ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 184 ರನ್‌ಗಳಿಂದ ಗೆಲುವಿನ ನಗೆ ಬೀರಿದೆ. ಮೆಲ್ಬೋರ್ನ್‌ನಲ್ಲಿ ನಡೆದ ಈ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್‌ಗಳಿಂದ ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ನಾಥನ್ ಲಿಯಾನ್ 5 ವಿಕೆಟ್ ಕಬಳಿಸಿ ಆಸ್ಟ್ರೇಲಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಸ್ಟಾರ್ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಮುರಿದ್ದಾರೆ. ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್ ಅವರನ್ನು ಲಿಯಾನ್ ಹಿಂದಿಕ್ಕಿದ್ದಾರೆ.
ಭಾರತ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ನಾಥನ್ ಲಿಯಾನ್ 96 ರನ್‌ಗಳಿಗೆ 3 ವಿಕೆಟ್ ಪಡೆದರೆ, ಎರಡೇ ಇನ್ನಿಂಗ್ಸ್‌ನಲ್ಲಿ 37 ರನ್ ಬಿಟ್ಟುಕೊಟ್ಟು 2 ವಿಕೆಟ್ ಉರುಳಿಸಿದರು. ಈ ಮೂಲಕ ಲಿಯಾನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 538 ಟೆಸ್ಟ್ ವಿಕೆಟ್‌ಗಳನ್ನು ಪೂರೈಸುವುದರ ಜೊತೆಗೆ ಅಶ್ವಿನ್ ದಾಖಲೆಯನ್ನು ಬ್ರೇಕ್ ಮಾಡಿದರು. ಈ ಕುರಿತು ಮಾಹಿತಿ ಇಲ್ಲಿದೆ.

ಭಾರತ ತಂಡದ ಪರ ಅಶ್ವಿನ್ 106 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 537 ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ರಿಸ್ಪೇನ್ ಟೆಸ್ಟ್ ಪಂದ್ಯದ ಬಳಿಕ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದೀಗ ನಾಥನ್ ಲಿಯಾನ್ 133 ಪಂದ್ಯಗಳಲ್ಲಿ 538 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಲಿಯಾನ್ 7ನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ 8ನೇ ಸ್ಥಾನಕ್ಕೆ ಇಳಿದಿದ್ದಾರೆ.
ಇದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯೂಟಿಸಿ)ನಲ್ಲಿಯೂ ಅಶ್ವಿನ್ ದಾಖಲೆಯನ್ನು ನಾಥನ್ ಲಿಯಾನ್ ಸರಿಗಟ್ಟಿದ್ದಾರೆ. ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಅಶ್ವಿನ್ 195 ವಿಕೆಟ್‌ಗಳನ್ನು ಹೊಂದಿದ್ದಾರೆ. ಇದೀಗ ಲಿಯಾನ್ ಕೂಡ 195 ವಿಕೆಟ್‌ಗಳನ್ನು ಪಡೆಯುವ ಮೂಲಕ ಅಶ್ವಿನ್ ದಾಖಲೆ ಸರಿಗಟ್ಟಿದ್ದಾರೆ. ಮತ್ತೊಂದೆಡೆ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ದಾಖಲೆಯನ್ನು ಮಾಡಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಕೂಡ 195 ವಿಕೆಟ್ ಪಡೆದಿದ್ದಾರೆ.