Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಹೆಣ್ಣು ಮಗುವಿಗೆ ತಂದೆಯಾದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್

New Zealand cricketer Kane Williamson Blessed With Baby Girl

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ಬಗ್ಗೆ ಕೇನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೇನ್ ವಿಲಿಯಮ್ಸನ್ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

ಕೇನ್ ವಿಲಿಯಮ್ಸನ್ ಅವರ ಪತ್ನಿ ಸಾರಾ ರಹೀಮ್ ಡಿಸೆಂಬರ್ 16ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದನ್ನು ಕೇನ್ ವಿಲಿಯಮ್ಸನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾರಾ ಹಾಗೂ ಕೇನ್ ದಂಪತಿಗೆ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

30ರ ಹರೆಯದ ಕೇನ್ ವಿಲಿಯಮ್ಸನ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ತಂಡದಿಂದ ಹೊರಗುಳಿದಿದ್ದರು. ಈಗ ಅವರು ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಿದ್ದಾರೆ.

ಇನ್ಸ್ಟಾಗ್ರಾಮ್‌ನಲ್ಲಿ ಕೇನ್ ವಿಲಿಯಮ್ಸನ್ ಮಗುವನ್ನು ದಂಪತಿಗಳಿಬ್ಬರು ಅಪ್ಪಿ ಹಿಡಿದಿರುವ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಕೇನ್ "ಸುಂದರವಾರ ಹೆಣ್ಣು ಮಗುವನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಅತ್ಯಂತ ಸಂಭ್ರಮವಾಗುತ್ತಿದೆ" ಎಂದು ಬರೆದುಕೊಂಡಿದ್ದಾರೆ.

ಕೇನ್ ವಿಲಿಯಮ್ಸನ್ ಮೊದಲ ಮಗುವಿನ ಜನನದ ಹಿನ್ನೆಲೆಯಲ್ಲಿ ಎರಡನೇ ಟೆಸ್ಟ್ ಪಂದ್ಯದಿಂದ ಹಿಂದಕ್ಕೆ ಸರಿದ ನಿರ್ಧಾರದ ಬಗ್ಗೆ ಕಿವೀಸ್ ತಂಡದ ಕೋಚ್ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದರು. "ಇಂತಾ ಸಂದರ್ಭದಲ್ಲಿ ಕುಟುಂಬ ಮೊದಲಿಗೆ ಬರುತ್ತದೆ. ಈ ಸಂದರ್ಭದಲ್ಲಿ ಇಡೀ ತಂಡ ಕೇನ್ ವಿಲಿಯಮ್ಸನ್ ಅವರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಹೇಳಿದ್ದರು.

Story first published: Wednesday, December 16, 2020, 16:49 [IST]
Other articles published on Dec 16, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+