For Quick Alerts
ALLOW NOTIFICATIONS  
For Daily Alerts
 

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ ಕಿವೀಸ್ ಕ್ರಿಕೆಟರ್ ರಾಸ್ ಟೇಲರ್

New zealand cricketer Ross Taylor announces retirement from international cricket
18 ಸಾವಿರ ರನ್ ಗಳ ಸರದಾರ Ross Taylor ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ | Oneindia Kannada

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಶ್ರೇಷ್ಠ ಕ್ರಿಕೆಟರ್‌ಗಳಲ್ಲಿ ಒಬ್ಬರೆನಿಸಿರುವ ರಾಸ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆದುಕೊಳ್ಳ್ಳುವುದಾಗಿ ಘೋಷಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿ ಅಂತಿಮ ಪಂದ್ಯವನ್ನು ಆಡಿವ ಬಳಿಕ ನಿವೃತ್ತನಾಗುತ್ತಿರುವುದಾಗಿ ರಾಸ್ ಟೇಲರ್ ಘೋಷಣೆ ಮಾಡಿದ್ದಾರೆ. ಈ ಪಂದ್ಯ ರಾಸ್ ಟೇಲರ್ ಅವರ 112ನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಗಿರಲಿದ್ದು ನ್ಯೂಜಿಲೆಂಡ್ ತಂಡದ ಪರ ಅತಿ ಹೆಚ್ಚು ಪಂದ್ತವನ್ನಾಡಿದ ಡೇನಿಯಲ್ ವೆಟ್ಟೋರಿ ಅವರ ದಾಖಲೆಯನ್ನು ಟೇಲರ್ ಸರಿಗಟ್ಟಲಿದ್ದಾರೆ.

37ರ ಹರೆಯದ ಈ ಅನುಭವಿ ಆಟಗಾರ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಕಳೆದ ಫೆಬ್ರವರಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧಧ ಸರಣಿಯಲ್ಲಿ ಭಾಗಿಯಾಗಿದ್ದರು. ನಂತರ ನೆದರ್ಲ್ಯಾಂಡ್ಸ್ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿಯೂ ಆಡಿದ್ದರು. ಹೀಗಾಗಿ ಈ ವರ್ಷದ ಏಪ್ರಿಲ್ 4ರಂದು ಹ್ಯಾಮಿಲ್ಟನ್‌ನಲ್ಲಿ ಆಡಿದ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಸರಣಿಯ ನಾಲ್ಕನೇ ಪಂದ್ಯ ತವರಿನಲ್ಲಿ ಆಡಿದ ಅಂತಿಮ ಏಕದಿನ ಪಂದ್ಯವಾಗಿದೆ.

ತಮ್ಮ ನಿವೃತ್ತಿಯ ನಿರ್ಧಾರದ ಬಗ್ಗೆ ರಾಸ್ ಟೇಲರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. "ಇದೊಂದು ಅದ್ಭುತವಾದ ಪ್ರಯಾಣವಾಗಿತ್ತು. ನನಗೆ ಸಾಧ್ಯವಿರುವವರೆಗೆ ನನ್ನ ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದಕ್ಕೆ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ" ಎಂದು ಟೇಲರ್ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದಾರೆ.

"ಅನೇಕ ಶ್ರೇಷ್ಠ ಆಟಗಾರರ ಜೊತೆಗೆ ಹಾಗೂ ವಿರುದ್ಧವಾಗಿ ಆಡುವ ಅವಕಾಶ ನನಗೆ ದೊರೆತಿದೆ. ಈ ಹಾದಿಯುದ್ದಕ್ಕೂ ನನಗೆ ಸಾಕಷ್ಟು ಸ್ಮರಣೀಯ ಕ್ಷಣಗಳು ಹಾಗೂ ಗೆಳೆತನಗಳು ದೊರೆತಿದೆ. ಆದರೆ ಎಲ್ಲಾ ಉತ್ತಮ ಸಂಗತಿಗಳು ಒಂದು ದಿನ ಅಂತ್ಯವಾಗಬೇಕಿದೆ. ನನ್ನ ಪಾಲಿಗೆ ಇದು ಸೂಕ್ತವಾದ ಸಮಯ ಎನಿಸುತ್ತಿದೆ" ಎಂದು ರಾಸ್ ಟೇಲರ್ ಪ್ರಕಟಣೆಯಲ್ಲಿ ಬರೆದುಕೊಂಡಿದ್ದಾರೆ.

ರಾಸ್ ಟೇಲರ್ 2008ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದರು. ಇನ್ನು ಈವರೆಗೆ 233 ಏಕದಿನ ಪಂದ್ಯಗಳನ್ನು ಆಡಿರುವ ಅವರು ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು 2006ರಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಆಡಿದ್ದರು. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಕಿವೀಸ್ ಆಟಗಾರನಾಗಿ ರಾಸ್ ಟೇಲರ್ ನಿವೃತ್ತಿಯನ್ನು ಪಡೆದುಕೊಳ್ಳಲಿದ್ದಾರೆ. ಟೇಲರ್ ಟೆಸ್ಟ್ ಕ್ರಿಕೆಟ್‌ನಲ್ಲಿ 19 ಶತಕಗಳನ್ನು ಸಿಡಿಸಿದ್ದು 7584 ರನ್‌ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 8581 ರನ್‌ಗಳಿಸಿದ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 21 ಶತಕಗಳನ್ನು ಸಿಡಿಸಿರುವುದು ಕೂಡ ನ್ಯೂಜಿಲೆಂಡ್ ಪರ ದಾಖಲೆಯಾಗಿದೆ.

ಇನ್ನು ರಾಸ್ ಟೇಲರ್ ನ್ಯೂಜಿಲೆಂಡ್ ತಂಡದ ಪರವಾಗಿ 102 ಟಿ20 ಪಂದ್ಯಗಳನ್ನು ಆಡಿದ್ದು ನ್ಯೂಜಿಲೆಂಡ್ ತಂಡದ ಪರವಾಗಿ ಎಲ್ಲಾ ಮಾದರಿಯಲ್ಲಿಯೂ 100ಕ್ಕೂ ಅಧಿಕ ಪಂದ್ಯಗಳನ್ನು ಆಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನು ಹೊಂದಿದ್ದಾರೆ. ಈ ಬಗ್ಗೆ ಕಿವೀಸ್ ತಂಡದ ಕೋಚ್ ಗ್ಯಾರಿ ಸ್ಟೀಡ್ ಪ್ರತಿಕ್ರಿಯಿಸಿದ್ದು ನ್ಯೂಜಿಲೆಂಡ್ ತಂಡ ಕಂಡ ಶ್ರೇಷ್ಠ ಆಟಗಾರರಲ್ಲಿ ರಾಸ್ ಟೇಲರ್ ಕೂಡ ಒಬ್ಬರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

Story first published: Thursday, December 30, 2021, 11:06 [IST]
Other articles published on Dec 30, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+