Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ ಪ್ರವಾಸದಿಂದ ಹೊರಗುಳಿಯಲಿದ್ದಾರೆ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್, ಕೋಚ್ ಗ್ಯಾರಿ ಸ್ಟೀಡ್

New Zealand tour to India: Kane Williamson, head coach Gary Stead will skip ODI series against India

ಮುಂದಿನ ವರ್ಷಾರಂಭದಲ್ಲಿ ನ್ಯೂಜಿಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು ಟಿ20 ಹಾಗೂ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ. ಈ ಪ್ರವಾಸದಿಂದ ನ್ಯೂಜಿಲೆಂಡ್ ತಂಡದ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಹಾಗೂ ನ್ಯೂಜಿಲೆಂಡ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಹೊರಗುಳಿಯಲಿದ್ದಾರೆ. ಆಟಗಾರರ ಹಾಗೂ ಸಿಬ್ಬಂದಿಗಳ ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ನ್ಯೂಜಿಲೆಂಡ್ ಕ್ರಿಕೆಟ್ ಈ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಿದ್ದು ಕೇನ್ ವಿಲಿಯಮ್ಸನ್ ಅಲಭ್ಯತೆಯಲ್ಲಿ ಟಾಮ್ ಲಾಥಮ್ ಈ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಪ್ರವಾಸಕ್ಕೆ ನ್ಯೂಜಿಲೆಂಡ್ ತಂಡವನ್ನು ಆಯ್ಕೆ ಮಾಡಿಲಾಗಿದೆ. ವಿಲಿಯಮ್ಸನ್ ಜೊತೆಗೆ ಜೋಚ್ ಗ್ಯಾರಿ ಸ್ಡೀಡ್, ಅನುಭವಿ ವೇಗಿ ಟಿಮ್ ಸೌಥಿ ಕೂಡ ಭಾರತ ಪ್ರವಾಸದಿಂದ ಹೊರಗುಳಿಯಲಿದ್ದಾರೆ.

ಲೆಗ್ ಸ್ಪಿನ್ನರ್ ಇಶ್ ಸೋಧಿ ಮತ್ತು ಬ್ಯಾಟರ್ ಹೆನ್ರಿ ನಿಕೋಲ್ಸ್ ಅವರನ್ನು ಎರಡೂ ಪ್ರವಾಸಗಳಿಗೆ ಏಕದಿನ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಇನ್ನು ಅನ್‌ಕ್ಯಾಪ್ಡ್ ಆಲ್‌ರೌಂಡರ್ ಹೆನ್ರಿ ಶಿಪ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಮೊಸಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಸ್ವೀಕರಿಸಿದ್ದಾರೆ.

ಭಾರತ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲೆಂಡ್ ತಂಡ: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಮೈಕಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ

ಇನ್ನು ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲೆಂಡ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಭಾಗವಹಿಸಲಿದ್ದು ಈ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಪಾಕ್ ಪ್ರವಾಸಕ್ಕೆ ಆಯ್ಕೆಯಾದ ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್(ನಾಯಕ), ಟಾಮ್ ಲ್ಯಾಥಮ್ , ಫಿನ್ ಅಲೆನ್, ಮೈಕಲ್ ಬ್ರೇಸ್ವೆಲ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ , ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಟಿಮ್ ಸೌಥಿ

Story first published: Monday, December 19, 2022, 23:20 [IST]
Other articles published on Dec 19, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+