For Quick Alerts
ALLOW NOTIFICATIONS  
For Daily Alerts
 

ICC T20 Rankings: ಅಭಿಷೇಕ್ ಶರ್ಮಾ ಅಗ್ರಸ್ಥಾನಕ್ಕೆ ಆಪತ್ತು, ನಂಬರ್ 1 ಸ್ಥಾನದ ಮೇಲೆ ಇಶಾನ್‌ ಕಣ್ಣು

ಭಾರತ ತವರಿನಲ್ಲಿ ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ ತವರಿನಲ್ಲಿ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಈ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಆಟಗಾರರ ಶ್ರೇಯಾಂಕದಲ್ಲಿ ಬಡ್ತಿ ಆಗಿದ್ದು, ಅಗ್ರಸ್ಥಾನದಲ್ಲಿರುವ ಅಭಿಷೇಕ್ ಶರ್ಮಾ ಅವರ ಸ್ಥಾನದ ಮೇಲೆ ಇಶಾನ್‌ ಕಿಶನ್‌ ಕಣ್ಣು ನೆಟ್ಟಿದ್ದಾರೆ.

ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್‌ ಶರ್ಮಾ ತಮ್ಮ ಮೇಲಿನ ಟೀಕೆಗಳಿಗೆ ಮೈದಾನದಲ್ಲಿ ಉತ್ತರ ನೀಡಿದ್ದರು. ಈ ಮೂಲಕ ಸದ್ಯಕ್ಕಂತೂ ಇವರು ತಮ್ಮ ಟಿ20 ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇವರು 875 ಅಂಕಗಳನ್ನು ಕಲೆ ಹಾಕಿದ್ದು, ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ICC T20 Rankings

ಟೀಮ್ ಇಂಡಿಯಾದ ಪರ ಟಿ20 ವಿಶ್ವಕಪ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಶಾನ್‌ ಕಿಶನ್‌ ಅವರ ಶ್ರೇಯಾಂಕದಲ್ಲೂ ಭಾರೀ ಏರಿಕೆ ಆಗಿದೆ. ಇಶಾನ್ ಕಿಶನ್‌ ಆಡಿದ 9 ಪಂದ್ಯಗಳಲ್ಲಿ 35ರ ಸರಾಸರಿಯಲ್ಲಿ 317 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸೇರಿವೆ. ಇವರ ಈ ಸ್ಥಿರ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಇವರು ಶ್ರೇಯಾಂಕದಲ್ಲಿ ಎರಡು ಸ್ಥಾನ ಏರಿಕೆ ಕಂಡಿದ್ದಾರೆ. ಅಲ್ಲದೆ 871 ಅಂಕಗಳನ್ನು ಕಲೆ ಹಾಕಿದ್ದಾರೆ. ಮೊದಲ ಸ್ಥಾನದಲ್ಲಿರುವ ಅಭಿಷೇಕ್ ಶರ್ಮಾ ಹಾಗೂ ಇಶಾನ್‌ ಅವರಿಗೆ ಕೇವಲ 4 ಅಂಕಗಳ ವ್ಯತ್ಯಾಸ ಇದೆ.

ಒಂದು ಕಾಲ್‌ ಬದಲಿಸಿದ ಇಶಾನ್‌ ಕಿಶನ್‌ ಅದೃಷ್ಟಒಂದು ಕಾಲ್‌ ಬದಲಿಸಿದ ಇಶಾನ್‌ ಕಿಶನ್‌ ಅದೃಷ್ಟ

ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್‌ಜಾದ ಫರ್ಹಾನ್‌ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದರು. ಇವರ ಈ ಕ್ಲಾಸಿಕ್ ಆಟದ ಪರಿಣಾಮ ಇವರು ಎರಡನೇ ಸ್ಥಾನವನ್ನು ಪಡೆದಿದ್ದರು. ಆದರೆ ಈಗ ಇವರು ಒಂದು ಸ್ಥಾನ ಕುಸಿತ ಕಂಡಿದ್ದು ಮೂರನೇ ಸ್ಥಾನದಲಿದ್ದಾರೆ. ಇಂಗ್ಲೆಂಡ್ ತಂಡದ ಫಿಲ್ ಸಾಲ್ಟ್‌, ಪತಮ್ ನಿಸ್ಸಂಕಾ ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

Jasprit Bumrah ಮ್ಯಾಜಿಕ್, ಸಚಿನ್‌ ತೆಂಡೂಲ್ಕರ್ ದಾಖಲೆ ಅಳಿಸಿದ ವೇಗಿ: ಏನದು ದಾಖಲೆ?Jasprit Bumrah ಮ್ಯಾಜಿಕ್, ಸಚಿನ್‌ ತೆಂಡೂಲ್ಕರ್ ದಾಖಲೆ ಅಳಿಸಿದ ವೇಗಿ: ಏನದು ದಾಖಲೆ?

ನ್ಯೂಜಿಲೆಂಡ್ ತಂಡದ ಟಿಮ್ ಸೀಫರ್ಟ್‌ 4 ಸ್ಥಾನ ಏರಿಕೆ ಕಂಡಿದ್ದು, 6ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ಭರವಸೆಯ ಆಟಗಾರ ತಿಲಕ್ ವರ್ಮಾ ಒಂದು ಸ್ಥಾನ ಕುಸಿತ ಕಂಡಿದ್ದು, 7ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್‌ 8, ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ 9ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಇಂಗ್ಲೆಂಡ್ ತಂಡದ ಜೋಸ್ ಬಟ್ಲರ್‌ 10ನೇ ಸ್ಥಾನ ಹೊಂದಿದ್ದಾರೆ.

18 ಸ್ಥಾನ ಬಡ್ತಿ ಪಡೆದ ಸಂಜು

ಟೀಮ್ ಇಂಡಿಯಾದ ಸಂಜು ಸ್ಯಾಮ್ಸನ್‌ ಅವರು ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಈ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 80ರ ಸರಾಸರಿಯಲ್ಲಿ 321 ರನ್‌ ಕಲೆ ಹಾಕಿದ್ದಾರೆ. ಈ ವೇಳೆ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಹ ಸಿಡಿಸಿದ್ದಾರೆ. ಇವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ಫಲವಾಗಿ ಇವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಇವರು 18 ಸ್ಥಾನ ಏರಿಕೆ ಕಂಡಿದ್ದು, ಸದ್ಯ 22ನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಶಿವಂ ದುಬೆ ಬ್ಯಾಟಿಂಗ್ ಕ್ರಮಾಂಕದಲ್ಲಿ 4 ಸ್ಥಾನ ಏರಿಕೆ ಕಂಡಿದ್ದು, 27ನೇ ಸ್ಥಾನದಲ್ಲಿದ್ದಾರೆ.

ICC T20 Rankings

ವರುಣ್‌ ಚಕ್ರವರ್ತಿ ಸ್ಥಾನ ಕುಸಿತ

ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ ವರುಣ್ ಚಕ್ರವರ್ತಿ ಐಸಿಸಿ ಬೌಲರ್‌ಗಳ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದು, ಎರಡನೇ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ರಶೀದ್ ಖಾನ್ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಪಾಕಿಸ್ತಾನದ ಅಬ್ರಾರ್ ಅಹ್ಮದ್‌ ಮೂರನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ 6, ಅರ್ಶದೀಪ್ ಸಿಂಗ್ 16, ಅಕ್ಷರ್ ಪಟೇಲ್ 17 ಸ್ಥಾನದಲ್ಲಿದ್ದಾರೆ.

Story first published: Wednesday, March 11, 2026, 15:44 [IST]
Other articles published on Mar 11, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+