಪಾಯಿ ಮೂಲ ಬೆಲೆ ನಿಗದಿ, ಮೂಲಗಳ ವರದಿ

ಗೆಲ್ಲಲೇಬೇಕಾದ ಒತ್ತಡದಲ್ಲಿ ಪಾಕಿಸ್ತಾನ

ಗೆಲ್ಲಲೇಬೇಕಾದ ಒತ್ತಡದಲ್ಲಿ ಪಾಕಿಸ್ತಾನ

ನಸೀಂ ಶಾ 2022ರ ಆರಂಭದಲ್ಲಿ ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆರು ವಿಕೆಟ್ ಪಡೆದಿದ್ದರು. ಶ್ರೀಲಂಕಾದಲ್ಲಿ ಆಡಿದ ಎರಡು ಟೆಸ್ಟ್‌ಗಳಲ್ಲಿ 7 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು.

ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಡಿಸೆಂಬರ್ 1ರ ಗುರುವಾರ ರಾವಲ್ಪಿಂಡಿಯಲ್ಲಿ ಆರಂಭವಾಗಲಿದೆ. ಮುಂದಿನ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪುವ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಪಾಕಿಸ್ತಾನ ಈ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಬೇಕಿದೆ. ಪಾಕಿಸ್ತಾನ ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ, ಮತ್ತೊಂದೆಡೆ ಇಂಗ್ಲೆಂಡ್ ಫೈನಲ್ ತಲುಪುವ ಸ್ಪರ್ಧೆಯಿಂದ ಹೊರಬಿದ್ದಿದೆ.

ಪಾಕಿಸ್ತಾನ 2005ರ ಪ್ರದರ್ಶನವನ್ನು ಪುನರಾವರ್ತಿಸಲು ನೋಡುತ್ತಿದ್ದಾರೆ. 2005ರಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಆಡಿದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದರು. ಈಗಲೂ ಅಂತಹದ್ದೆ ಪ್ರದರ್ಶನ ಬಂದರೆ ಮಾತ್ರ ಟೆಸ್ಟ್‌ನಲ್ಲಿ ವಿಶ್ವ ಚಾಂಪಿಯನ್‌ಗಳಾಗುವ ಅವಕಾಶ ಇದೆ.

ಟೆಸ್ಟ್ ಸರಣಿಗೆ ಇಂಗ್ಲೆಂಡ್, ಪಾಕಿಸ್ತಾನ ತಂಡ

ಟೆಸ್ಟ್ ಸರಣಿಗೆ ಇಂಗ್ಲೆಂಡ್, ಪಾಕಿಸ್ತಾನ ತಂಡ

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಅಜರ್ ಅಲಿ, ಫಹೀಮ್ ಅಶ್ರಫ್, ಹ್ಯಾರಿಸ್ ರೌಫ್, ಇಮಾಮ್-ಉಲ್-ಹಕ್, ಮೊಹಮ್ಮದ್ ಅಲಿ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ನೌಮನ್ ಅಲಿ, ಸಲ್ಮಾನ್ ಅಲಿ ಅಘಾ, ಸರ್ಫರಾಜ್ ಅಹ್ಮದ್, ಸೌದ್ ಶಕೀಲ್, ಶಾನ್ ಮಸೂದ್ ಮತ್ತು ಜಾಹಿದ್ ಮೆಹಮೂದ್.

ಇಂಗ್ಲೆಂಡ್: ಬೆನ್ ಸ್ಟೋಕ್ಸ್ (ನಾಯಕ), ಜೇಮ್ಸ್ ಆಂಡರ್ಸನ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ವಿಲ್ ಜ್ಯಾಕ್ಸ್, ಕೀಟನ್ ಜೆನ್ನಿಂಗ್ಸ್, ಜ್ಯಾಕ್ ಲೀಚ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್‌ಟನ್, ಓಲೀ ಪೋಪ್, ಓಲೀ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್, ರೆಹಾನ್ ಅಹ್ಮದ್.

For Quick Alerts
ALLOW NOTIFICATIONS
For Daily Alerts
Story first published: Tuesday, November 29, 2022, 22:02 [IST]
Other articles published on Nov 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X