ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊಸ ಸಮಿತಿಯಿಂದ ತಂಡದ ಆಯ್ಕೆ: ಗಂಗೂಲಿ

New selection committee will pick side for South Africa series | BCCI | SELECTION COMMITTEE
New selection committee Will Pick Side For South Africa Series: Sourav Ganguly

ನ್ಯೂಜಿಲ್ಯಾಂಡ್ ವಿರುದ್ಧದ ಪ್ರವಾಸ ಮುಗಿದ ತಕ್ಷಣ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಾಟವನ್ನು ನಡೆಸಲಿದೆ. ಆದಕ್ಕಾಗಿ ಟೀಮ್ ಇಂಡಿಯಾ ತಂಡವನ್ನು ಪ್ರಕಟಗೊಳಿಸಬೇಕಿದೆ. ಆದರೆ ದಕ್ಷಿಣ ಆಪ್ರಿಕಾ ವಿರುದ್ಧದ ಸರಣಿಗೆ ಹೊಸ ಆಯ್ಕೆ ಸಮಿತಿ ತಂಡವನ್ನು ಪ್ರಕಟಗೊಳಿಸಲಿದೆ ಎಂಬ ಮಾತನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅವಧಿ ಈಗಾಗಲೇ ಮುಕ್ತಾಯವಾಗಿದೆ. ಆದರೆ ಸದ್ಯ ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯೇ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸಿದೆ. ಮುಂದಿನ ಸರಣಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದಲ್ಲೇ ನಡೆಯಲಿದ್ದು ಅದಕ್ಕಾಗಿ ತಂಡ ಪ್ರಕಟವಾಗಬೇಕಿದೆ.

ಎಂ.ಎಸ್ ಧೋನಿ ಗೈರು, ಟೀಮ್ ಬಸ್‌ನ ಖಾಲಿ ಸೀಟು: ಚಾಹಲ್ ಬಿಚ್ಚಿಟ್ಟ ತಂಡದ ಸತ್ಯ!ಎಂ.ಎಸ್ ಧೋನಿ ಗೈರು, ಟೀಮ್ ಬಸ್‌ನ ಖಾಲಿ ಸೀಟು: ಚಾಹಲ್ ಬಿಚ್ಚಿಟ್ಟ ತಂಡದ ಸತ್ಯ!

ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ಭಾರತದ ನೆಲದಲ್ಲೇ ಆಡಲಿದೆ. ಮಾರ್ಚ್‌ 12ರಿಂದ ಮೊದಲು ಏಕದಿನ ಸರಣಿ ಆರಂಭವಾಗಲಿದ್ದು ಅದಕ್ಕು ಮೊದಲು ಹೊಸ ಆಯ್ಕೆ ಸಮಿತಿ ರಚನೆಯಾಗಲಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ.

ಹೊಸ ಆಯ್ಕೆ ಸಮಿತಿಗೆ ಘಟಾನುಘಟಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾಜಿ ಅಲ್ ರೌಂಡರ್ ಅಜಿತ್ ಅಗರ್ಕರ್, ನಯನ್ ಮೋಂಗಿಯಾ, ವೆಂಕಟೇಶ್ ಪ್ರಸಾದ್, ಲಕ್ಷ್ಮಣ್ ಶಿವರಾಮಕೃಷ್ಣನ್ ಸೇರಿದಂತೆ ಹಲವರು ಅರ್ಜಿಯನ್ನು ಸಲ್ಲಿಸಿದ್ದಾರೆ.

 ರಾಷ್ಟ್ರೀಯ ಆಯ್ಕೆದಾರರ ಹುದ್ದೆಗೆ ಮಾಜಿ ವೇಗಿ ಅಜಿತ್ ಅಗರ್ಕರ್ ಅರ್ಜಿ ರಾಷ್ಟ್ರೀಯ ಆಯ್ಕೆದಾರರ ಹುದ್ದೆಗೆ ಮಾಜಿ ವೇಗಿ ಅಜಿತ್ ಅಗರ್ಕರ್ ಅರ್ಜಿ

ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾಗಿರುವ ಕಾರಣ ಗೌತಮ್ ಗಂಭೀರ್ ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಇರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗಂಭೀರ್ ಸವರನ್ನು ಹೆಸರಿಸಿರುವ ಸ್ಥಾನಕ್ಕೆ ಬೇರೊಬ್ಬರನ್ನು ಅಯ್ಕೆ ಮಾಡಲಾಗುತ್ತದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

Story first published: Tuesday, January 28, 2020, 14:45 [IST]
Other articles published on Jan 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X