IND vs NZ: ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಪೆಟ್ಟು: ವೇಗಿಗೆ ಗಾಯ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯ, ಮಾರ್ಚ್ 9 ರಂದು ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸ್ಟಾರ್ ಆಟಗಾರರು ಅಖಾಡ ಪ್ರವೇಶಿಸಲಿದ್ದಾರೆ. ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ಸ್ಥಿರ ಪ್ರದರ್ಶನ ನೀಡಿದೆ. ಈ ವೇಳೆ ಲೀಗ್ ಹಂತದ ಒಂದೇ ಒಂದು ಪಂದ್ಯವನ್ನು ಟೀಮ್ ಇಂಡಿಯಾ ಸೋಲು ಕಂಡಿದೆ. ಈ ಪಂದ್ಯಕ್ಕೂ ಮುನ್ನ, ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕ್ಯಾಚ್ ತೆಗೆದುಕೊಳ್ಳುವಾಗ ಗಾಯಗೊಂಡಿದ್ದು, ನ್ಯೂಜಿಲೆಂಡ್ ತಂಡದ ಚಿಂತೆಯನ್ನು ದ್ವಿಗುಣಗೊಳಿಸಿದೆ.
ಈ ಸ್ಟಾರ್ ಪ್ಲೇಯರ್ ಈಗಾಗಲೇ ಟೀಮ್ ಇಂಡಿಯಾದ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ ಐದು ವಿಕೆಟ್ ಪಡೆದು ಅಬ್ಬರಿಸಿದ್ದರು. ಆದರೆ ಇವರು ಈಗ ಫೈನಲ್ ಪಂದ್ಯದಲ್ಲಿ ಆಡುವ ಬಗ್ಗೆ ಅನುಮಾನಗಳು ಹುಟ್ಟಿವೆ. ಕಿವೀಸ್ ತಂಡದ ವೇಗಿ ಮ್ಯಾಟ್ ಹೆನ್ರಿ ಅವರ ಫಿಟ್ನೆಸ್ ಬಗ್ಗೆ ಇನ್ನು ಯಾವುದೇ ಸ್ಪಷ್ಟತೆ ಇಲ್ಲ. ಈಗ ಕಿವೀಸ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್, ವೇಗಿ ಹೆನ್ರಿಯ ಫಿಟ್ನೆಸ್ ಬಗ್ಗೆ ದೊಡ್ಡ ಅಪ್‌ಡೇಟ್ ಸಿಕ್ಕಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ಮಾತನಾಡಿರುವ ಮಿಚೆಲ್ ಸ್ಯಾಂಟ್ನರ್, ಅವರ ಭುಜದ ಗಾಯದ ಬಗ್ಗೆ ಸಂಪೂರ್ಣ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕಾಯುತ್ತಿದ್ದೇವೆ. ಹೆನ್ರಿ ಈಗಲೂ ನೋವಿನಿಂದ ಬಳಲುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಅವರು ಚೇತರಿಕೆಗಾಗಿ ಕಾಯಬೇಕು.
ಆಗಿದ್ದೇನು?
ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ಮಿಡ್-ಆನ್‌ನಲ್ಲಿ ಕ್ಯಾಚ್ ಪಡೆದರು. ಈ ಕ್ಯಾಚ್ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಈ ಕ್ಯಾಚ್ ಪಡೆಯುವಾಗ ಹೆನ್ರಿ ಗಾಯಗೊಂಡರು. ಕ್ಯಾಚ್ ಪಡೆದು ಎದ್ದು ನಿಂತಾಗ ಅವರು ಭುಜವನ್ನು ಹಿಡಿದುಕೊಂಡೇ ಎದ್ದು ನಿಂತರು. ಇದಾದ ಬಳಿಕ ಬೌಲಿಂಗ್ ನಡೆಸಿದರೂ, ನೋವಿನಿಂದ ಬಳಲುತ್ತಿದ್ದರು. ಸೆಮೀಸ್‌ನಲ್ಲಿ ಹೆನ್ರಿ ಒಟ್ಟು 7 ಓವರ್‌ಗಳನ್ನು ಬೌಲ್ ಮಾಡಿದರು, ಅದರಲ್ಲಿ ಅವರು 43 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು.

ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಮ್ಯಾಟ್ ಹೆನ್ರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮಾರ್ಚ್ 2 ರಂದು ದುಬೈನಲ್ಲಿ ನಡೆದಿದ್ದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದ್ದರು. ಈ ವೇಳೆ ಇವರು 32 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇವರು ಗಾಯಕ್ಕೆ ತುತ್ತಾಗಿರುವುದು ನಿಜಕ್ಕೂ ನ್ಯೂಜಿಲೆಂಡ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇವರು ಫೈನಲ್ ಪಂದ್ಯದಲ್ಲಿ ಆಡುವ ಬಗ್ಗೆ ಇನ್ನು ಸಸ್ಪೆನ್ನ ಮನೆ ಮಾಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications