Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ಕ್ರಿಕೆಟ್‌ನ ಹೊಸ ಅಧ್ಯಾಯ ಆರಂಭ; ವೈಭವ್ ಸೂರ್ಯವಂಶಿ ಅಬ್ಬರದ ಟೀಸರ್

ಟೀಮ್ ಇಂಡಿಯಾದ ಅಭಿಮಾನಿಗಳು ಬಹು ದಿನಗಳಿಂದ ಕಾಯುತ್ತಿದ್ದ ಕ್ಷಣಕ್ಕೆ ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಫರ್ಡ್‌ ಮೈದಾನ ಸಾಕ್ಷಿಯಾಯಿತು. ಭಾರತದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ವೈಭವ್ ಸೂರ್ಯವಂಶಿ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕವೇ ಹೆಸರುವಾಸಿಯಾಗಿದ್ದ ಬಿಹಾರದ ಪೋರ ಕ್ರಿಕೆಟ್‌ನಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ.

ಐಪಿಎಲ್‌ನಲ್ಲಿ ಬಿಗ್ ಸಿಕ್ಸರ್‌ಗಳ ಮೂಲಕ ಹೆಸರು ಮಾಡಿದ್ದ ವೈಭವ್ ಸೂರ್ಯವಂಶಿ ಅವರ ಆಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಣ್ಣು ತುಂಬಿಕೊಳ್ಳಲು ಕಾತುರರಾಗಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಬೌಲರ್‌ಗಳ ವಿರುದ್ಧ ಐಪಿಎಲ್‌ನಲ್ಲಿ ಅಬ್ಬರಿಸಿ ಸುದ್ದಿ ಮಾಡಿದ್ದ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ 776 ರನ್‌ ಬಾರಿಸಿ ಆರ್ಭಟಿಸಿದ್ದರು. ಇವರು ಸ್ಫೋಟಕ ಆಟವನ್ನು ನೋಡಲೇ ಅಭಿಮಾನಿಗಳು ಮೈದಾನದತ್ತ ಆಗಮಿಸುತ್ತಿದ್ದರು. ಈಗ ಜನರ ಆಕರ್ಷಣೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇವರು ಹೇಗೆ ಆಡುತ್ತಾರೆ ಎಂಬ ಪ್ರಶ್ನೆ ಇತ್ತು. ಇದರ ಟೀಸರ್ ಮ್ಯಾಂಚೆಸ್ಟರ್‌ನಲ್ಲಿ ರಿಲೀಸ್‌ ಆಗಿದೆ.

Vaibhav Sooryavanshi

ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದ ವೈಭವ್ ಸೂರ್ಯವಂಶಿ ಅವರಿಗೆ ತಂಡದಲ್ಲಿ ಆಡುವ ಅವಕಾಶ ಲಭಿಸುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಇಂಗ್ಲೆಂಡ್ ಪ್ರವಾಸದ ಮೊದಲ ಪಂದ್ಯದಲ್ಲೂ ಇವರಿಗೆ ಆಡುವ ಅವಕಾಶ ಲಭಿಸಲಿಲ್ಲ. ಆಗ ಇವರನ್ನು ಮ್ಯಾಂಚೆಸ್ಟರ್‌ನಲ್ಲಿ ಆಡಿಸಿ ಎಂಬ ಕೂಗು ಕೇಳಿಸಿತ್ತು. ಇದಕ್ಕೆ ಟೀಮ್ ಮ್ಯಾನೇಜ್ಮೆಂಟ್‌ ಮಣೆ ಹಾಕಿದೆ.

15 ವರ್ಷದಲ್ಲಿ ಪದಾರ್ಪಣೆ

ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದ ಟೀಮ್ ಇಂಡಿಯಾದ ಅನುಭವಿ ಬ್ಯಾಟರ್ ಸಂಜು ಸ್ಯಾಮ್ಸನ್‌ ಅವರಿಗೆ ತಂಡದಿಂದ ಕೈ ಬಿಟ್ಟು, ಬಿಹಾರದ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡಲಾಯಿತು. ಈ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ. ವೈಭವ್ ಸೂರ್ಯವಂಶಿ ಅವರಿಗೆ ಟಿ20 ಕ್ಯಾಪ್‌ನ್ನು ತಂಡದ ಉಪನಾಯಕ ತಿಲಕ್ ವರ್ಮಾ ನೀಡಿದರು.

ಮೊದಲ ಇನಿಂಗ್ಸ್‌ನಲ್ಲಿ 2 ಸಿಕ್ಸರ್

ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಆಟವನ್ನು ನೋಡಲು ಮೈದಾನಕ್ಕೆ ಆಗಮಿಸಿದ್ದ ಅಭಿಮಾನಿಗಳಿಗೆ ನಿರಾಸೆ ಖಂಡಿತವಾಗಲಿಲ್ಲ. ವೈಭವ್ ಅಂತಾರಾಷ್ಟ್ರೀಯ ಕ್ರಿಕೆಟ್‌ ಪದಾರ್ಪಣೆಯನ್ನು ಕೊಂಚ ಟೈಮ್‌ ತೆಗೆದುಕೊಂಡು ಮಾಡಿದರು. ಇನಿಂಗ್ಸ್‌ನ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಜೋಫ್ರಾ ಆರ್ಚರ್ ಅವರು ಎಸೆದ ಫುಲ್ ಲೆಂತ್ ಚೆಂಡನ್ನು, ವೈಭವ್ ಸೂರ್ಯವಂಶಿ ಮೊಣಕಾಲೂರಿ ಫೈನ್ ಲೆಗ್ ಮೇಲೆ ಸಿಕ್ಸರ್ ಬಾರಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಸಿಕ್ಸರ್ ಸಿಡಿಸಿ ತಂಡಕ್ಕೆ ಆಧಾರವಾದರು.

ಇನ್ನು ನಾಲ್ಕನೇ ಓವರ್‌ನ ಮೊದಲ ಎಸೆತದಲ್ಲೂ ಜೋಶ್‌ ಟಂಗ್‌ ಅವರ ಎಸೆತವನ್ನು ವೈಭವ್, ಮಿಡ್‌ ವಿಕೆಟ್‌ ಮೇಲಿನಿಂದ ಸಿಕ್ಸರ್ ಬಾರಿಸಿದರು. ವೈಭವ್‌ ತಮ್ಮ ಮೊದಲ ಇನಿಂಗ್ಸ್‌ನಲ್ಲಿ ಕೇವಲ 14 ರನ್ ಬಾರಿಸಿ ಔಟ್ ಆಗಿದ್ದಾರೆ. ಈ ಮೂಲಕ ಇಂಗ್ಲೆಂಡ್‌ನಲ್ಲಿ ಕ್ರಿಕೆಟ್‌ನ ನವ ಯುಗದ ಹೊಸ ಅಧ್ಯಾಯದ ಟೀಸರ್‌ ಬಿಡುಗಡೆ ಆದಂತೆ ಆಗಿದೆ.

Story first published: Saturday, July 4, 2026, 20:37 [IST]
Other articles published on Jul 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+