Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ನ್ಯೂಜಿಲ್ಯಾಂಡ್: ಆಕ್ಲೆಂಡ್‌ನಲ್ಲಿ 'ಮಿಣಿಮಿಣಿ' ಮಿಂಚಿದ ಭಾರತ

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ.

ನ್ಯೂಜಿಲ್ಯಾಂಡ್ ನೀಡಿದ ಬೃಹತ್ ಟಾರ್ಗೆಟನ್ನು ಬೆನ್ನತ್ತಿದ ಟೀಮ್ ಇಂಡಿಯಾ ನಾಲ್ಕು ವಿಕೆಟ್ ಕಳೆದುಕೊಂಡು ವಿಜಯೋತ್ಸವವನ್ನು ಆಚರಿಸಿದೆ. ಟೀಮ್ ಇಂಡಿಯಾ ಪರವಾಗಿ ಕೆ.ಎಲ್ ರಾಹುಲ್(56ರನ್ 27 ಎಸೆತ) ಮತ್ತು ಶ್ರೇಯಸ್ ಅಯ್ಯರ್ (58ರನ್ 29ಎಸೆತ) ಸ್ಪೋಟಕ ಅರ್ಧ ಶತಕ ಸಿಡಿಸಿ ತಂಡದ ಗೆಲುವನ್ನು ಸುಲಭವಾಗಿಸಿದರು.

ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಬೇಗನೆ ಕಳೆದುಕೊಂಡರೂ ಎರಡನೇ ವಿಕೆಟ್‌ಗೆ ಕೆ.ಎಲ್ ರಾಹುಲ್ ಜೊತೆ ಸೇರಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದ್ಭುತ ಆಟವನ್ನಾಡಿದರು. 45ರನ್ ಬಾರಿಸಿದ ವಿರಾಟ್ ಕೊಹ್ಲಿ ಕೇವಲ 5 ರನ್‌ಗಳಿಂದ ಅರ್ಧ ಶತಕವನ್ನು ತಪ್ಪಿಸಿಕೊಂಡರು.

ಟೀಮ್ ಇಂಡಿಯಾ ಇನ್ನೂ ಒಂದು ಓವರ್ ಬಾಕಿ ಇದ್ದಂತೆಯೇ ಗೆದ್ದು ಬೀಗಿತು. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಸರಣಿಯಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ.

ಇದಕ್ಕೂ ಮುನ್ನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿತು. ಆಕ್ಲೆಂಡ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌, ಭಾರತಕ್ಕೆ 204 ರನ್‌ ಗುರಿ ನೀಡಿತ್ತು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲೆಂಡ್‌, ಮಾರ್ಟಿನ್ ಗಪ್ಟಿಲ್ 30, ಕಾಲಿನ್ ಮುನ್ರೋ 59, ನಾಯಕ ಕೇನ್ ವಿಲಿಯಮ್ಸನ್ 51 (26 ಎಸೆತ), ರಾಸ್ ಟೇಲರ್ ಅಜೇಯ 54 ರನ್‌ನೊಂದಿಗೆ 20 ಓವರ್‌ ಮುಕ್ತಾಯಕ್ಕೆ 5 ವಿಕೆಟ್ ನಷ್ಟದಲ್ಲಿ 203 ರನ್ ಮಾಡಿತು.

ಟೀಮ್ ಇಂಡಿಯಾ vs ನ್ಯೂಜಿಲ್ಯಾಂಡ್, ಮೊದಲ ಟಿ20, Live ಸ್ಕೋರ್‌ಕಾರ್ಡ್

1
46203

ಟೀಮ್ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಂ ದುಬೆ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ

ನ್ಯೂಜಿಲ್ಯಾಂಡ್ ಪ್ಲೇಯಿಂಗ್ XI: ಮಾರ್ಟಿನ್ ಗುಪ್ಟಿಲ್, ಕಾಲಿನ್ ಮುನ್ರೊ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಬ್ಲೇರ್ ಟಿಕ್ನರ್, ಟಿಮ್ ಸೌಥಿ, ಇಶ್ ಸೋಧಿ, ಹಮೀಶ್ ಬೆನೆಟ್

Story first published: Friday, January 24, 2020, 16:23 [IST]
Other articles published on Jan 24, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+