ಭಾರತ ವಿರುದ್ಧದ ಏಕದಿನ, ಟಿ20 ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ
ಸದ್ಯ ಭಾರತೀಯ ಆಟಗಾರರು ವಿಶ್ರಾಂತಿಯಲ್ಲಿದ್ದಾರೆ. ಈ ವೇಳೆ ಅನುಭವಿ ಆಟಗಾರರು ದೇಶೀಯ ಟೂರ್ನಿಯಲ್ಲಿ ಆಡಲು ಮೈದಾನ ಪ್ರವೇಶಿಸಲಿದ್ದಾರೆ. ಜನವರಿಯಲ್ಲಿ ಭಾರತ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಈ ವೇಳೆ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಬಿಗ್ ಫೈಟ್ ನಡೆಯಲಿದೆ. ಈ ಕಾದಾಟಕ್ಕಾಗಿ ನ್ಯೂಜಿಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ. ಈ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಪಿನ್ನರ್ ಲೆನಾಕ್ಸ್ ಅವರಿಗೆ ಅವಕಾಶ ನೀಡಲಾಗಿದೆ.
ಕಿವೀಸ್ ತಂಡದ ಪರ ಕಣಕ್ಕೆ ಇಳಿಯಲು ಕೈಲ್ ಜೇಮಿಸನ್ ಮತ್ತು ಮಿಚೆಲ್ ಸ್ಯಾಂಟ್ನರ್ ಸಿದ್ಧರಾಗಿದ್ದಾರೆ. ಕೈಲ್ ಜೇಮಿಸನ್ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನ ಪಡೆದರೆ, ಮಿಚೆಲ್ ಸ್ಯಾಂಟ್ನರ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಯಾಂಟ್ನರ್ ಗಾಯದ ಸಮಸ್ಯೆಯಿಂದ ಬಹು ದಿನಗಳ ಕಾಲ ಕ್ರಿಕೆಟ್‌ನಿಂದ ದೂರ ಇದ್ದರು. ಮಿಚೆಲ್ ಸ್ಯಾಂಟ್ನರ್ ಅನುಪಸ್ಥಿತಿಯಲ್ಲಿ ಏಕದಿನ ತಂಡವನ್ನು ಮೈಕೆಲ್ ಬ್ರೇಸ್‌ವೆಲ್ ಮುನ್ನಡೆಸಲಿದ್ದಾರೆ.

ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇವರು SA20ಯಲ್ಲಿ ಭಾಗವಹಿಸಲಿದ್ದಾರೆ. ಭಾರತದಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಮಿಚ್ ಹೇ ಅವರಿಗೆ ನೀಡಲಾಗಿದೆ. ಟಿ20 ಸರಣಿಯಲ್ಲಿ ಡೆವೊನ್ ಕಾನ್ವೇ ವಿಕೆಟ್ ಹಿಂದಿನ ಕಾರ್ಯವನ್ನು ಮಾಡಲಿದ್ದಾರೆ.
ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಶ್ಚಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೇ, ಜ್ಯಾಕ್ ಫಾಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್

ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜಾಕೋಬ್ ಡಫಿ, ಜ್ಯಾಕ್ ಫಾಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜಾಕೋಬ್ಸ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಾಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.
ನ್ಯೂಜಿಲೆಂಡ್ ಸರಣಿ ಯಾವಾಗ?
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಮೊದಲ ಏಕದಿನ ಪಂದ್ಯ ವಡೋಧರಾದಲ್ಲಿ ಜನವರಿ 11 ರಿಂದ ಆರಂಭವಾಗಲಿದೆ. ಎರಡನೇ ಏಕದಿನ ಪಂದ್ಯ ಜನವರಿ 14 ರಂದು ರಾಜ್‌ಕೋಟ್‌ನಲ್ಲಿ, ಮೂರನೇ ಏಕದಿನ ಪಂದ್ಯ ಜನವರಿ 18 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಸರಣಿ ಮುಗಿದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಜ.21 ರಂದು ನಾಗ್ಪುರ್‌ನಲ್ಲಿ ನಡೆಯಲಿದೆ. ಈ ಸರಣಿಯ ಕೊನೆಯ ಪಂದ್ಯ ಜ.31 ರಂದು ತಿರುವನಂತಪುರದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications