Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್ ಪರ ವಿಶ್ವಕಪ್‌ನಲ್ಲಿ ದಾಖಲೆ ಬರೆದ ವೇಗಿ ಟ್ರೆಂಟ್ ಬೋಲ್ಟ್

ನ್ಯೂಜಿಲೆಂಡ್ ತಂಡ ಶ್ರೀಲಂಕಾ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹತ್ವದ ಪಂದ್ಯದಲ್ಲಿ ಸೆಣೆಸಾಟ ನಡೆಸುತ್ತಿದೆ. ಸೆಮಿಫೈನಲ್ ಪ್ರವೇಶಕ್ಕೆ ಈ ಪಂದ್ಯದಲ್ಲಿ ಕಿವೀಸ್ ಪಡೆಗೆ ಗೆಲುವು ಅಗತ್ಯವಾಗಿದ್ದು ಅದಕ್ಕಾಗಿ ಹೋರಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಕಿವೀಸ್ ತಮಡದ ವೇಗದ ಬೌಲರ್ ಟ್ರೆಂಟ್ ಬೋಲ್ಟ್ ಪ್ರಮುಖ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಬೋಲ್ಟ್ 50 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಸಾಧನೆ ಮಾಡಿದ ನ್ಯೂಜಿಲೆಂಡ್‌ನ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ಸಾರ್ವಕಾಲಿಕ ಪಟ್ಟಿಯಲ್ಲಿ ಚಾಮಿಂಡಾ ವಾಸ್ ಅವರನ್ನು ಹಿಂದಿಕ್ಕಿ ಆರನೇ ಸ್ಥಾನಕ್ಕೆ ಏರಿದ್ದಾರೆ ಕಿವೀಸ್ ಪಡೆಯ ಈ ಅನುಭವಿ ವೇಗದ ಬೌಲರ್.

New Zealand pacer Trent Boult becomes first kiwis bowler to get to 50 World Cup wickets

ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಬೋಲ್ಟ್ 13 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಹಾಗಿದ್ದರೂ ಈ ಟೂರ್ನಿ ಅವರ ಪಾಲಿಗೆ ಉತ್ತಮವಾಗಿರಲಿಲ್ಲ. ಈ ಎಡಗೈ ವೇಗದ ಬೌಲರ್ ಈ ಟೂರ್ನಿಯಲ್ಲಿ 9 ಪಂದ್ಯಗಳಲ್ಲಿ ಆಡಿದ್ದು ಇದರಲ್ಲಿ 31 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 411 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಕಿವೀಸ್ ಪಡೆಗೆ ಬೋಲ್ಟ್ ಪರಿಣಾಮಕಾರಿಯಾಗಿರಲಿಲ್ಲ.

ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಶ್ರೀಲಂಕಾ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿದೆ. ಈ ಪಂದ್ಯದಲ್ಲಿಯೂ ಅತ್ಯಂತ ನೀರಸವಾದ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಶ್ರೀಲಂಕಾ ತಂಡ ಕಿವೀಸ್ ಪಡೆಗೆ ಸುಲಭ ಸವಾಲನ್ನು ಮುಂದಿಟ್ಟಿದೆ.

ಶ್ರೀಲಂಕಾ ತಂಡದ ಪರವಾಗಿ ಕುಸಾಲ್ ಪೆರೆರ ಮಾತ್ರವೇ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಪೆರೆರ 28 ಎಸೆತಗಳ್ನು ಎದುರಿಸಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 51 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಉಳಿದಂತೆ ಯಾವ ಬ್ಯಾಟರ್ ಕೂಡ ಉತ್ತಮ ಪ್ರದರ್ಶನ ನೀಡಲು ಸಫಲವಾಗಲಿಲ್ಲ. ಇನ್ನು ನ್ಯೂಜಿಲೆಂಡ್ ತಂಡದ ಪರವಾಗಿ ಟ್ರೆಂಟ್ ಬೋಲ್ಟ್ ಈ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದರು.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಇಶ್ ಸೋಧಿ, ಕೈಲ್ ಜೇಮಿಸನ್, ಜೇಮ್ಸ್ ನೀಶಮ್, ವಿಲ್ ಯಂಗ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ
ಬೆಂಚ್: ಕಸುನ್ ರಜಿತ, ದಿಮುತ್ ಕರುಣಾರತ್ನ, ದುಶನ್ ಹೇಮಂತ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ

Story first published: Thursday, November 9, 2023, 16:57 [IST]
Other articles published on Nov 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+