ನ್ಯೂಜಿಲೆಂಡ್ ವಿರುದ್ಧ ಬೃಹತ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಕುರಿತು ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿ ಮುಗಿಸಿದೆ. ಮೊದಲಿಗೆ ಇತ್ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳಲ್ಲಿಯೂ ಟೀಮ್ ಇಂಡಿಯಾ ವಿರುದ್ಧ ಸೋತ ನ್ಯೂಜಿಲೆಂಡ್ ವೈಟ್ ವಾಷ್ ಮುಖಭಂಗಕ್ಕೆ ಒಳಗಾಗಿತ್ತು. ನಂತರ ನಡೆದಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿಯೂ ಕೂಡ 0-1 ಅಂತರದಿಂದ ನ್ಯೂಜಿಲೆಂಡ್ ಹೀನಾಯವಾಗಿ ಸೋತಿದೆ.
ಮೊದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಹಿಡಿತ ಸಾಧಿಸಿತ್ತಾದರೂ ಅಂತಿಮ ಹಂತದಲ್ಲಿ ನ್ಯೂಜಿಲೆಂಡ್ ತಂಡದ ಕೊನೆಯ ವಿಕೆಟ್ ಪಡೆಯಲಾಗದೇ ಪಂದ್ಯವನ್ನು ಕೈಚೆಲ್ಲಬೇಕಾಗಿ ಬಂತು. ಹೀಗೆ ಮೊದಲನೇ ಪಂದ್ಯವನ್ನು ಅಂತಿಮ ಹಂತದಲ್ಲಿ ಕೈಚೆಲ್ಲಿದ್ದ ಟೀಂ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತನ್ನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ದೊಡ್ಡ ಗೆಲುವನ್ನು ದಾಖಲಿಸಿದೆ.
ಹೌದು, ನ್ಯೂಜಿಲೆಂಡ್ ವಿರುದ್ಧದ ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 372 ರನ್‌ಗಳ ಅಂತರದಿಂದ ದಾಖಲಿಸಿರುವ ಗೆಲುವೇ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಾನು ಹೆಚ್ಚು ರನ್‌ಗಳ ಅಂತರದಿಂದ ದಾಖಲಿಸಿದ ಗೆಲುವಾಗಿದೆ. ಈ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ರನ್ ಅಂತರದಿಂದ ಗೆದ್ದ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿದೆ. ಹೀಗೆ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಬೃಹತ್ ಗೆಲುವನ್ನು ದಾಖಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಈ ಕೆಳಕಂಡಂತೆ ಭಿನ್ನವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.
ತಮ್ಮ ತಂಡದ ಗೆಲುವಿನ ಕುರಿತು ಕೂ ಅಪ್ಲಿಕೇಶನ್ ಮೂಲಕ ಬರೆದುಕೊಂಡಿರುವ ಚೇತೇಶ್ವರ್ ಪೂಜಾರ ತಂಡದ ಆಲ್ ರೌಂಡ್ ಪ್ರದರ್ಶನದಿಂದ ಮತ್ತೊಂದು ಟೆಸ್ಟ್ ಸರಣಿ ಗೆಲುವು ದಕ್ಕಿದೆ ಎಂದಿದ್ದಾರೆ ಹಾಗೂ ಐತಿಹಾಸಿಕ ದಾಖಲೆ ಬರೆದ ಅಜಾಜ್ ಪಟೇಲ್ ಅವರಿಗೂ ಚೇತೇಶ್ವರ್ ಪೂಜಾರ ಶುಭಾಶಯ ಕೋರಿದ್ದಾರೆ.
ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ಕೇವಲ ಮೂರೇ ದಿನಗಳ ಆಟದಲ್ಲಿ ಸೋಲಿಸುವುದು ಬೃಹತ್ ಸಾಧನೆ. ವಿಶ್ವ ಟೆಸ್ಟ್ ಚಾಂಪಿಯನ್ ತಂಡವನ್ನು ದೊಡ್ಡ ಅಂತರದಲ್ಲಿ ಸೋಲಿಸಿದ ಭಾರತ ತಂಡಕ್ಕೆ ಶುಭಾಶಯಗಳು ಎಂದು ಭಾರತದ ಮಾಜಿ ಕ್ರಿಕೆಟಿಗ ಆರ್ ಪಿ ಸಿಂಗ್ ಬರೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೀಮ್ ಇಂಡಿಯಾದ ಈ ಬೃಹತ್ ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಭಾರತದ ಮಾಜಿ ಕ್ರಿಕೆಟ್ ನಾಯಕ ಮೊಹಮ್ಮದ್ ಅಜರುದ್ದೀನ್ ಶುಭಾಶಯವನ್ನು ಕೋರಿದ್ದಾರೆ. ಜತೆಗೆ ಅಜಾಜ್ ಪಟೇಲ್ ಅವರ 10 ವಿಕೆಟ್ ಗೊಂಚಲು ದಾಖಲೆಯಿಂದಾಗಿ ಈ ಪಂದ್ಯ ನೆನಪಿನಲ್ಲುಳಿಯುತ್ತದೆ ಎಂದು ಬರೆದುಕೊಂಡಿರುವ ಮೊಹಮ್ಮದ್ ಅಜರುದ್ದೀನ್ ಈ ಹಿಂದೆ ಈ ದಾಖಲೆಯನ್ನು ಅನಿಲ್ ಕುಂಬ್ಳೆ 1999ರಲ್ಲಿ ಮಾಡಿದ್ದರು ಎಂಬುದನ್ನು ಕೂಡ ನೆನಪಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಈ ಬೃಹತ್ ಗೆಲುವಿನ ಸಹಾಯದೊಂದಿಗೆ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ. ಈ ಕುರಿತಾಗಿಯೂ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದು ಭಾರತ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬರು ವಿರಾಟ್ ಕೊಹ್ಲಿಯವರ ಚಿತ್ರವನ್ನು ಬಳಸಿ ಸದ್ಯ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿದೆ ಎಂಬುದನ್ನು ವಿಭಿನ್ನವಾಗಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications