ಪಾಕಿಸ್ತಾನ ತಂಡ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ರಾವಲ್ಪಿಂಡಿಯಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡಿದೆ. ಹೀಗಾಗಿ ಬಾಬರ್ ಅಜಂ ನೇತೃತ್ವದ ಆತಿಥೇಯ ಪಾಕಿಸ್ತಾನ ತಂಡವನ್ನು ಇಂಗ್ಲೆಂಡ್ 74 ರನ್‌ಗಳ ಅಂತರದಿಂದ ಮಣಿಸಿದೆ.
ಇಂಗ್ಲೆಂಡ್ ತಂಡದ ಈ ಗೆಲುವಿನ ಬಳಿಕ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಮಾತನಾಡಿದ್ದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬಗ್ಗೆ ಭಾರೀ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಬೆನ್ ಸ್ಟೋಕ್ಸ್ ಈ ಪಂದ್ಯದಲ್ಲಿ ಪ್ರದರ್ಶಿಸಿದ ನಾಯಕತ್ವಕ್ಕಿಂತ ಉತ್ತಮವಾದ ನಾಯಕತ್ವವನ್ನು ನಿರೀಕ್ಷಿಸುವುದು ಅಸಾಧ್ಯ ಎಂದಿದ್ದಾರೆ.
PAK vs ENG: ಪಂದ್ಯದ ವೇಳೆ ಗಾಯಗೊಂಡು ಟೆಸ್ಟ್ ಸರಣಿಯಿಂದ ಹೊರಬಿದ್ದ ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್
"ಬೆನ್ ಸ್ಟೋಕ್ಸ್ ಅವರಿಂದ ನೋಡಿದ ಈ ವಾರದ ನಾಯಕತ್ವಕ್ಕಿಂತ ಉತ್ತಮವಾದ ನಾಯಕತ್ವವನ್ನು ನಾವು ನಿರೀಕ್ಷಿಸುವುದು ಅಸಾಧ್ಯ. ಅವರು ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಕೂಡ ಸೂಕ್ತವಾಗಿಯೇ ಇದ್ದವು. ಹಾಗಾಗಿ ಅವರಿ 1-0 ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ" ಎಂದಿದ್ದಾರೆ ಇಂಗ್ಲೆಂಡ್ ತಂಡದ ಮಾಜಿ ನಾಯಕನೂ ಆಗಿರುವ ನಾಸಿರ್ ಹುಸೇನ್.
ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲಿಗೆ ಇಂಗ್ಲೆಂಡ್ ಸ್ಪೋಟಕ ಪ್ರದರ್ಶನ ನೀಡುವ ಮೂಲಕ ಪಂದ್ಯದಲ್ಲಿ ಬಿಗಿ ಹಿಡಿತವನ್ನು ಸಾಧಿಸಿತ್ತು. ಆದರೆ ಆತಿಥೇಯ ಪಾಕಿಸ್ತಾನ ಈ ಪಂದ್ಯದಲ್ಲಿ ಪಟ್ಟು ಸಡಿಲಿಸದೆ ಅದ್ಭುತ ಪೈಪೋಟಿ ನೀಡಿತ್ತು. ಆದರೆ ಅಂತಿಮ ಹಂತದಲ್ಲಿ ಎಡವಿದ ಪಾಕಿಸ್ತಾನ ಸೋಲಿಗೆ ಶರಣಾಗಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಅದ್ಭುತ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಪೈಪೋಟಿ ನೀಡಿತ್ತು. ಅಂತಿಮ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ 338 ರನ್‌ಗಳಖ ಗುರಿಯನ್ನು ನಿಗದಿಪಡಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಪಾಕಿಸ್ತಾನ ಒಂದು ಹಂತದಲ್ಲಿ ಗೆಲುವಿನ ವಿಶ್ವಾಸವನ್ನು ಮೂಡಿಸಿತ್ತು. ಆದರೆ ಅಂತಿಮ ದಿನದಾಟದ ಮೂರನೇ ಸೆಶನ್‌ನ ಅಂತಿಮ ಹಂತದಲ್ಲಿ ಪಾಕಿಸ್ತಾನ ತಂಡ ನಾಟಕೀಯ ಕುಸಿತಕ್ಕೆ ಒಳಗಾಯಿತು. ಇದರ ಪರಿಣಾಮವಾಗಿ ಪಾಕಿಸ್ತಾನ ತಂಡ ಈ ಪಂದ್ಯವನ್ನು ಇಂಗ್ಲೆಂಡ್‌ಗೆ ಒಪ್ಪಿಸಿದೆ. ಪ್ರವಾಸಿ ಇಂಗ್ಲೆಂಡ್ 74 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
IND Vs BAN : ಇದಕ್ಕೆ ಅವರೇ ಉತ್ತರ ನೀಡಬೇಕು! ಭಾರತ ತಂಡದ ಫೀಲ್ಡಿಂಗ್ ಬಗ್ಗೆ ದಿನೇಶ್ ಕಾರ್ತಿಕ್ ಪ್ರತಿಕ್ರಿಯೆ
ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ನಸೀಮ್ ಶಾ, ಮೊಹಮ್ಮದ್ ಅಲಿ, ಹಾರಿಸ್ ರೌಫ್, ಜಾಹಿದ್ ಮಹಮೂದ್
ಬೆಂಚ್: ಶಾನ್ ಮಸೂದ್, ಮೊಹಮ್ಮದ್ ನವಾಜ್, ಸರ್ಫರಾಜ್ ಅಹ್ಮದ್, ಮೊಹಮ್ಮದ್ ವಾಸಿಂ ಜೂನಿಯರ್, ನೌಮನ್ ಅಲಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ವಿಕೆಟ್ ಕೀಪರ್), ಜೋ ರೂಟ್, ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ವಿಲ್ ಜ್ಯಾಕ್ಸ್, ಜ್ಯಾಕ್ ಲೀಚ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಕೀಟನ್ ಜೆನ್ನಿಂಗ್ಸ್, ಬೆನ್ ಫೋಕ್ಸ್, ರೆಹಾನ್ ಅಹ್ಮದ್, ಜೇಮೀ ಓವರ್ಟನ್, ಮಾರ್ಕ್ ವುಡ್