Asia Cup T20: ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು? ರೇಸ್‌ನಲ್ಲಿ 3 ಆಟಗಾರರು
ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಮುಂದಿನ ತಿಂಗಳು ಆರಂಭವಾಗಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾವನ್ನು ಇನ್ನು ಪ್ರಕಟಿಸಿಲ್ಲ. ಈ ಟೂರ್ನಿಗಾಗು ಆಗಸ್ಟ್ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರ ಕಣ್ಣಗಳು ಬಿಸಿಸಿಐ ಆಯ್ಕೆ ಸಮಿತಿ ಮೇಲೆ ನೆಟ್ಟಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಬಹುದು. ಆದರೆ ಈ ಸರಣಿಯಲ್ಲಿ ಭಾರತದ ಪರ ಆರಂಭಿಕರಾಗಿ ಯಾರು ಕಣಕ್ಕೆ ಇಳಿಯಬಹುದು ಎಂಬ ಚರ್ಚೆಗಳು ಆರಂಭವಾಗಿವೆ.
ಟೀಮ್ ಇಂಡಿಯಾದ ಪರ ಕಳೆದ ಕೆಲವು ವರ್ಷಗಳಿಂದ ಟಿ20 ಕ್ರಿಕೆಟ್‌ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡ ಅಭಿಷೇಕ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರು ತಮ್ಮ ಅಬ್ಬರದ ಆಟದಿಂದ ಎದುರಾಳಿಗಳಿಗೆ ಕಾಟ ನೀಡಿದ್ದಾರೆ. ಅಲ್ಲದೆ ಇವರ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲೂ ಅಗ್ರ ಸ್ಥಾನ ಲಭಿಸಿದೆ. ಹೀಗಾಗಿ ಇವರು ಆಡುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಇವರೊಂದಿಗೆ ಇನ್ನೋರ್ವ ಆರಂಭೀಕ ಆಟಗಾರ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿರುವ ಯಶಸ್ವಿ ಜೈಸ್ವಾಲ್ ಅವರು ಸಹ ಆರಂಭಿಕ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಇವರು ಇಂಗ್ಲೆಂಡ್ ಪ್ರವಾಸದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದ್ದಾರೆ. ಇವರು ಆಡಿದ 5 ಪಂದ್ಯಗಳ 10 ಇನಿಂಗ್ಸ್‌ಗಳಲ್ಲಿ 41ರ ಸರಾಸರಿಯಲ್ಲಿ 411 ರನ್ ಕಲೆ ಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಇವರು ಬಾರಿಸಿದ್ದಾರೆ.
ಯಶಸ್ವಿ ಟಿ20 ಸಾಧನೆ
ಯಶಸ್ವಿ ಜೈಸ್ವಾಲ್ ಕಳೆದ ಒಂದು ವರ್ಷದಿಂದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಈ ಇವರು ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ. ಇವರು ಭಾರತದ ಪರ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದು 36ರ ಸರಾಸರಿಯಲ್ಲಿ 723 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಶತಕ, 5 ಅರ್ಧಶತಕಗಳು ಸೇರಿವೆ.
ಗಿಲ್ ಸಿಗುತ್ತಾ ಚಾನ್ಸ್?
ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಟಿ20 ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡುವ ಆಸೆಯನ್ನು ಹೊಂದಿದ್ದಾರೆ. ಇವರು ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ವರದಿಗಳು ಹೇಳುತ್ತಿವೆ. ಗಿಲ್ ಅಭಿಷೇಕ್ ಅವರೊಂದಿಗೆ ಇನ್ನಿಂಗ್ಸ್ ಪ್ರಾರಂಭಿಸಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಇವರು ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ.
ಸಂಜು ಕಣ್ಣು
ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಸ್ಥಾನ ಭದ್ರ ಪಡಿಸಿಕೊಂಡಿರುವ ಸಂಜು ಸ್ಯಾಮ್ಸನ್ ಸಹ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿದ್ದಾರೆ. ಅಲ್ಲದೆ ಆರಂಭಿಕರಾಗಿ ಕಾಣಿಸಿಕೊಳ್ಳುವ ಆಸೆ ಹೊಂದಿದ್ದಾರೆ. ಭಾರತ ಪರ ಸಂಜು 42 ಟಿ20 ಪಂದ್ಯಗಳಲ್ಲಿ 3 ಶತಕ ಮತ್ತು 2 ಅರ್ಧಶತಕ ಸೇರಿದಂತೆ 861 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications