ENG vs NZ: ತವರಿನಲ್ಲಿ ಇಂಗ್ಲೆಂಡ್ ಮುಂದೆ ಮಂಡಿಯೂರಿದ ನ್ಯೂಜಿಲೆಂಡ್
ನ್ಯೂಜಿಲೆಂಡ್ ಪ್ರವಾಸದಲ್ಲಿ ಇಂಗ್ಲೆಂಡ್ ಉತ್ತಮ ಆರಂಭವನ್ನು ಮಾಡಿದೆ. ಭಾನುವಾರ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಗೆದ್ದು ಬೀಗಿದೆ. ಮೂರು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಪ್ರವಾಸಿ ಇಂಗ್ಲೆಂಡ್ ಸೋಲಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ನಾಯಕ ಬ್ರೇಡನ್ ಕಾರ್ಸ್ ಪ್ರಮುಖ ಪಾತ್ರವಹಿಸಿದರು. ಅವರು ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 42 ರನ್‌ಗಳಿಗೆ 6 ವಿಕೆಟ್‌ಗಳನ್ನು ಪಡೆದರು. ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್ ಪಡೆಯನ್ನು 254 ರನ್‌ಗಳಿಗೆ ಕಟ್ಟಿ ಹಾಕಿತ್ತು. 104 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ಎರಡನೇ ಓವರ್‌ನಲ್ಲಿ ಜಾಕ್ ಕ್ರಾಲಿ ವಿಕೆಟ್ ಕಳೆದುಕೊಂಡಿತು. ಆಗ ಇಂಗ್ಲೆಂಡ್ ಕೇವಲ ಒಂದೇ ಒಂದು ಕಲೆ ಹಾಕಿತ್ತು. ಕ್ರಾಲಿ ಆರಂಭಿಕ ಔಟಾದ ಹೊರತಾಗಿಯೂ, ಇಂಗ್ಲೆಂಡ್ ನಿಧಾನವಾಗಿ ಬ್ಯಾಟಿಂಗ್ ಮಾಡಲಿಲ್ಲ. ಇಂಗ್ಲೆಂಡ್ ಬ್ಯಾಟರ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ನ್ಯೂಜಿಲೆಂಡ್‌ನ ಬೌಲರ್‌ಗಳ ಮೇಲೆ ಒತ್ತಡ ಹೇರಿದರು.

ಇಂಗ್ಲೆಂಡ್ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 27 ರನ್ ಗಳಿಸಿದರು. ಮತ್ತೊಂದೆಡೆ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಯುವ ಬ್ಯಾಟರ್ ಜಾಕೋಬ್ ಬೆತೆಲ್ 37 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಬಾರಿಸಿದರು. ಜೋ ರೂಟ್ ಕೂಡ ಉತ್ತಮವಾಗಿ ಬ್ಯಾಟಿಂಗ್ ಮಾಡಿ 15 ಎಸೆತಗಳಲ್ಲಿ ಅಜೇಯ 23 ರನ್ ಗಳಿಸಿದರು. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಬೆಥೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಖರೀದಿಸಿದೆ. ಇಂತಹ ಸಂದರ್ಭದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಬೆಥೆಲ್ ಆರ್‌ಸಿಬಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಡಬ್ಲ್ಯೂಟಿಸಿ ಅಂಕಪಟ್ಟಿ ಬದಲಾವಣೆ
ಕಿವೀಸ್ ವಿರುದ್ಧ ಇಂಗ್ಲೆಂಡ್ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಗೆಲುವಿನ ಹೊರತಾಗಿಯೂ ಇಂಗ್ಲೆಂಡ್ 6ನೇ ಸ್ಥಾನದಲ್ಲಿದೆ. ಆದರೆ ನ್ಯೂಜಿಲೆಂಡ್ ದೊಡ್ಡ ಹೊಡೆತವನ್ನು ಅನುಭವಿಸಿದೆ. ಇದೀಗ ಕಿವೀಸ್ ಪಡೆಗೆ ಫೈನಲ್ ತಲುಪುವ ಹಾದಿ ಕಠಿಣವಾಗಿದೆ. ಇತ್ತೀಚೆಗೆ ಭಾರತ ತಂಡವನ್ನು 3-0 ಅಂತರದಲ್ಲಿ ಸೋಲಿಸಿದ ನ್ಯೂಜಿಲೆಂಡ್ ಫೈನಲ್‌ಗೆ ಪ್ರವೇಶಿಸುವ ಪ್ರಬಲ ಸ್ಪರ್ಧಿಯಾಗಿದೆ. ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಕಿವೀಸ್ ಲೆಕ್ಕಚಾರ ಬದಲಾವಣೆ ಆಗಿದೆ. ಈಗ ಕಿವೀಸ್ ಡಬ್ಲ್ಯೂಟಿಸಿ ಫೈನಲ್ ತಲುಪಲು ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದೆ.
ಪ್ರಸ್ತುತ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಮತ್ತೊಂದೆಡೆ, ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಸ್ಥಾನಕ್ಕೆ ತಲುಪಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications