Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸೀಸ್ ವಿರುದ್ಧ ಟಿ-20 ಸರಣಿ: ತಂಡಕ್ಕೆ ಮರಳಿದ ನೆಹ್ರಾ, ಹೊರಗುಳಿದ ರಹಾನೆ

ಮುಂಬೈ, ಅಕ್ಟೋಬರ್ 2: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ 15 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಹಿರಿಯ ಅನುಭವಿ ವೇಗದ ಬೌಲರ್ ಆಶಿಶ್ ನೆಹ್ರಾ ತಂಡಕ್ಕೆ ಮರಳಿದ್ದರೆ, ಅಜಿಂಕ್ಯಾ ರಹಾನೆಯನ್ನು ತಂಡದಿಂದ ಕೈಬಿಡಲಾಗಿದೆ.

ಅಕ್ಟೋಬರ್ 7ರಿಂದ ಟಿ-20 ಸರಣಿ ಆರಂಭವಾಗಲಿದ್ದು ಮೊದಲ ಪಂದ್ಯ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆಯಲಿದೆ.

Nehra makes comeback, Rahane left out for Australia T20Is

ಚಾಂಪಿಯನ್ಸ್ ಟ್ರೋಫಿ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಆಶಿಶ್ ನೆಹ್ರಾರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನು ಹೆಂಡತಿಯ ಅನಾರೋಗ್ಯದಿಂದ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ದೂರ ಉಳಿದಿದ್ದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಕೂಡ ತಂಡಕ್ಕೆ ಮರಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ವಿರಾಮ ಪಡೆದಿದ್ದ ಹಿರಿಯ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಟಿ-20 ತಂಡದಲ್ಲಿಯೂ ಕಾಣಿಸಿಕೊಂಡಿಲ್ಲ. ಅರ್ಧ ಶತಕ ಸಿಡಿಸಿ 5ನೇ ಏಕದಿನ ಪಂದ್ಯದಲ್ಲಿ ಅತ್ಯುತ್ತಮ ಆಟ ತೋರಿದ್ಧ ಅಜಿಂಕ್ಯಾ ರಹಾನೆಯನ್ನು ನೂತನ ತಂಡದಿಂದ ಹೊರಗಿಡಲಾಗಿದೆ. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ತಂಡಕ್ಕೆ ಆಯ್ಕೆಯಾಗದ ಇತರ ಪ್ರಮುಖ ಆಟಗಾರರಾಗಿದ್ದಾರೆ.

ನೂತನ ಟಿ-20 ತಂಡ ಹೀಗಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್ ರಾಹುಲ್, ಮನೀಷ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಆಶಿಶ್ ನೆಹ್ರಾ, ಅಕ್ಷರ್ ಪಟೇಲ್.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+