ನೆದರ್ಲೆಂಡ್ಸ್ vs ಪಾಕಿಸ್ತಾನ, ಏಕದಿನ ಸರಣಿ, ಮೂರನೇ ಪಂದ್ಯ: Live ಸ್ಕೋರ್ ಹಾಗೂ ಆಡುವ ಬಳಗ

ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ್ದು ಸರಣಿಯನ್ನು ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಪಂದ್ಯವನ್ನೂ ಗೆದ್ದು ವೈಟ್‌ವಾಶ್ ಮಾಡುವ ಉತ್ಸಾಹದಲ್ಲಿದೆ.
ಮತ್ತೊಂದೆಡೆ ನೆದರ್ಲೆಂಡ್ಸ್ ತಂಡ ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಅದ್ಭುತ ಪ್ರತಿರೋದವೊಡ್ಡುವಲ್ಲಿ ಯಶಸ್ವಿಯಾಗಿತ್ತು. ಒಂದು ಹಂತದಲ್ಲಿ ಪಾಕಿಸ್ತಾನಕ್ಕೆ ಹಿನ್ನಡೆಯುಂಟು ಮಾಡುವಲ್ಲಿಯೂ ಯಶಸ್ವಿಯಾಗಿತ್ತು. ಅಂತಿಮವಾಗಿ ಪಾಕಿಸ್ತಾನವೇ ಮೇಲುಗೈ ಸಾಧಿಸಿ 16 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡದ ಪರವಾಗಿ ಸಾಂಘಿಕ ಪ್ರದರ್ಶನ ಬಾರದ ಪರಿಣಾಮವಾಗಿ 7 ವಿಕೆಟ್‌ಗಳ ಅಂತರದ ಸೋಲು ಅನುಭವಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ:
ಏಷ್ಯಾಕಪ್‌ಗೆ ದಿನಗಣನೆ ಆರಂಭವಾಗಿದ್ದು ಪಾಕಿಸ್ತಾನ ತಂಡದ ಈ ಪ್ರದರ್ಶನ ತಂಡದ ಆಟಗಾರರಿಗೆ ಸಹಜವಾಗಿಯೇ ಒಂದಷ್ಟು ಆತ್ಮವಿಶ್ವಾಸವನ್ನು ತುಂಬಲಿದೆ. ಹೀಗಾಗಿ ವೈಟ್‌ವಾಶ್ ಮೂಲಕ ಈ ಸರಣಿಯನ್ನು ವಶಕ್ಕೆ ಪಡೆಯುವುದು ಪಾಕಿಸ್ತಾನದ ಗುರಿಯಾಗಿದೆ.
ನೆದರ್ಲೆಂಡ್ಸ್ ಆಡುವ ಬಳಗ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡೆ, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ಮೂಸಾ ಅಹ್ಮದ್, ಶರೀಜ್ ಅಹ್ಮದ್, ಆರ್ಯನ್ ದತ್, ವಿವಿಯನ್ ಕಿಂಗ್ಮಾ
ಬೆಂಚ್: ವೆಸ್ಲಿ ಬ್ಯಾರೆಸಿ, ಟಿಮ್ ಪ್ರಿಂಗಲ್, ರಿಯಾನ್ ಕ್ಲೈನ್, ಅರ್ನವ್ ಜೈನ್
ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್ (ನಾಯಕ), ಅಘಾ ಸಲ್ಮಾನ್, ಖುಶ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ, ಜಾಹಿದ್ ಮಹಮೂದ್
ಬೆಂಚ್: ಇಮಾಮ್-ಉಲ್-ಹಕ್, ಮೊಹಮ್ಮದ್ ರಿಜ್ವಾನ್, ಶಾದಾಬ್ ಖಾನ್, ಹಾರಿಸ್ ರೌಫ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications