For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಸಂಪೂರ್ಣ ಸರಣಿಗೆ ವಿರಾಟ್ ಕೊಹ್ಲಿ ಅನುಮಾನ

New Zealand vs India: Virat Kohli may skip entire t20 and test series

ಟಿ20 ವಿಶ್ವಕಪ್‌ನಲ್ಲಿ ಭಾರತದ ಹೋರಾಟ ಸೂಪರ್ 12 ಹಂತಕ್ಕೆ ಮುಕ್ತಾಯವಾಗಿದೆ. ಇದೀಗ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತದ ಮುಂದಿನ ಸರಣಿಯತ್ತ ನೆಟ್ಟಿದೆ. ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಮೂರು ಟಿ20 ಹಾಗೂ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದೆ. ಸತತವಾಗಿ ಕ್ರಿಕೆಟ್‌ ಸರಣಿಗಳಲ್ಲಿ ಭಾಗಿಯಾಗುತ್ತಿರುವ ಕಾರಣದಿಂದಾಗಿ ಭಾರತ ತಂಡದ ಕೆಲ ಪ್ರಮುಖ ಆಟಗಾರರಿಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ವಿಶ್ರಾಂತಿಯನ್ನು ನೀಡುವ ಸಾಧ್ಯತೆಯಿದೆ. ಹೀಗಾಗಿ ವಿರಾಟ್ ಕೊಹ್ಲಿ ಕೂಡ ಮುಂಬರುವ ಟಿ20 ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ.

ಆದರೆ ಸತತವಾಗಿ ಕ್ರಿಕೆಟ್ ಆಡಿದ ಕಾರಣ ಟೀಮ್ ಇಂಡಿಯಾ ನಾಯಕ ಸಾಕಷ್ಟು ಬಳಲಿದ್ದು ಮತ್ತಷ್ಟಯ ಹೆಚ್ಚಿನ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ ಕೇವಲ ಟಿ20 ಸರಣಿಯಿಂದ ಮಾತ್ರವಲ್ಲ ಟೆಸ್ಟ್ ಸರಣಿಯಿಂದಲೂ ಸಂಪೂರ್ಣವಾಗಿ ಹೊರಗುಳಿಯುವ ಸಾಧ್ಯತೆಯಿದೆ. ಒತ್ತಡದ ಕಾರಣದಿಂದಾಗಿ ಟಿ20 ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಹೆಚ್ಚಿನ ವಿಶ್ರಾಂತಿ ಬಯಸುತ್ತಿದ್ದಾರೆ ಎನ್ನಲಾಗಿದೆ.

ಟಿ20 ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ: ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

ಬಿಸಿಸಿಐ ಮೂಲಗಳ ಮಾಹಿತಿಯ ಪ್ರಕಾರ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದು ಡಿಸೆಂಬರ್ 3ರಿಮದ ಆರಂಬವಾಗಲಿರುವ ಎರಡನೇ ಟೆಸ್ಟ್‌ಗೆ ಮುಂಬೈನಲ್ಲಿ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ನ್ಯೂಜಿಲೆಂಡ್ ವಿರುದ್ಧದ ಸಂಪೂರ್ಣ ಸರಣಿಯಿಂದಲೇ ವಿರಾಟ್ ಕೊಹ್ಲಿ ಹೊರಗುಳಿದರೂ ಅಚ್ಚರಿಯಿಲ್ಲ. ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡವನ್ನು ಕೂಡಿಕೊಳ್ಳಬಹುದು ಎಂಬ ವಿಶ್ಲೇಷಣೆ ಕೂಡ ಈಗ ಆರಂಭವಾಗಿದೆ.

ಇನ್‌ಸೈಡ್ ಸ್ಪೋರ್ಟ್ ವರದಿಯ ಪ್ರಕಾರ ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್‌ನ ಪಂದ್ಯದ ನಂತರ ವಿರಾಟ್ ಕೊಹ್ಲಿ ಹೆಚ್ಚಿನ ರಜಾ ಅವಧಿಗಾಗಿ ಮನವಿ ಮಾಡಿದ್ದು ಅವರಿಗೆ ಅನುಮತಿ ದೊರೆತಿದೆ ಎನ್ನಲಾಗಿದೆ. ಆದರೆ ವಿರಾಟ್ ಕೊಹ್ಲಿ ರಜಾ ಅವಧಿ ಯಾವಾಗ ಮುಕ್ತಾಯವಾಗಲಿದೆ ಎಂಬುದು ಸ್ಪಷ್ಟವಿಲ್ಲ. ಬಿಸಿಸಿಐ ಅಧಿಕಾರಿಯೊಬ್ಬರ ಹೇಳಿಕೆಯನ್ನು ಇನ್‌ಸೈಡ್ ಸ್ಪೋರ್ಟ್ ಉಲ್ಲೇಖಿಸಿ ವರದಿ ಮಾಡಿದೆ. "ವಿರಾಟ್ ಕೊಹ್ಲಿ ಹೆಚ್ಚುವರಿ ರಜಾ ಅವಧಿಗಾಗಿ ಮನವಿ ಮಾಡಿದ್ದಾರೆ. ಅವರು ಮುಂಬೈನಲ್ಲಿ ನಡೆಯಲಿರುವ 2ನೇ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಲ್ಲಿ ನಾವಿದ್ದೇವೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ 2-1ರಿಂದ ಮುನ್ನಡೆ ಪಡೆದುಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ ಉತ್ತಮವಾಗಿ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ. ಆದರೆ ಈಗ ಅವರು ತಮ್ಮ ಬ್ಯಾಟಿಂಗ್ ಬಗ್ಗೆಯೂ ಗಮನಹರಿಸಬೇಕಿದೆ. ವಿರಾಟ್ ಕೊಹ್ಲಿಗೆ ಗಮನವನ್ನು ಕೇಂದ್ರೀಕರಿಸಲು ಹಾಗೂ ಮರಳಿ ಫಾರ್ಮ್ ಕಂಡುಕೊಳ್ಳಲು ಉತ್ತಮ ಸಮಯದ ಅಗತ್ಯವಿದೆ. ಕುಟುಂಬದೊಂದಿಗೆ ಅವರು ಸಮಯ ಕಳೆಯುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗಲಿದೆ" ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಹೇಳಿದ್ದಾರೆ.

ಟಿ20 ಹಾಗೂ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಮಧ್ಯೆ ಮೊದಲಿಗೆ ಟಿ20 ಸರಣಿ ನಡೆಯಲಿದೆ. ಮೊದಲ ಪಂದ್ಯ ನವೆಂಬರ್ 17ರಂದು ಜೈಪುರದಲ್ಲಿ ನಡೆಯಲಿದ್ದು ಎರಡನೇ ಪಂದ್ಯ ನವೆಂಬರ್ 19 ರಾಂಚಿಯಲ್ಲಿ ಆಯೋಜನೆಯಾಗಲಿದೆ. ಅಂತಿಮ ಟಿ20 ಪಂದ್ಯ ನವೆಂಬರ್ 21 ಕೋಲ್ಕತ್ತಾದಲ್ಲಿ ನಡೆಯಲಿದೆ. ಇನ್ನು ಎರಡು ಟೆಸ್ಟ್ ಪಂದ್ಯಗಳ ಪೈಕಿ ಮೊದಲ ಪಂದ್ಯ ಕಾನ್ಪುರದಲ್ಲಿ ನವೆಂಬರ್ 25-29ರವರೆಗೆ ನಡೆಯಲಿದೆ. ಎರಡನೇ ಪಂದ್ಯ ಮುಂಬೈ ಮುಂಬೈನಲ್ಲಿ ಡಿಸೆಂಬರ್ 3-7ವರೆಗೆ ನಡೆಯಲಿದೆ.

Story first published: Wednesday, November 10, 2021, 9:49 [IST]
Other articles published on Nov 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+