Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Nathan Lyon: ಡಬ್ಲ್ಯೂಟಿಸಿಯಲ್ಲಿ ಈ ಸಾಧನೆ ಮಾಡಿದ ಎರಡನೇ ಬೌಲರ್ ನಾಥನ್ ಲಿಯಾನ್

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್‌ನ (ಡಬ್ಲ್ಯೂಟಿಸಿ) ಮೂರನೇ ಆವೃತ್ತಿಯು ಈಗ ಕೊನೆಯ ಹಂತದಲ್ಲಿದೆ. ಪ್ರಸ್ತುತ ಆಸ್ಟ್ರೇಲಿಯಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸದಲ್ಲಿದೆ. ಡಬ್ಲ್ಯೂಟಿಸಿ ಫೈನಲ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ನಾಥನ್ ಲಿಯಾನ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಥನ್ ಲಿಯಾನ್ ಇತಿಹಾಸ ನಿರ್ಮಿಸಿದ್ದಾರೆ.

ಭಾರತ ತಂಡದ ಮಾಜಿ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಂದ ಸಾಧ್ಯವಾಗದ ಸಾಧನೆಯನ್ನು ನಾಥನ್ ಲಿಯಾನ್ ಮಾಡಿದ್ದಾರೆ. ಅಲ್ಲದೆ, ತಮ್ಮದೆ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ನಾಥನ್ ಹಿಂದಿಕ್ಕಿದ್ದಾರೆ.

Nathan Lyon completes 200 wickets in World Test Championship

ಕಳೆದ ಮೂರು ಡಬ್ಲ್ಯೂಟಿಸಿ ಆವೃತ್ತಿಗಳಿಂದ ನಾಥನ್ ಲಿಯಾನ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ಅವರು ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.

ನಾಥನ್ ಲಿಯಾನ್ ಡಬ್ಲ್ಯೂಟಿಸಿಯಲ್ಲಿ 200 ವಿಕೆಟ್ ಪಡೆದ ದಾಖಲೆಯನ್ನು ಮಾಡಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ನಾಥನ್ ಅವರಿಗೂ ಮೊದಲು ಪ್ಯಾಟ್ ಕಮ್ಮಿನ್ಸ್ ಡಬ್ಲ್ಯೂಟಿಸಿಯಲ್ಲಿ 200 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾಟ್ ಕಮ್ಮಿನ್ಸ್ ನಂತರ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ನಾಥನ್ ಪಾತ್ರರಾಗಿದ್ದಾರೆ.

ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಗಾಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಆಸ್ಟ್ರೇಲಿಯಾ ಮಣಿಸಿದೆ. ಈ ಮೂಲಕ ನಾಥನ್ ಕೂಡ ಅಮೋಘ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ದಿನೇಶ್ ಚಾಂಡಿಮಾಲ್ ಅವರನ್ನು ಔಟ್ ಮಾಡುವ ಮೂಲಕ ನಾಥನ್ 200 ವಿಕೆಟ್ ಪೂರೈಸಿದ್ದಾರೆ. ಡಬ್ಲ್ಯೂಟಿಸಿಯಲ್ಲಿ ನಾಥನ್ 49ನೇ ಪಂದ್ಯದಲ್ಲಿ 200ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ ಮೊದಲ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಇದಾದ ನಂತರ ಅಶ್ವಿನ್ ಡಬ್ಲ್ಯೂಟಿಸಿಯಲ್ಲಿ 195 ವಿಕೆಟ್ ಹೊಂದಿದ್ದಾರೆ.

ನಾಥನ್ ಲಿಯಾನ್ ಡಬ್ಲ್ಯೂಟಿಸಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ರೇಸ್‌ನಲ್ಲಿಯೂ ಪ್ಯಾಟ್ ಕಮ್ಮಿನ್ಸ್ ಅವರನ್ನು ನಾಥನ್ ಹಿಂದಿಕ್ಕಿದ್ದಾರೆ. ಡಬ್ಲ್ಯೂಟಿಸಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ನಾಥನ್ ಮೊದಲ ಸ್ಥಾನದಲ್ಲಿದ್ದಾರೆ. ನಾಥನ್ ಒಟ್ಟು 203 ವಿಕೆಟ್‌ಗಳನ್ನು ಹೊಂದಿದ್ದಾರೆ.

ಡಬ್ಲ್ಯೂಟಿಸಿಯಲ್ಲಿ ಹೆಚ್ಚು ವಿಕೆಟ್ ಪಡೆದವರು

  • ನಾಥನ್ ಲಿಯಾನ್ (ಆಸ್ಟ್ರೇಲಿಯಾ)- 203 ವಿಕೆಟ್
  • ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ)- 200 ವಿಕೆಟ್
  • ಆರ್ ಅಶ್ವಿನ್ (ಭಾರತ) - 195 ವಿಕೆಟ್
  • ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)- 168 ವಿಕೆಟ್
  • ಜಸ್ಪ್ರೀತ್ ಬುಮ್ರಾ (ಭಾರತ)- 156 ವಿಕೆಟ್

Story first published: Saturday, February 1, 2025, 18:58 [IST]
Other articles published on Feb 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+