ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧ ಟಿ20 ಹಾಗೂ ಟೆಸ್ಟ್ ಸರಣಿ ಆಡಲು ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್

New Zealand squad arrives in Jaipur for series against India after t20 World Cup Final

ಐಸಿಸಿ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡ ಒಂದು ದಿನದ ನಂತರ ನ್ಯೂಜಿಲೆಂಡ್ ತಂಡ ಭಾರತಕ್ಕೆ ಬಂದು ಇಳಿದಿದೆ. ಟಿ20 ಸರಣಿಯ ಮೊದಲ ಪಂದ್ಯ ಜೈಪುರದಲ್ಲಿ ನಡೆಯಲಿರುವ ಕಾರಣ ಕಿವೀಸ್ ಪಡೆ ಚಾರ್ಟರ್ ವಿಮಾನದಲ್ಲಿ ದುಬೈನಿಂದ ನೇರವಾಗಿ ಜೈಪುರಕ್ಕೆ ಬಂದಿಳಿದಿದೆ. ಬಬಲ್‌ನಿಂದ ಬಬಲ್‌ಗೆ ಸ್ಥಳಾಂತರವಾಗುತ್ತಿರುವ ಕಾರಣದಿಂದಾಗಿ ನ್ಯೂಜಿಲೆಂಡ್ ತಂಡ ಭಾರತದಲ್ಲಿ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯವಿಲ್ಲ. ಟಿ20 ಸರಣಿಯ ಮೊದಲ ಪಂದ್ಯ ಬುಧವಾರ ನಡೆಯಲಿದೆ.

"ನ್ಯೂಜಿಲೆಂಡ್ ತಂಡದ ಆಟಗಾರರು ಸೋಮವಾರ ಸಂಜೆಯೇ ಜೈಪುರಕ್ಕೆ ಬಂದಿಳಿದಿದ್ದಾರೆ. ನಿಯಮದ ಪ್ರಕಾರ ಎಲ್ಲಾ ಆಟಗಾರರು ಕೂಡ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಮಂಗಳವಾರ ತಮ್ಮ ಅಭ್ಯಾಸವನ್ನು ನ್ಯೂಜಿಲೆಂಡ್ ತಂಡ ನಡೆಸಲಿದೆ" ಎಂದು ರಾಜಸ್ಥಾನ್ ಕ್ರಿಕೆಟ್ ಅಸೋಸಿಯೇಶನ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಡ್ರೆಸ್ಸಿಂಗ್ ರೂಂನಲ್ಲಿ ಆಸ್ಟ್ರೇಲಿಯಾದ ಸಂಭ್ರಮಾಚರಣೆ ಅಸಹ್ಯ ಹುಟ್ಟಿಸುವಂತಿತ್ತು: ಶೋಯೆಬ್ ಅಕ್ತರ್ಡ್ರೆಸ್ಸಿಂಗ್ ರೂಂನಲ್ಲಿ ಆಸ್ಟ್ರೇಲಿಯಾದ ಸಂಭ್ರಮಾಚರಣೆ ಅಸಹ್ಯ ಹುಟ್ಟಿಸುವಂತಿತ್ತು: ಶೋಯೆಬ್ ಅಕ್ತರ್

ನ್ಯೂಝಿಲೆಂಡ್ ತಂಡ ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸಿ 8 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿತು. ಈ ಸೊಳಿನ ನಂತರ ಮತ್ತೊಂದು ಸರಣಿಗೆ ಎರಡು ದಿನಗಳ ಅಂತರದಲ್ಲಿ ಸಜ್ಜಾಗುವುದು ಕಿವೀಸ್ ಪಡೆಗೆ ಸವಾಲಾಗಲಿದೆ. ಭಾರತದಲ್ಲಿ ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲಿಗೆ ಭಾಗಿಯಾಗಲಿದೆ.

ಟಿ20 ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತಯೇ ತಕ್ಷಣವೇ ಮತ್ತೊಂದು ಸರಣಿಗೆ ಇಷ್ಟು ಬೇಗನೇ ಆಡುವ ಸಂದರ್ಭ ಬಹುಶಃ ನನಗೆ ನೆನಪಿರುವಂತೆ ಇದೇ ಮೊದಲು. ಇದು ಖಂಡಿತವಾಗಿಯೂ ಕಠಿಣ ಹಾಗೂ ಸವಾಲಿನಿಂದ ಕೂಡಿದೆ. ಆದರೆ ಈ ಸವಾಲು ನಮ್ಮ ಮುಂದಿದ್ದು ಇದನ್ನು ನಾವು ಮಾಡಲೇಬೇಕಿದೆ" ಎಂದಿದ್ದಾರೆ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಕೋಚ್ ಗ್ಯಾರಿ ಸ್ಟೀಡ್. ಹೀಗೆ ಕಿವೀಸ್ ಕೋಚ್ ತಮ್ಮ ತಂಡದ ಒತ್ತಡದ ವೇಳಾಪಟ್ಟಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದ 9 ಟೆಸ್ಟ್ ತಂಡದ ಸದಸ್ಯರು ಕಳೆದ ವಾರವೇ ಭಾರತಕ್ಕೆ ಬಂದಿಳಿದಿದ್ದರು. ಅನುಭವಿ ರಾಸ್ ಟೇಯ್ಲರ್ ಹಾಗೂ ಟಾಮ್ ಲ್ಯಾಥಮ್ ಕೂಡ ಈಗಾಗಲೇ ಭಾರತವನ್ನು ತಲುಪಿದ್ದು ಅಭ್ಯಾಸದಲ್ಲಿ ನಿರವಾಗಿದ್ದಾರೆ.

ಮತ್ತೊಂದೆಡೆ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಕೂಡ ವಿಫಲವಾಗುವ ಮೂಲಕ ಸೂಪರ್ 12 ಹಂತದಲ್ಲಿಯೇ ತನ್ನ ಹೋರಾಟವನ್ನು ಅಂತ್ಯಗೊಳಿಸಿತು. ಟೀಮ್ ಇಂಡಿಯಾ ತನ್ನ ಮೊದಲ ಅಭ್ಯಾಸವನ್ನು ಸೋಮವಾರ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ನಡೆಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೂರು ಪಂದ್ಯಗಳು ಬುಧವಾರ, ಶುಕ್ರವಾರ ಹಾಘೂ ಭಾನುವಾರ ನಡೆಯಲಿದೆ. ಈ ಚುಟುಕು ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ಕೂಡ ಆಯೋಜನೆಯಾಗಲಿದೆ.

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆ

ಟೀಮ್ ಇಂಡಿಯಾ ಟಿ20 ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್ , ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್ ಟಿ20 ಸ್ಕ್ವಾಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ ಮತ್ತು ಟಿಮ್ ಸೌಥಿ

Boot ಗಳಲ್ಲಿ ಬಿಯರ್ ಕುಡಿದು ಸಂಭ್ರಮಿಸಿದ ಆಸೀಸ್ ಆಟಗಾರರ ವಿಡಿಯೋ ವೈರಲ್ | Oneindia Kannada

Story first published: Tuesday, November 16, 2021, 10:23 [IST]
Other articles published on Nov 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X