For Quick Alerts
ALLOW NOTIFICATIONS  
For Daily Alerts
 

Naveen-ul-Haq: ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕಿರಿಕ್ ನವೀನ್-ಉಲ್-ಹಕ್; ವಿರಾಟ್ ಕೊಹ್ಲಿ ಭಯವೇ?

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಯುವ ವೇಗಿ ನವೀನ್-ಉಲ್-ಹಕ್ ಅವರು ಭಾರತದಲ್ಲಿ ನಡೆಯಲಿರುವ 2023ರ ವಿಶ್ವಕಪ್ ಮುಕ್ತಾಯದ ನಂತರ, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.

24 ವರ್ಷದ ಯುವ ಬೌಲರ್ ನವೀನ್-ಉಲ್-ಹಕ್ ವಿಶ್ವಕಪ್ ನಂತರ ತನ್ನ ನಿವೃತ್ತಿ ನಿರ್ಧಾರವನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾನೆ.

ನವೀನ್-ಉಲ್-ಹಕ್ ಆಟಕ್ಕಿಂತ ಹೆಚ್ಚಾಗಿ ವಿವಾದಗಳಿಂದಲೇ ಹೆಚ್ಚು ಹೆಸರುವಾಸಿಯಾಗಿದ್ದಾನೆ. ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಪ್ರತಿನಿಧಿಸುವ ನವೀನ್-ಉಲ್-ಹಕ್, 2023ರ ಐಪಿಎಲ್ ವೇಳೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದನು.

naveen-ul-haq-announce-retirement

ನವೀನ್-ಉಲ್-ಹಕ್ ಅವರು ಟಿ20 ಪಂದ್ಯಗಳಲ್ಲಿ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರೆಸಲು ಮತ್ತು ಚುಟುಕು ಸ್ವರೂಪದ ಮೇಲೆ ಹೆಚ್ಚು ಗಮನ ಹರಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ನವೀನ್-ಉಲ್-ಹಕ್ ತನ್ನ ಅಫ್ಘಾನಿಸ್ತಾನ ರಾಷ್ಟ್ರೀಯ ತಂಡದ ಸಹ ಆಟಗಾರರೊಂದಿಗೆ ಇತ್ತೀಚೆಗೆ ಭಾರತಕ್ಕೆ ಆಗಮಿಸಿದ್ದು, ಏಕದಿನ ವಿಶ್ವಕಪ್ ಆಡುವ ಉತ್ಸುಕರಾಗಿದ್ದಾರೆ. ಬಲಗೈ ಯುವ ವೇಗಿ ಗಾಯದ ಕಾರಣ ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಷ್ಯಾ ಕಪ್‌ ಪಂದ್ಯಾವಳಿಯಿಂದ ಹೊರಗುಳಿದಿದ್ದರು.

ವಾಸ್ತವವಾಗಿ, ಅಫ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುವ ಕೆಲವೇ ದಿನಗಳ ಮೊದಲು ನವೀನ್-ಉಲ್-ಹಕ್ ಅವರನ್ನು ವಿಶ್ವಕಪ್ ತಂಡದಲ್ಲಿ ಅಯ್ಕೆ ಮಾಡಲಾಯಿತು. ಈ ಘಟನೆಯು ಎರಡು ವರ್ಷಗಳಿಗೂ ಹೆಚ್ಚಿನ ಅಂತರದ ನಂತರ, ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮರಳುವುದನ್ನು ಸೂಚಿಸುತ್ತದೆ.

naveen-ul-haq-announce-retirement

"ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ಈ ವಿಶ್ವಕಪ್‌ನ ಕೊನೆಯಲ್ಲಿ ನಾನು ಏಕದಿನ ಕ್ರಿಕೆಟ್ ಸ್ವರೂಪದಿಂದ ನಿವೃತ್ತಿ ಘೋಷಿಸಲು ಬಯಸುತ್ತೇನೆ ಮತ್ತು ನನ್ನ ದೇಶಕ್ಕಾಗಿ ಟಿ20 ಕ್ರಿಕೆಟ್‌ನಲ್ಲಿ ಈ ನೀಲಿ ಜೆರ್ಸಿಯನ್ನು ಧರಿಸುವುದನ್ನು ಮುಂದುವರಿಸುತ್ತೇನೆ".

"ಇದು ಸುಲಭದ ನಿರ್ಧಾರವಲ್ಲ, ಆದರೆ ನನ್ನ ಆಟದ ವೃತ್ತಿಜೀವನವನ್ನು ಮುಂದುವರಿಸಲು ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿತ್ತು. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ನನ್ನ ಎಲ್ಲಾ ಅಭಿಮಾನಿಗಳು ಅವರ ಬೆಂಬಲ ಮತ್ತು ಅಚಲ ಪ್ರೀತಿಗಾಗಿ ಧನ್ಯವಾದ ಹೇಳಲು ಬಯಸುತ್ತೇನೆ," ಎಂದು ನವೀನ್-ಉಲ್-ಹಕ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿನ ನವೀನ್-ಉಲ್-ಹಕ್ ದಾಖಲೆಗಳ ಕುರಿತು ಮಾತನಾಡುವುದಾದರೆ, ಬಲಗೈ ವೇಗಿ ಇದುವರೆಗೆ ಏಳು ಏಕದಿನ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ತಂಡವನ್ನು ಪ್ರತಿನಿಧಿಸಿದ್ದಾರೆ. 25.43ರ ಸರಾಸರಿ ಮತ್ತು 5.79ರ ಎಕಾನಮಿ ದರದಲ್ಲಿ 14 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನವೀನ್-ಉಲ್-ಹಕ್ 42 ರನ್‌ಗಳನ್ನು ಬಿಟ್ಟುಕೊಟ್ಟು ನಾಲ್ಕು ವಿಕೆಟ್‌ಗಳನ್ನು ಪಡೆದಿರುವುದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

ಇದೇ ವೇಳೆ, ಅಫ್ಘಾನಿಸ್ತಾನ ತಂಡವು ಏಕದಿನ ವಿಶ್ವಕಪ್ ಪಂದ್ಯಾವಳಿಯ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ತಂಡದ ವಿರುದ್ಧ ಶನಿವಾರ, ಅಕ್ಟೋಬರ್ 7ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲು ಸಿದ್ಧವಾಗಿದೆ.

ಅಫ್ಘಾನಿಸ್ತಾನ ತಂಡವು ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧ ಪಂದ್ಯಾವಳಿಯ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

Story first published: Wednesday, September 27, 2023, 21:41 [IST]
Other articles published on Sep 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+