WTC Final: ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ನ್ಯೂಜಿಲೆಂಡ್!

ಸೌತಾಂಪ್ಟನ್: ಭಾರತ ವಿರುದ್ಧದ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಮಂಗಳವಾರ (ಜೂನ್ 16) 15 ಜನರ ತಂಡ ಪ್ರಕಟಿಸಿದೆ. ಗಾಯಕ್ಕೀಡಾಗಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ರಾಸ್ ಟೇಲರ್ ಸೇರಿದಂತೆ ಬಲಿಷ್ಠ ಆಟಗಾರರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಜೂನ್ 18-22ರ ವರೆಗೆ ಸೌತಾಂಪ್ಟನ್‌ನ ಏಜಸ್ ಬೌಲ್ ಸ್ಟೇಡಿಯಂನಲ್ಲಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಕುತೂಹಲಕಾರಿ ಕದನಕ್ಕೆ ಎರಡೂ ತಂಡಗಳು ಸಜ್ಜಾಗಿವೆ. ವಿರಾಟ್ ಕೊಹ್ಲಿ ಪಡೆ ಅಭ್ಯಾಸ ಪಂದ್ಯ ಮುಗಿಸಿ ತಯಾರಾಗಿದ್ದರೆ, ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮುಗಿಸಿದೆ.

ತಂಡದಲ್ಲಿ ಡೆವೊನ್ ಕಾನ್ವೇ
ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನೊಂದಿಗೆ ಪಾದಾರ್ಪಣೆ ಮಾಡಿದ್ದ ಡೆವೊನ್ ಕಾನ್ವೇ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್-ನ್ಯೂಜಿಲೆಂಡ್ ಆರಂಭಿಕ ಟೆಸ್ಟ್‌ನಲ್ಲಿ ಕಾನ್ವೇ 200 ರನ್ ಬಾರಿಸಿ ಗಮನ ಸೆಳೆದಿದ್ದರು. ಮೊಣಕೈ ಗಾಯಕ್ಕೀಡಾಗಿದ್ದ ನಾಯಕ ಕೇನ್ ವಿಲಿಯಮ್ಸನ್ ಕೂಡ ಸಮಪೂರ್ಣ ಚೇತರಿಸಿಕೊಂಡು, ಪ್ರಕಟಿತ ತಂಡದಲ್ಲಿದ್ದಾರೆ.

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕಿವೀಸ್ ತಂಡ
ಕೇನ್ ವಿಲಿಯಮ್ಸನ್ (ಸಿ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ಬಿಜೆ ವಾಟ್ಲಿಂಗ್, ವಿಲ್ ಯಂಗ್.

ಟೆಸ್ಟ್ ಚಾಂಪ್ಸ್, ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್ (ಫಿಟ್ನೆಸ್ ಆಧರಿಸಿ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್; ಫಿಟ್ನೆಸ್ ಆಧರಿಸಿ).
ಮೀಸಲು ಆಟಗಾರರು: ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಅರ್ಜನ್ ನಾಗ್ವಾಸ್ವಾಲಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications