For Quick Alerts
ALLOW NOTIFICATIONS  
For Daily Alerts
 

ಭರ್ಜರಿ 10 ವರ್ಷಗಳ ಬಳಿಕ ಈ ದೇಶಕ್ಕೆ ಪ್ರವಾಸ ಕೈಗೊಳ್ಳಲಿದೆ ನ್ಯೂಜಿಲೆಂಡ್

ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಎಲ್ಲಾ ತಂಡಗಳು ಕೂಡ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಈ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ಕೂಡ ಭಾರೀ ತಾಲೀಮು ನಡೆಸುತ್ತಿದೆ. ಬಲಿಷ್ಠ ತಂಡಗಳ ಪೈಕಿ ಒಂದಾಗಿರುವ ನ್ಯೂಜಿಲೆಂಡ್ ತಂಡ ಕೂಡ ವಿಶ್ವಕಪ್‌ನ ಸಿದ್ಧತೆಯ ಭಾಗವಾಗಿ ಪ್ರಮುಖ ದ್ವಿಪಕ್ಷಿಯ ಸರಣಿಯೊಂದರಲ್ಲಿ ಭಾಗವಹಿಸಲಿದೆ.

ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಈ ಸರಣಿ ಬಾರತದಕ್ಕಿ ನಡೆಯಲಿರುವ ವಿಶ್ವಕಪ್‌ಗೆ ಸಿದ್ಧತೆಯ ಭಾಗವಾಗಿ ಆಯೋಜಿಸಲಾಗಿದೆ. ಕುತೂಹಲಕಾರಿ ಎಂದರೆ ನ್ಯೂಜಿಲೆಂಡ್ ತಂಡ 2013ರ ಬಳಿಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು ಭರ್ತಿ ಒಂದು ದಶಕದ ಬಳಿಕ ಏಷ್ಯಾದ ರಾಷ್ಟ್ರಕ್ಕೆ ಪ್ರಯಾಣಿಸಲಿದೆ.

New Zealand set to tour to Bangladesh after ten-year long gap

ಅಕ್ಟೋಬರ್ 5ರಿಂದ ವಿಶ್ವಕಪ್ ಟೂರ್ನಿ ಪ್ರಾರಂಭವಾಗಲಿದ್ದು ಉಭಯ ರಾಷ್ಟ್ರಗಳ ನಡುವಿನ ಈ ಸರಣಿ ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಎರಡೂ ತಂಡಗಳು ತಮ್ಮ ಸಿದ್ಧತೆಗಳನ್ನು ಉತ್ತಮಗೊಳಿಸಲು ಮತ್ತು ಭಾರತದಲ್ಲಿ ನಡೆಯಲಿರುವ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ತಮ್ಮ ತಂಡದ ಸಂಯೋಜನೆಯನ್ನು ಅಂತಿಮಗೊಳಿಸಲು ಇದು ಮಹತ್ವ ಪಡೆದುಕೊಳ್ಳಲಿದೆ. ಎಲ್ಲಾ ಮೂರು ಏಕದಿನ ಪಂದ್ಯಗಳು ಕೂಡ ಮೀರ್‌ಪುರದ ಐಕಾನಿಕ್ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ.

ಇನ್ನು ನ್ಯೂಜಿಲೆಂಡ್ ತಂಡದ ಈ ಪ್ರವಾಸ ಕೇವಲ ಮೂರು ಏಕದಿನ ಪಂದ್ಯಗಳಿಗೆ ಸೀಮಿತವಾಗಿಲ್ಲ. ಟೆಸ್ಟ್ ಸರಣಿಯಲ್ಲಿ ಕೂಡ ಎರಡು ತಂಡಗಳು ಭಾಗಿಯಾಗಲಿದೆ. ಆದರೆ ಎರಡು ಪಂದ್ಯಗಳ ಈ ಟೆಸ್ಟ್ ಸರಣಿ ವಿಶ್ವಕಪ್ ಟೂರ್ನಿಯ ಬಳಿಕ ಆಯೋಜನೆಯಾಗಲಿದ್ದು ಇದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-25ರ ಆವೃತ್ತಿಯ ಭಾಗವಾಗಿದೆ ಎಂಬುದು ಗಮನಾರ್ಹ. ಈ ಟೆಸ್ಟ್ ಪಂದ್ಯಗಳು ಆಯೋಜನೆಯಾಗುವ ತಾಣಗಳನ್ನು ಇನ್ನು ಕೂಡ ಪ್ರಕಟಿಸಿಲ್ಲ.

2019ರಲ್ಲಿ ನಡೆದ ಈ ಹಿಂದಿನ ಏಕದಿನ ವಿಶ್ವಕಪ್ ಟೂರ್ನಿಯ ರನ್ನರ್‌ಅಪ್ ತಂಡವಾಗಿರುವ ನ್ಯೂಜಿಲೆಂಡ್ ತಂಡ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 5ರಂದು ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಇತ್ತ ಶಕೀಬ್-ಅಲ್-ಹಸನ್ ನೇತೃತ್ವದ ತಂಡ ಅಕ್ಟೋಬರ್ 7 ಶನಿವಾರದಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸೆಣೆಸಾಡುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

Story first published: Thursday, August 17, 2023, 16:07 [IST]
Other articles published on Aug 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+