Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮತ್ತೆ ತಾಯಿಯಾಗ್ತಿದ್ದಾರಾ ಅನುಷ್ಕಾ ಶರ್ಮಾ? ಅನುಮಾನ ಹುಟ್ಟಿಸಿದ ಕೊಹ್ಲಿ-ಅನುಷ್ಕಾ ವೈರಲ್ ವಿಡಿಯೋ

Netizens said One more Good News after watching Virat Kohli and Anushka Sharmas latest video

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಸದಾ ಟ್ರೆಂಡಿಂಗ್ ಪಟ್ಟಿಯಲ್ಲಿರುವ ಸೆಲೆಬ್ರಿಟಿ ಜೋಡಿಗಳಲ್ಲೊಂದು. ಇಬ್ಬರೂ ಸಹ ಯಾವುದೇ ಕಾರ್ಯಕ್ರಮ, ಪ್ರವಾಸಕ್ಕೆ ತೆರಳಿದರೂ ಅಲ್ಲಿನ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತವೆ.

ಇನ್ನು ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾದ ನಂತರ ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಂಡು ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದರು. ಪತ್ನಿ ಅನುಷ್ಕಾ ಶರ್ಮಾ ಜತೆ ತೆರಳಿದ್ದ ವಿರಾಟ್ ಕೊಹ್ಲಿ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಮಾಲ್ಡೀವ್ಸ್ ಸುಂದರ ಸಮುದ್ರ ತೀರದಲ್ಲಿ ಕುಳಿತಿದ್ದ ವಿರಾಟ್ ಕೊಹ್ಲಿಯ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ತುಂಬ ಸದ್ದು ಮಾಡಿತ್ತು. ಅತ್ತ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಳ ಮಾಲ್ಡೀವ್ಸ್‌ನ ಹಾಟ್ ಅವತಾರದ ಚಿತ್ರಗಳು ಕೂಡ ವೈರಲ್ ಆಗಿದ್ದವು.

ಹೀಗೆ ಮಾಲ್ಡೀವ್ಸ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ಜೋಡಿ ಮುಂಬೈ ನಗರದ ಆಸ್ಪತ್ರೆಯೊಂದಕ್ಕೆ ದಿಢೀರ್ ಭೇಟಿ ನೀಡಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಖ್ಯಾತ ಸೆಲೆಬ್ರಿಟಿ ಛಾಯಾಗ್ರಾಹಕ ಮನವ್ ಮಂಗ್ಲಾನಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೋಕಿಲಾಬೆನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಇನ್ನು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಈ ವಿಡಿಯೋಗೆ ಕೆಲ ನೆಟ್ಟಿಗರು ಸಿಹಿ ಸುದ್ದಿ, ಅನುಷ್ಕಾ ಶರ್ಮಾ ಮತ್ತೆ ತಾಯಿಯಾಗುತ್ತಿದ್ದಾರೆ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ. ಹಾಗೂ ಇನ್ನೂ ಕೆಲ ಕ್ರಿಕೆಟಿಗರು ಸಾಮಾನ್ಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದಾರೆ ಅಷ್ಟೇ ಇಲ್ಲಿ ಯಾವುದೇ ಸಿಹಿ ಸುದ್ದಿಯನ್ನು ನಿರೀಕ್ಷಿಸುವುದು ಸರಿಯಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಆಸ್ಪತ್ರೆಯಿಂದ ಹೊರ ಬರುತ್ತಿರುವ ಸಾಮಾನ್ಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ನೆಟ್ಟಿಗರು ಈ ಕುರಿತಾಗಿ ದೊಡ್ಡ ಮಟ್ಟದಲ್ಲಿಯೇ ಕಾಮೆಂಟ್ ಮಾಡಿರುವುದು ವಿರಾಟ್ ಕೊಹ್ಲಿಗೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ತೋರಿಸುತ್ತಿದೆ.

ವಿರಾಟ್ ಕೊಹ್ಲಿ ಇದೇ ತಿಂಗಳ 19ನೇ ತಾರೀಕಿನಂದು ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದ್ದು ಮುಂದಿನ ತಿಂಗಳು ಇಂಗ್ಲೆಂಡ್ ನೆಲದಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಕಣಕ್ಕಿಳಿಯಲು ಸಜ್ಜಾಗಲಿದ್ದಾರೆ.

Story first published: Tuesday, June 14, 2022, 15:38 [IST]
Other articles published on Jun 14, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+