ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟೆಸ್ಟ್ ಸರಣಿಗೆ 15 ಆಟಗಾರರ ತಂಡ ಪ್ರಕಟಿಸಿದ ನ್ಯೂಜಿಲೆಂಡ್‌; ಬಲಿಷ್ಠರಿಗೇ ಸ್ಥಾನವಿಲ್ಲ!

New Zealand announce their 15-man squad for 2 matches Test series against India

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ದೊಡ್ಡ ಮಟ್ಟದ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ. ಹೌದು ಕ್ರಿಕೆಟ್ ಜಗತ್ತಿನಾದ್ಯಂತ ಯುಎಇಯಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ಸೆಮಿ ಫೈನಲ್ ಸುತ್ತಿನ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಹಂತ ಪ್ರವೇಶಿಸುವುದರಲ್ಲಿ ಅನುಮಾನ ಹುಟ್ಟುಹಾಕಿದ್ದು, ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳನ್ನು ಸೋತದ್ದೇ ಟೀಮ್ ಇಂಡಿಯಾದ ಈ ಹಿನ್ನಡೆಗೆ ಕಾರಣವಾಗಿದೆ.

SMAT 2021-22: ಮುಂಬೈಯನ್ನು ಮಣಿಸಿದ ಕರ್ನಾಟಕ: ಮನೀಶ್ ಹುಡುಗರ ಭರ್ಜರಿ ಆರಂಭSMAT 2021-22: ಮುಂಬೈಯನ್ನು ಮಣಿಸಿದ ಕರ್ನಾಟಕ: ಮನೀಶ್ ಹುಡುಗರ ಭರ್ಜರಿ ಆರಂಭ

ಹೌದು, ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನ್ನು ಕಂಡಿತು ಮತ್ತು ದ್ವಿತೀಯ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿತು. ಹೀಗೆ ಮತ್ತೊಂದು ಬಾರಿ ಟೀಮ್ ಇಂಡಿಯಾ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನ್ಯೂಜಿಲೆಂಡ್ ತಂಡ ಭಗ್ನಗೊಳಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. ಈ ಹಿಂದೆ 2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿದ್ದ ನ್ಯೂಜಿಲೆಂಡ್ ಇತ್ತೀಚೆಗಷ್ಟೇ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಕೂಡ ಭಾರತದ ವಿರುದ್ಧ ಗೆಲುವನ್ನು ಸಾಧಿಸಿತ್ತು.

ಟಿ20 ವಿಶ್ವಕಪ್: ಎರಡು ಕೆಟ್ಟ ಪಂದ್ಯಗಳಿಂದ ನಮ್ಮದು ಕೆಟ್ಟ ತಂಡವಾಗುವುದಿಲ್ಲ: ಟೀಕಾಕಾರರಿಗೆ ರೋಹಿತ್ ಉತ್ತರಟಿ20 ವಿಶ್ವಕಪ್: ಎರಡು ಕೆಟ್ಟ ಪಂದ್ಯಗಳಿಂದ ನಮ್ಮದು ಕೆಟ್ಟ ತಂಡವಾಗುವುದಿಲ್ಲ: ಟೀಕಾಕಾರರಿಗೆ ರೋಹಿತ್ ಉತ್ತರ

ಅಷ್ಟೇ ಅಲ್ಲದೇ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೂಡ ನ್ಯೂಜಿಲೆಂಡ್ ಭಾರತಕ್ಕೆ ಸೋಲುಣಿಸುವುದರ ಮೂಲಕ ಇದೀಗ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದಕ್ಕೂ ಅಡ್ಡಿಯನ್ನುಂಟು ಮಾಡಿದೆ. ಸದ್ಯ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಬೇಕೆಂದರೆ ನ್ಯೂಜಿಲೆಂಡ್ ತನ್ನ ಮುಂದಿನ ಪಂದ್ಯಗಳಲ್ಲಿ ಯಾವುದಾದರೊಂದು ಪಂದ್ಯವನ್ನು ಸೋಲಬೇಕಿದೆ. ಹೀಗೆ ಪ್ರಮುಖ ಟೂರ್ನಿಗಳಲ್ಲಿ ಟೀಮ್ ಇಂಡಿಯಾದ ಟ್ರೋಫಿಯ ಕನಸಿಗೆ ತಣ್ಣೀರು ಎರೆಚಿರುವ ನ್ಯೂಜಿಲೆಂಡ್ ಪ್ರಸ್ತುತ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಕೂಡಲೇ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು 3 ಟಿ ಟ್ವೆಂಟಿ ಪಂದ್ಯಗಳು ಮತ್ತು 2 ಟೆಸ್ಟ್ ಪಂದ್ಯಗಳ ಸರಣಿಗಳನ್ನಾಡಲಿದೆ. ಈ ಸರಣಿಗಳ ಪೈಕಿ 2 ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ತಂಡವನ್ನು ನ್ಯೂಜಿಲೆಂಡ್ ಇದೀಗ ಪ್ರಕಟಿಸಿದ್ದು, ಇಬ್ಬರು ಪ್ರಮುಖ ಆಟಗಾರರನ್ನು ಕೈಬಿಡಲಾಗಿದೆ. ಈ ಕುರಿತಾದ ವಿವರ ಮುಂದೆ ಇದೆ ಓದಿ..

ಪ್ರಕಟವಾಗಿರುವ 15 ಆಟಗಾರರ ನ್ಯೂಜಿಲೆಂಡ್ ತಂಡ

ಪ್ರಕಟವಾಗಿರುವ 15 ಆಟಗಾರರ ನ್ಯೂಜಿಲೆಂಡ್ ತಂಡ

ನವೆಂಬರ್ 25ರಿಂದ ಡಿಸೆಂಬರ್ 7ರವರೆಗೆ ಭಾರತದಲ್ಲಿಯೇ ನಡೆಯಲಿರುವ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಹೀಗಿದೆ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್ವಿಲ್ಲೆ, ಟಿಮ್ ಸೌಥಿ, ರಾಸ್ ಟೇಲರ್, ವಿಲ್ ಯಂಗ್ ಮತ್ತು ನೈಲ್ ವಾಗ್ನರ್

ನ್ಯೂಜಿಲೆಂಡ್‌ನ ಇಬ್ಬರಿಗೆ ತಂಡದಲ್ಲಿಲ್ಲ ಸ್ಥಾನ

ನ್ಯೂಜಿಲೆಂಡ್‌ನ ಇಬ್ಬರಿಗೆ ತಂಡದಲ್ಲಿಲ್ಲ ಸ್ಥಾನ

ನ್ಯೂಜಿಲೆಂಡ್ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಟ್ರೆಂಟ್ ಬೌಲ್ಟ್ ಮತ್ತು ಪ್ರಮುಖ ಆಲ್ ರೌಂಡರ್ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಇಬ್ಬರಿಗೂ ಸಹ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ. ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಪರ 10 ಪಂದ್ಯಗಳನ್ನಾಡಿ 39 ವಿಕೆಟ್ ಪಡೆದಿದ್ದ ಟ್ರೆಂಟ್ ಬೌಲ್ಟ್ ಅನುಪಸ್ಥಿತಿ ನ್ಯೂಜಿಲೆಂಡ್ ತಂಡಕ್ಕೆ ಭಾರತ ವಿರುದ್ಧದ ಸರಣಿಯಲ್ಲಿ ಕಾಡಲಿದೆ. ಹಾಗೆಯೇ ನ್ಯೂಜಿಲೆಂಡ್ ತಂಡಕ್ಕೆ ತಂಡದ ಪ್ರಮುಖ ಆಲ್ ರೌಂಡರ್ ಆಟಗಾರನಾದ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಅನುಪಸ್ಥಿತಿ ಕೂಡ ಹಿನ್ನಡೆಯನ್ನುಂಟುಮಾಡುವ ಸಾಧ್ಯತೆಗಳಿವೆ.

ಸ್ಪೋಟಕ ಜಯದ ನಂತರ ಗೇಮ್ ಪ್ಲಾನ್ ಬಗ್ಗೆ ಹೇಳಿದ Virat Kohli | Oneindia Kannada
ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿಯ ವಿವರ

ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿಯ ವಿವರ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನವೆಂಬರ್‌ 14ರಂದು ನಡೆಯಲಿದ್ದು, ನವೆಂಬರ್ 17ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ. ಈ ಟಿ ಟ್ವೆಂಟಿ ಸರಣಿ ಮುಗಿದ ಕೂಡಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್ ನವೆಂಬರ್‌ 25ರಿಂದ ನವೆಂಬರ್‌ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Story first published: Friday, November 5, 2021, 10:37 [IST]
Other articles published on Nov 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X