ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ ಕೋಚ್ ಸಾಧ್ಯತೆ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮುಕ್ತಾಯವಾದ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಭಾಗವಹಿಸದ ಆಟಗಾರರು ಕಣಕ್ಕಿಳಿಯಲಿದ್ದಾರೆ. ಈ ಪಂದ್ಯದಲ್ಲಿ ಭಾರತ ತಂಡದ ಕೋಚ್ ಹುದ್ದೆಯನ್ನು ಎನ್‌ಸಿಎ ಮುಖ್ಯಸ್ಥ ಹಾಗೂ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ವಹಿಸಿಕೊಳ್ಳುವ ಸಾಧ್ಯತೆಯಿದೆ.
ವಿವಿಎಸ್ ಇತ್ತೀಚೆಗಷ್ಟೇ ಅಂತ್ಯವಾದ ಐರ್ಲೆಂಡ್ ವಿರುದ್ಧಧ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಮುಖ್ಯ ಕೋಚ್ ಆಗಿ ಜವಾಬ್ಧಾರಿ ವಹಿಸಿಕೊಂಡಿದ್ದರು. ಮುಖ್ಯ ಆಟಗಾರರನ್ನು ಒಳಗೊಂಡ ತಂಡ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಐರ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ ಲಕ್ಷ್ಮಣ್.

ಕೋಚ್ ದ್ರಾವಿಡ್‌ಗೂ ವಿಶ್ರಾಂತಿ
ಟೆಸ್ಟ್ ಸರಣಿ ಮುಕ್ತಾಯವಾದ ಎರಡನೇ ದಿನದಲ್ಲಿಯೇ ಟಿ20 ಸರಣಿ ಆರಂಭವಾಗಲಿದೆ. ಹೀಗಾಗಿ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿರುವ ಆಟಗಾರರಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ರಿಷಭ್ ಪಂತ್ ಸೇರಿದಂತೆ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದ್ದ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋಚ್ ರಾಹುಲ್ ದ್ರಾವಿಡ್‌ಗೆ ಕೂಡ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಎಡ್ಜ್‌ಬಾಸ್ಟನ್‌ನಲ್ಲಿ ಶನಿವಾರದಂದು ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಈ ಆಟಗಾರರು ಜೊತೆಯಾಗಲಿದ್ದಾರೆ.

ರೋಹಿತ್ ನಾಯಕತ್ವದಲ್ಲೇ ಕಣಕ್ಕಿಳಿಯಲಿದೆ ಭಾರತ
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಕೊರೊನಾವೈರಸ್ ಕಾರಣದಿಂದಾಗಿ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಇದೀಗ ಸಂಪೂರ್ಣವಾಗಿ ಗುಣಮುಖವಾಗಿದ್ದು ಚುಟಕು ಸರಣಿಗೆ ಅಭ್ಯಾಸ ಆರಂಭಿಸಿದ್ದಾರೆ.

ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್
ವಿವಿಎಸ್ ಲಕ್ಷ್ಮಣ್ ಪ್ರಸ್ತುತ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಕಳೆದ ವರ್ಷ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿದ್ದ ರಾಹುಲ್ ದ್ರಾವಿಡ್ ಕೂಡ ಶ್ರೀಲಂಕಾಗೆ ಪ್ರವಾಸ ಕೈಗೊಂಡಿದ್ದ ಭಾರತದ ವೈಟ್‌ಬಾಲ್ ತಂಡಕ್ಕೆ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಮೊದಲ ಟಿ20 ಪಂದ್ಯದಲ್ಲಿ ಭಾಗಿಯಾಗಲಿರುವ ಭಾರತ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications