For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಮತ್ತು ತಂಡಗಳ ವಿವರ

New Zealand in India 2021: T20 and Test Series Full schedule and complete squad details

ಕಳೆದೊಂದು ತಿಂಗಳಿನಿಂದ ಯುಎಇಯಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ನವೆಂಬರ್‌ 14ರಂದು ನಡೆದ ಫೈನಲ್ ಪಂದ್ಯದ ಮೂಲಕ ಅಧಿಕೃತವಾಗಿ ತೆರೆಬಿದ್ದಿದೆ. ಈ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಕಾದಾಟವನ್ನು ನಡೆಸಿದವು. ಆರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗಿಂತ ಉತ್ತಮ ಪ್ರದರ್ಶನವನ್ನು ನೀಡಿದ ನ್ಯೂಜಿಲೆಂಡ್ ಸೂಪರ್ 12 ಹಂತದಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿಯೂ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಪ್ರವೇಶಿಸಿತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಂಕಾದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ನಿರಾಸೆಯಿಂದ ಟೂರ್ನಿಯಿಂದ ಹೊರ ಬಂದಿದೆ.

ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಎತ್ತಿಹಿಡಿಯುವ ಅವಕಾಶವನ್ನು ಅಂತಿಮ ಹಂತದಲ್ಲಿ ಕೈಚೆಲ್ಲಿದ ನ್ಯೂಜಿಲೆಂಡ್ ಇದೀಗ ಭಾರತ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಭಾರತಕ್ಕೆ ಬಂದು ತಲುಪಿದೆ. ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಮೊಣಕೈ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೇನ್ ವಿಲಿಯಮ್ಸನ್ ಬದಲು ನ್ಯೂಜಿಲೆಂಡ್ ತಂಡದ ಟಿಮ್ ಸೌಥಿ ಈ ಸರಣಿಯಲ್ಲಿ ನಾಯಕ ಸ್ಥಾನವನ್ನು ನಿರ್ವಹಿಸಲಿದ್ದಾರೆ. ಹಾಗೂ ಈ ಟಿ ಟ್ವೆಂಟಿ ಸರಣಿ ಮುಗಿದ ನಂತರ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಕೇನ್ ವಿಲಿಯಮ್ಸನ್ ಮರಳಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇತ್ತ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜಿನಾಮೆ ನೀಡಿದ್ದು ನೂತನ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಹಾಗೂ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಹೀಗೆ ರೋಹಿತ್ ಶರ್ಮಾ ನಾಯಕತ್ವದ ಮತ್ತು ರಾಹುಲ್ ದ್ರಾವಿಡ್ ತರಬೇತಿಯ ಅಡಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಚೊಚ್ಚಲ ಸರಣಿ ಇದಾಗಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ನಡುವೆ ನಡೆಯಲಿರುವ 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯ ಸಂಪೂರ್ಣ ಪಂದ್ಯಗಳ ಮಾಹಿತಿ ಈ ಕೆಳಕಂಡಂತಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲನೇ ಟಿ ಟ್ವೆಂಟಿ ಪಂದ್ಯ ನವೆಂಬರ್ 17ರಂದು ಜೈಪುರದಲ್ಲಿ ನಡೆಯಲಿದ್ದು ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 19ರಂದು ರಾಂಚಿಯಲ್ಲಿ ನಡೆಯಲಿದ್ದು ಈ ಪಂದ್ಯ ಕೂಡ ಸಂಜೆ 7 ಗಂಟೆಗೆ ಶುರುವಾಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರಂದು ಕೋಲ್ಕತಾದಲ್ಲಿ ನಡೆಯಲಿದ್ದು ಈ ಪಂದ್ಯ ಸಹ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನವೆಂಬರ್‌ 25ರಿಂದ ನವೆಂಬರ್‌ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಟಿ ಟ್ವೆಂಟಿ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್ , ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್ ಟಿ ಟ್ವೆಂಟಿ ತಂಡ: ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ, ಟಿಮ್ ಸೌಥಿ

ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ವಿಸಿ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಹಾ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ , ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ನ್ಯೂಜಿಲೆಂಡ್ ಟೆಸ್ಟ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್ವಿಲ್ಲೆ, ಟಿಮ್ ಸೌಥಿ, ರಾಸ್ ಟೇಲರ್, ವಿಲ್ ಯಂಗ್, ನೀಲ್ ವ್ಯಾಗ್ನರ್

Story first published: Tuesday, November 16, 2021, 18:52 [IST]
Other articles published on Nov 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+