Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ಏಕದಿನ ವಿಶ್ವಕಪ್‌ಗೆ ನೂತನ ಅಧಿಪತಿ

ಮಹಿಳಾ ಏಕದಿನ ವಿಶ್ವಕಪ್‌ ಕೊನೆಯ ಘಟ್ಟಕ್ಕೆ ಬಂದು ನಿಂತಿದೆ. ಭಾರತದ ವನಿತೆಯರು ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದ್ದಾರೆ. ಈ ಮೂಲಕ ಮೂರನೇ ಬಾರಿಗೆ ಭಾರತ ಏಕದಿನ ಮಹಿಳಾ ವಿಶ್ವಕಪ್‌ ಫೈನಲ್‌ಗೆ ಪ್ರವೇಶ ಪಡೆದಿದೆ. 25 ವರ್ಷಗಳ ಬಳಿಕ ವಿಶ್ವಕ್ಕೆ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಹೊಸ ಚಾಂಪಿಯನ್‌ ಒಬ್ಬರು ಸಿಗಲಿದ್ದಾರೆ. ಭಾರತ ಈ ಬಾರಿ ಚಾಂಪಿಯನ್‌ ಪಟ್ಟಕ್ಕೇರಲು ತುಂಬ ಹತ್ತಿರದಲ್ಲಿ ನಿಂತಿದೆ.

ಭಾರತ ಗುರುವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದೆ. ಆಸ್ಟ್ರೇಲಿಯಾ ನೀಡಿದ್ದ 339 ರನ್‌ಗಳ ದಾಖಲೆಯನ್ನು ಮೊತ್ತವನ್ನು ಚೇಸ್‌ ಮಾಡಿ ದಾಖಲೆ ಬರೆದಿದೆ. ಭಾರತದ ಭರವಸೆಯ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌ ತಮ್ಮ ವೃತ್ತಿ ಜೀವನದ ಸ್ಮರಣೀಯ ಇನಿಂಗ್ಸ್ ಆಡಿ ಸೈ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಜೇಮಿಮಾ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತ ಫೈನಲ್‌ಗೆ ಅರ್ಹತೆ ಪಡೆಯಲು ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಭಾರತದ ಪರ ಭರವಸೆಯ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌ 134 ಎಸೆತಗಳಲ್ಲಿ 14 ಬೌಂಡರಿ ನೆರವಿನಿಂದ ಅಜೇಯ 127 ರನ್‌ ಬಾರಿಸಿ ಅಬ್ಬರಿಸಿದರು. ಇವರ ಅಮೋಘ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರದರ್ಶನ ಲಭಿಸಿತು.

New Champions Guaranteed India and South Africa Clash for Maiden Women s World Cup Title

ಭಾರತ ನವೆಂಬರ್‌ 2 ರಂದು ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ. ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಮಹಿಳಾ ಹಾಗೂ ಪುರುಷರ ಏಕದಿನ ವಿಶ್ವಕಪ್‌ನ ಫೈನಲ್‌ಗೆ ತಲುಪಿದೆ. ಭಾರತ ಸಹ ಪ್ರಶಸ್ತಿ ಸುತ್ತಿಗೆ ಎಂಟ್ರಿ ಪಡೆದಿದೆ. ಭಾರತ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ತವರಿನಲ್ಲಿ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಲು ಭಾರತ ಪ್ಲ್ಯಾನ್ ಮಾಡಿಕೊಂಡಿದೆ.

ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ಗೆ ಅರ್ಹತೆ ಪಡೆದಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳಲ್ಲಿ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಉಭಯ ತಂಡಗಳು ಈ ವರೆಗೂ ಒಂದೂ ಬಾರಿ ಈ ಪ್ರಶಸ್ತಿಯನ್ನು ಗೆದ್ದಿಲ್ಲ. ಪ್ರಶಸ್ತಿ ಬರವನ್ನು ಯಾರು ನೀಗಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ.

ಮೂರನೇ ಬಾರಿಗೆ ಫೈನಲ್‌ಗೆ

ಭಾರತ ಸುಮಾರು 12 ವರ್ಷಗಳ ಬಳಿಕ ಏಕದಿನ ಮಹಿಳಾ ವಿಶ್ವಕಪ್‌ ಫೈನಲ್‌ಗೆ ಅರ್ಹತೆ ಪಡೆದಿದೆ. 2017ರಲ್ಲಿ ಭಾರತ, ಇಂಗ್ಲೆಂಡ್‌ ವಿರುದ್ಧ 7 ರನ್‌ಗಳ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಕ್ಕೂ ಮೊದಲು ಭಾರತ 2005ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ಆಘಾತ ಅನುಭವಿಸಿತ್ತು. ಈಗ ಭಾರತಕ್ಕೆ ಇತಿಹಾಸ ನಿರ್ಮಿಸುವ ಕನಸಿದೆ. ನವಿ ಮುಂಬೈನಲ್ಲಿ ಭಾರತ ಇತಿಹಾಸ ನಿರ್ಮಿಸುತ್ತಾ ಎಂಬುದನ್ನು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 2011ರಲ್ಲಿ ಎಂಎಸ್‌ ಧೋನಿ ಸಾರಥ್ಯದಲ್ಲಿ ಮಾಡಿದ ಸಾಧನೆಯನ್ನು ಹರ್ಮನ್ ಪ್ರೀತಿ ಪಡೆ ಮಾಡುತ್ತಾ ಎಂಬ ಕುತೂಹಲ ಮನೆ ಮಾಡಿದೆ.

Story first published: Friday, October 31, 2025, 10:07 [IST]
Other articles published on Oct 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+